ಚಾಮರಾಜನಗರ: ಮಲೆಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದ ಕಾರು ಕೆರೆಗೆ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಕುಂತೂರು ಕೆರೆಯಲ್ಲಿ ನಡೆಯಿತು.
ಮೈಸೂರಿನಲ್ಲಿ ಟೆಲಿಕಾಲರ್ ಆಗಿ ಕೆಲಸ ಮಾಡುತ್ತಿದ್ದ ಶುಭಾ ಮತ್ತು ಕಾರು ಚಾಲಕ ಊರ್ಜಿತ್ ಮೃತಪಟ್ಟಿದ್ದಾರೆ. ಖಾಸಗಿ ರೆಸ್ಟೋರೆಂಟ್ನಲ್ಲಿ ಕೆಲಸ ಮಾಡುತ್ತಿರುವ ಮನಿತ್ ಎಂಬವರನ್ನು ರಕ್ಷಿಸಲಾಗಿದೆ.
ಶುಭಾ ಮತ್ತು ಮನಿತ್ ಮಹದೇಶ್ವರ ಬೆಟ್ಟಕ್ಕೆ ತೆರಳುತ್ತಿದ್ದಾಗ ತಡರಾತ್ರಿ ಕಾರು ನಿಯಂತ್ರಣ ತಪ್ಪಿ ಕುಂತೂರು ಕೆರೆಗೆ ಉರುಳಿದೆ.
ಮನಿತ್ ಕಾರಿನ ಬಾನೆಟ್ ಮೇಲೆ ನಿಂತು ಕೂಗುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಪೊಲೀಸರು ಹಾಗೂ ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಮನಿತ್ನನ್ನು ಕೆರೆಯಿಂದ ಮೇಲೆತ್ತಿದ್ದಾರೆ. ಆದರೆ ಶುಭಾ ಹಾಗೂ ಊರ್ಜಿತ್ ಸ್ಥಳದಲ್ಲೇ ಮೃತಪಟ್ಟಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ.
ಮಾಂಬಳ್ಳಿ ಪೊಲೀಸರು ಶವಗಳನ್ನು ಮರಣೋತ್ತರ ಪರೀಕ್ಷೆಗೆ ಸರ್ಕಾರಿ ಆಸ್ಪತ್ರೆಗೆ ರವಾನಿಸಿದ್ದಾರೆ.
ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!
ಹೊಸ ವರ್ಷದ ಮೊದಲ ದಿನದಂದು ತಿರುಪತಿ ತಿಮ್ಮಪ್ಪನ ದರ್ಶನಕ್ಕಾಗಿ ತಿರುಮಲಕ್ಕೆ ಭೇಟಿ ನೀಡಿದ್ದ ವ್ಯಕ್ತಿಯೊಬ್ಬರು ಎಲ್ಲರನ್ನು ತಮ್ಮತ್ತ ಸೆಳೆದರು. ಬೆಟ್ಟದ ಮೇಲಿದ್ದ ಭಕ್ತಾದಿಗಳೆಲ್ಲ ಆ ವ್ಯಕ್ತಿಯನ್ನು ನೋಡಿ ಆಶ್ಚರ್ಯಪಟ್ಟರು. ಆತ ಬೇರೆ ಯಾರೂ ಅಲ್ಲ, ತೆಲಂಗಾಣದ ಚಿನ್ನದ ಮನುಷ್ಯ ಎಂದೇ ಖ್ಯಾತರಾಗಿರುವ…