ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ (ಔuಣeಡಿ ಡಿiಟಿg ಡಿoಚಿಜ) ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 4 ಮತ್ತು ಸೆಕ್ಷನ್ 500 ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬಂಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ 2018ರ ವಾರ್ಡ್ ಆeಟimiಣಚಿioಟಿ ನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು, ಪಟ್ಟಣ ಪಂಚಾಯಿತಿಗಳನ್ನು, ಮತ್ತು ನಗರಸಭೆಯನ್ನು ಸೇರಿಸಿಕೊಳ್ಳುಬೇಕಾಗಿದೆ.

1 ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ : 86.31.ಕಿ.ಮೀ
ಹೊಸದಾಗಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿರುವ ಪ್ರದೇಶಗಳು
1 ಹೂಟಗಳ್ಳಿ ನಗರಸಭೆ 29.70 ಚ.ಕಿ.ಮೀ
2 ಶ್ರೀರಾಂಪುರ ಪಟ್ಟಣ ಪಂಚಾಯಿತಿ -17.84 ಚ.ಕಿ.ಮೀ
3 ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ- 22.11 ಚ.ಕಿ.ಮೀ
4 ಕಡಕೋಳ ಪಟ್ಟಣ ಪಂಚಾಯಿತಿ- 34.71 ಚ.ಕಿ.ಮೀ
5 ಬೋಗಾದಿ ಪಟ್ಟಣ ಪಂಚಾಯಿತಿ – 35.50 ಚ.ಕಿ.ಮೀ
6 ಚಾಮುಂಡಿಬೆಟ್ಟಗ್ರಾಮ ಪಂಚಾಯಿತಿ -6.00 ಚ.ಕಿ.ಮೀ
7 ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ- 14.70 ಚ.ಕಿ.ಮೀ
8 ಇಲವಾಲ ಗ್ರಾಮ ಪಂಚಾಯಿತಿ- 20.76 ಚ.ಕಿ.ಮೀ
9 ಆಲನಹಳ್ಳಿ ಗ್ರಾಮ ಪಂಚಾಯಿತಿ -5.69 ಚ.ಕಿ.ಮೀ

ಮೇಲ್ಕಂಡ ಪ್ರದೇಶಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡಿರುವ 2018ರ ವಾರ್ಡ್ ಆeಟimiಣಚಿioಟಿ ರನ್ವಯ ಹೂಟಗಳ್ಳಿ, ರಮ್ಮನಹಳ್ಳಿ ಹಾಗೂ ಶ್ರೀರಾಂಪುರ ಪ್ರದೇಶದ ಭಾಗಶಃ ಗ್ರಾಮಗಳು ಪಾಲಿಕೆಯ ಎಲ್ಲೆಯೊಳಗೆ ಬರುತ್ತಿದ್ದು, ಸರ್ಕಾರದ ಅಧಿಸೂಚನೆ ಅನ್ವಯ ಪಾಲಿಕೆಯ ವಾರ್ಡ್ ನಂ:1,2,3,4,5,20ರ ಹೆಬ್ಬಾಳು ಪ್ರದೇಶವು ಹೂಟಗಳ್ಳಿ ನಗರಸಭೆಯ ವ್ಯಾಪ್ತಿಗೆ ಸೇರಿರುತ್ತದೆ. ವಾರ್ಡ್ ನಂ: 35ರ ಸಾತಗಳ್ಳಿ ಪ್ರದೇಶವು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ಹಾಗೂ ವಾರ್ಡ್ ನಂ:65ರ ಶ್ರೀರಾಂಪುರ ಪ್ರದೇಶವು ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಸೇರುತ್ತದೆ.
ಈ ಸಂಬಂಧ ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಛೇರಿಗಳಿಂದ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿರುವ-2018ರ ವಾರ್ಡ್ ಆeಟimiಣಚಿioಟಿ ನಕ್ಷೆಯನ್ವಯ ಪಾಲಿಕೆಯ ವ್ಯಾಪ್ತಿಯೊಳಗೆ ಸೇರಿರುವ ಪ್ರದೇಶಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಸದರಿ ಕಛೇರಿಗಳಿಂದ ತಿಳಿದುಬಂದಿರುತ್ತದೆ. ಗಡಿರೇಖೆಯು ಸರ್ಕಾರದ ಅಧಿಸೂಚನೆಯಂತೆ ಹಾಗೂ 2018 ವಾರ್ಡ್ ಆeಟimiಣಚಿioಟಿನಂತೆ ಸಮಗ್ರ ನಕ್ಷೆ ತಯಾರಿಸಲಾಗಿದೆ. ಅದರಂತೆ ಪಾಲಿಕೆಯ ಹಾಲಿ ವಿಸ್ತೀರ್ಣ 86.31 ಚ.ಕಿ.ಮೀ ಪ್ರದೇಶಕ್ಕೆ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ಓಳಗೊಂಡತೆ ಒಟ್ಟು 187.01ಚ.ಕಿ.ಮೀ ಪ್ರದೇಶವನ್ನು ಪಾಲಿಕೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿ ಪ್ರಸ್ತಾವಿತ ಬೃಹತ್ ಮೈಸೂರು ಮಹಾನಗರ ಪಾಲಿಕೆ ಒಟ್ಟಾರೆ ವಿಸ್ತೀರ್ಣವು 273.32 ಚ.ಕಿ.ಮೀ ಆಗುತ್ತದೆ.
ಮೇಲ್ಕಂಡ ಅಂಶಗಳಲ್ಲಿ ಹಿನ್ನಲೆಯಲ್ಲಿ, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಯೋಜನಾಬದ್ದ ನಗರದ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೆರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!