ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ.

ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

Related Posts

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!