ಬಾಣಸವಾಡಿ :- ಪ್ರೀತಿಸಿದ ಹುಡುಗಿ ದೂರವಾಗಿದಕ್ಕೆ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸತೀಶ್ ಕುಮಾರ್(25) ವರ್ಷದ ಯುವಕ ಆತ್ಮಹತ್ಯೆಗೆ ಒಳಗಾಗಿರುವ ವ್ಯಕ್ತಿಯಾಗಿದ್ದಾನೆ
ಖಾಸಗಿ ಕಂಪನಿಯಲ್ಲಿ ಕೆಲಸ ಮಾಡ್ತಿದ್ದ ಸತೀಶ್ ಕಾಲೇಜಿನಿಂದಲೆ ಯುವತಿಯೋರ್ವಳನ್ನ ಪ್ರೀತಿಸುತ್ತಿದ್ದ, ಇಬ್ಬರು ಪರಸ್ಪರ ಪ್ರೀತಿಸಿ ಒಟ್ಟಿಗೆ ಓಡಾಡಿದ್ರು ಆದ್ರೆ ಇತ್ತೀಚೆಗೆ ಯುವಕನಿಂದ ಇವತ್ತಿಗೆ ದೂರವಾಗಿದ್ಲು, ಇದರಿಂದ ಮನನೊಂದ ಸತೀಶ್ ಕುಮಾರ್ ರೂಮಿನ ಫ್ಯಾನಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆನ ಮಾಡಿಕೊಂಡಿದ್ದಾನೆ.
ಬಾಣಸವಾಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಮೃತದೇಹವನ್ನ ಅಂಬೇಡ್ಕರ್ ಆಸ್ಪತ್ರೆ ಶವಾಗಾರಕ್ಕೆ ಶಿಫ್ಟ್ ಮಾಡಲಾಗಿದೆ. ಈ ಸಂಬಂಧ ಬಾಣಸವಾಡಿ ಪೊಲೀಸ್ ಠಾಣೆಯಲ್ಲಿ ಅಸಹಜ ಸಾವು ಪ್ರಕರಣ ದಾಖಲಾಗಿದೆ.
ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…