ಹುಬ್ಬಳ್ಳಿ :- ಸಕಾಲಕ್ಕೆ ಸೂಕ್ತ ಚಿಕಿತ್ಸೆ ಸಿಗದೆ ಹೊಟ್ಟೆಯಲ್ಲೇ ಮಗು ಮತ್ತು ಚಿಕಿತ್ಸೆ ಫಲಿಸದೆ ಗರ್ಭಿಣಿ ರಾಧಿಕಾ ಮಲ್ಲೇಶ್ ಗಡ್ಡಿಹೊಳಿ (19) ಸಾವು ಪ್ರಕರಣ ಸದ್ಯ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ. ಈ ಮಧ್ಯೆ ಪತ್ನಿ ಸಾವಿನ ಸುದ್ದಿ ತಿಳಿದು ವಿಷ ಸೇವಿಸಿ ಪತಿಯೂ ಆತ್ಮಹತ್ಯೆಗೆ ಯತ್ನಸಿರುವ ಘಟನೆ ನಡೆದಿದೆ. ಮಲ್ಲೇಶ್(25) ಆತ್ಮಹತ್ಯೆಗೆ ಯತ್ನಿಸಿದ ರಾಧಿಕಾ ಪತಿ. ಸದ್ಯ ಮಲ್ಲೇಶ್ಗೆ ಕಿಮ್ಸ್ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಕಳೆದ 2 ದಿನಗಳಿಂದ ಸಾವು-ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಬೆಳಗಾವಿ ಮೂಲದ ರಾಧಿಕಾ ಗಡ್ಡಿಹೊಳಿ ಸಾವಿನ ಮನೆ ಸೇರಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೇ ರಾಧಿಕಾ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಇಷ್ಟಕ್ಕೂ ರಾಧಿಕಾ ವಯಸ್ಸು ಕೇವಲ 19 ವರ್ಷ. ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಮೇಲಮಟ್ಟಿ ಗ್ರಾಮದವರು. ಎಂಟೂವರೆ ತಿಂಗಳ ಗರ್ಭಿಣಿ ಆಗಿದ್ದ ರಾಧಿಕಾಗೆ 6 ಬಾರಿ ಫಿಟ್ಸ್ ಬಂದಿತ್ತು. ಮೊನ್ನೆ ಭಾನುವಾರ ರಾತ್ರಿ 8 ಗಂಟೆ ಸುಮಾರಿಗೆ ಫಿಟ್ಸ್ ಬಂದು ಸೀರಿಯಸ್ ಆಗಿದ್ದರು. 2 ಆಸ್ಪತ್ರೆಗೆ ಅಲೆದರೂ ಸೂಕ್ತ ಸಮಯಕ್ಕೆ ಚಿಕಿತ್ಸೆ ಸಿಕ್ಕಿರಲಿಲ್ಲ. ಕೊನೆಗೆ ಬೆಳಗಾವಿಯ ಬಿಮ್ಸ್ಗೆ ಕರೆದುಕೊಂಡು ಬರುವಷ್ಟರಲ್ಲಿ ಶಿಶು ಗರ್ಭಿಣಿಯ ಹೊಟ್ಟೆಯಲ್ಲೇ ಮೃತಪಟ್ಟಿತ್ತು. ರಾಧಿಕಾ ಸ್ಥಿತಿಯೂ ಗಂಭೀರವಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿನ್ನೆ ಬಿಮ್ಸ್ ಆಸ್ಪತ್ರೆಯಿಂದ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿತ್ತು. ಆದರೆ ರಾಧಿಕಾ ಆರೋಗ್ಯದಲ್ಲಿ ತೀವ್ರ ಏರುಪೇರು ಉಂಟಾಗಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.
ಹುಬ್ಬಳ್ಳಿಯಲ್ಲಿ ಕಿಮ್ಸ್ ಆಸ್ಪತ್ರೆ ನಿರ್ದೇಶಕ ಎಸ್ಎಫ್ ಕಮ್ಮಾರ ಪ್ರತಿಕ್ರಿಯಿಸಿದ್ದು, ಬೆಳಗಾವಿಯಿಂದ ಕಿಮ್ಸ್ ಆಸ್ಪತ್ರೆ ಬಂದಾಗ ಗರ್ಭಿಣಿ ರಾಧಿಕಾ ಆರೋಗ್ಯ ಸ್ಥಿತಿ ಚಿಂತಾಜನಕವಾಗಿತ್ತು. ಬಿಪಿ, ನಾಡಿಮಿಡಿತ ಇರಲಿಲ್ಲ, ರಾಧಿಕಾ ಅವರಿಗೆ ಪ್ರಜ್ಞೆಯೇ ಇರಲಿಲ್ಲ. ಹೊಟ್ಟೆಯಲ್ಲಿ ಮಗುಯಿತ್ತು. ಗರ್ಭಪಾತ ಆಗಿರಲಿಲ್ಲ. ಆದರೆ ನಮ್ಮ ವೈದ್ಯರು ಸಕಾಲದಲ್ಲಿ ದಾಖಲಿಸಿಕೊಂಡು ಚಿಕಿತ್ಸೆ ನೀಡಿದ್ದಾರೆ.
ಸತ್ತ ಮಗು ರಾಧಿಕಾ ಹೊಟ್ಟೆಯಲ್ಲೇ ಇತ್ತು. ಅವರಿಗೆ ಪ್ರಜ್ಞೆ ಬಂದಾಗ ಗರ್ಭದಿಂದ ಮಗು ಹೊರ ತೆಗೆಯುವ ಆಲೋಚನೆ ಇತ್ತು. ಆದರೆ ಅವರ ಆರೋಗ್ಯ ಚೇತರಿಕೆ ಆಗಲೇ ಇಲ್ಲ. ಇಂದು ಬೆಳಗ್ಗೆ 11 ಗಂಟೆ ರಾಧಿಕಾ ಸಾವನ್ನಪ್ಪಿದ್ದಾರೆ. ಇದರಿಂದ ಮನನೊಂದು ಆಕೆ ಪತಿ ಮಲ್ಲೇಶಿ ಆತ್ಮಹತ್ಯೆ ಪ್ರಯತ್ನ ಮಾಡಿದ್ದು, ಆರೋಗ್ಯ ಸ್ಥಿತಿ ಚಿಂತಾಜನಕವಾಗಿದೆ. ಅವರಿಗೆ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಹೇಳಿದ್ದಾರೆ.
ನಿರ್ಮಿತಿ ಕೇಂದ್ರದ ಇಂಜಿನಿಯರ್ ಲಾಡ್ಜ್ನಲ್ಲಿ ಆ*ಹತ್ಯೆ, ಸಾ*ನ ಬಗ್ಗೆ ಸಾಕಷ್ಟು ಅನುಮಾನ.
ಗದಗ : ನಿರ್ಮಿತಿ ಕೇಂದ್ರದ ಇಂಜಿನಿಯರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗನ ಪಲ್ಲವಿ ಲಾಡ್ಜ್ನಲ್ಲಿ ನಡೆದಿದೆ. ಗದಗ ನಗರದ ನಿವಾಸಿಯಾಗಿರುವ ಶಂಕರಗೌಡ ಪಾಟೀಲ್ (54) ಆತ್ಮಹತ್ಯೆ ಮಾಡಿಕೊಂಡಿರುವ ಇಂಜಿನಿಯರ್. ಇಂದು (ಡಿಸೆಂ 03) ಬೆಳಗ್ಗೆ 7.30ಕ್ಕೆ ಮನೆಯಿಂದ ಹೊರಬಂದಿದ್ದ ಶಂಕರಗೌಡ ಪಾಟೀಲ್…