ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ ಆಸ್ಟ್ರೇಲಿಯಾದ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್!
ವಾರ್ನರ್ ಮೈದಾನದಲ್ಲಿ ತಮ್ಮ ಹಳೆಯ ಪ್ರತಿಸ್ಪರ್ಧಿ ಮತ್ತು ಸ್ನೇಹಿತ ವಿರಾಟ್ ಕೊಹ್ಲಿಯೊಂದಿಗೆ ಆತ್ಮೀಯವಾಗಿ ಸಂಭಾಷಣೆ ನಡೆಸುತ್ತಿದ್ದರು. ಈ ಕ್ಷಣವು ವಾರ್ನರ್ ಅವರ ಅಂತರರಾಷ್ಟ್ರೀಯ ವೃತ್ತಿಜೀವನವನ್ನು ವ್ಯಾಖ್ಯಾನಿಸಿದ ಪರಸ್ಪರ ಗೌರವವನ್ನು ಪ್ರತಿಬಿಂಬಿಸುತ್ತದೆ. ಆಗಾಗ್ಗೆ ಮೈದಾನದಲ್ಲಿ ಮಾತಿನ ಚಕಮಕಿ ನಡೆಸಿದ್ದರು. ತಂಡದ ಸಹ ಆಟಗಾರರೊಂದಿಗೆ ಬಲವಾದ ಸಂಬಂಧವನ್ನು ನಿರ್ಮಿಸಿದ್ದಾರೆ.
ಡೇವಿಡ್ ವಾರ್ನರ್ ಆಸ್ಟ್ರೇಲಿಯಾ ಪರ 112 ಟೆಸ್ಟ್ ಪಂದ್ಯಗಳನ್ನಾಡಿದ್ದಾರೆ. 205 ಇನಿಂಗ್ಸ್ ಆಡಿರುವ ಅವರು 3 ದ್ವಿಶತಕ, 26 ಶತಕ ಹಾಗೂ 37 ಅರ್ಧಶತಕಗಳೊಂದಿಗೆ ಒಟ್ಟು 8786 ರನ್ ಕಲೆಹಾಕಿದ್ದಾರೆ. ಏಕದಿನ ಕ್ರಿಕೆಟ್ನಲ್ಲಿ ಆಸೀಸ್ ಪರ 161 ಪಂದ್ಯಗಳಲ್ಲಿ 159 ಇನಿಂಗ್ಸ್ ಆಡಿರುವ ಡೇವಿಡ್ ವಾರ್ನರ್ 6,932 ರನ್ ಕಲೆಹಾಕಿದ್ದಾರೆ. ಈ ವೇಳೆ 22 ಭರ್ಜರಿ ಶತಕ ಹಾಗೂ 33 ಅರ್ಧಶತಕಗಳನ್ನು ಬಾರಿಸಿದ್ದಾರೆ. ಆಸ್ಟ್ರೇಲಿಯಾ ಪರ 110 ಟಿ20 ಪಂದ್ಯಗಳನ್ನಾಡಿರುವ ಡೇವಿಡ್ ವಾರ್ನರ್ 3,277 ರನ್ ಕಲೆಹಾಕಿದ್ದಾರೆ. ಟಿ20 ಒಂದು ಶತಕ ಹಾಗೂ 28 ಅರ್ಧಶತಕಗಳನ್ನು ಬಾರಿಸಿದ್ದಾರೆ.
ಆಸ್ಟ್ರೇಲಿಯಾದ ಅನುಭವಿ ಆರಂಭಿಕ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ 2024ರ ಟಿ20 ವಿಶ್ವಕಪ್ ಟೂರ್ನಿಯಿಂದ ಆಸ್ಟ್ರೇಲಿಯಾ ಹೊರಬಂದ ಬೆನ್ನಲ್ಲೇ ಅಂತರಾಷ್ಟ್ರೀಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ.
ಆಸ್ಟ್ರೇಲಿಯನ್ ಕ್ರಿಕೆಟ್‌ನ ಇತಿಹಾಸದಲ್ಲಿ ವಾರ್ನರ್ ಎಲ್ಲಾ ಸ್ವರೂಪಗಳಲ್ಲಿ ಅತ್ಯುತ್ತಮ ಆಟಗಾರರಲ್ಲಿ ಒಬ್ಬರಾಗಿ ತಮ್ಮನ್ನು ತಾವು ಗುರುತಿಸಿಕೊಂಡಿದ್ದರು. ಒಂದು ದಶಕದ ಸುಪ್ರಸಿದ್ಧ ವೃತ್ತಿಜೀವನದ ಅಂತ್ಯದ ನಂತರ ಈ ನಿರ್ಧಾರವು ಬಂದಿದೆ. 37 ವರ್ಷದ ವಾರ್ನರ್ ಅವರು ಜನವರಿ 1, 2024ರಂದು ಏಕದಿನ ಕ್ರಿಕೆಟ್‌ಗೆ ವಿದಾಯ ಹೇಳಿದ್ದರು. ಅಲ್ಲದೆ ಜನವರಿ 6 ರಂದು ಕೊನೆಯ ಪಂದ್ಯವಾಡುವ ಮೂಲಕ ಟೆಸ್ಟ್ ಕ್ರಿಕೆಟ್ಗೂ ಗುಡ್ ಬೈ ಹೇಳಿದ್ದರು.