ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್
ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.
ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.