ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ತಮ್ಮ ಮದುವೆ ಕಾರ್ಡ್ ವಿತರಣೆ ಆರಂಭ ಮಾಡಿದ್ದಾರೆ. ಆಮಂತ್ರಣ ಪತ್ರಿಕೆಯ ಪೂಜೆಯ ಬಳಿಕ ಮೊದಲ ಆಹ್ವಾನ ಪತ್ರಿಕೆಯನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ.
ಬಳಿಕ ಮಾಜಿ ಸಿಎಂ ಯಡಿಯೂರಪ್ಪ ಅವರಿಗೂ ಆಮಂತ್ರಣ ಪತ್ರಿಕೆ ನೀಡಿದ್ದಾರೆ.
ಡಾಲಿ ಧನಂಜಯ್ ಕೆಲವು ದಿನಗಳ ಹಿಂದಷ್ಟೆ ವೈದ್ಯೆ ಧನ್ಯತಾ ಅವರೊಟ್ಟಿಗೆ ಹಾಸನದ ತಮ್ಮ ಮನೆಯಲ್ಲಿ ನಿಶ್ಚಿತಾರ್ಥ ಮಾಡಿಕೊಂಡರು. ಇದೀಗ ಡಾಲಿಯ ಮದುವೆ ದಿನಾಂಕ ನಿಗದಿ ಆಗಿದೆ.
ಡಾಲಿ ಧನಂಜಯ್ ಹಾಗೂ ಧನ್ಯತಾ ಅವರ ಮದುವೆ ಆಮಂತ್ರಣ ಪತ್ರಿಕೆಯ ಪೂಜೆ ನೆರವೇರಿದ್ದು, ಮೊದಲ ಆಮಂತ್ರಣ ಪತ್ರಿಕೆಯನ್ನು ಕರ್ನಾಟಕ ರಾಜ್ಯದ ಸಿಎಂ ಸಿದ್ದರಾಮಯ್ಯ ಅವರಿಗೆ ನೀಡಿದ್ದಾರೆ ಡಾಲಿ.
ಆ ನಂತರ ಈ ಜೋಡಿ ಕರ್ನಾಟಕದ ಮಾಜಿ ಸಿಎಂ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಅವರಿಗೂ ಸಹ ಮದುವೆ ಆಮಂತ್ರಣ ಪತ್ರಿಕೆ ನೀಡಿದ್ದಾರೆ. ಯಡಿಯೂರಪ್ಪ ಅವರು ವಧು-ವರ ಜೊತೆಗೆ ಫೋಟೊ ತೆಗೆಸಿಕೊಂಡಿದ್ದಾರೆ.
ಕುಮಾರಸ್ವಾಮಿ ಅವರಿಗೂ ಆಹ್ವಾನ ಪತ್ರಿಕೆಯನ್ನು ಡಾಲಿ ಧನಂಜಯ್ ನೀಡಲಿದ್ದಾರೆ. ಆದರೆ ಕುಮಾರಸ್ವಾಮಿ ಅವರು ದೆಹಲಿಗೆ ತೆರಳಿರುವ ಕಾರಣ ಅವರು ಮರಳಿ ಬಂದ ಬಳಿಕ ಅವರನ್ನು ಭೇಟಿಯಾಗಿ ಆಹ್ವಾನ ಪತ್ರಿಕೆ ನೀಡಲಿದ್ದಾರೆ.
ಡಾಲಿ ಧನಂಜಯ್ ಮತ್ತು ಧನ್ಯತಾ ಅವರು ಫೆಬ್ರವರಿ 15 ಮತ್ತು 16 ರಂದು ಮೈಸೂರಿನ ಅರಮನೆ ಎದುರು ವಸ್ತು ಸಂಗ್ರಹಾಲಯ ಮೈದಾನದಲ್ಲಿ ಅದ್ಧೂರಿಯಾಗಿ ಮದುವೆ ಆಗಲಿದ್ದಾರೆ. ಭಾರಿ ಸಂಖ್ಯೆಯ ಸೆಲೆಬ್ರಿಟಿಗಳು ವಿವಾಹದಲ್ಲಿ ಭಾಗಹಿಸಲಿದ್ದಾರೆ.
ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…