ಬೈಕ್ ಅಡ್ಡಗಟ್ಟಿ ಜೆಡಿಎಸ್ ಮುಖಂಡನ ಕೊ*; ಚಿಕ್ಕಬಳ್ಳಾಪುರದಲ್ಲಿ ಘಟನೆ.

ಚಿಕ್ಕಬಳ್ಳಾಪುರ: ನಡು ರಸ್ತೆಯಲ್ಲೇ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಜೆಡಿಎಸ್ ಮುಖಂಡನೋರ್ವನನ್ನು ಕೊಲೆ ಮಾಡಿರುವ ಘಟನೆ ತಾಲೂಕಿನ ತಮ್ಮನಾಯಕಹಳ್ಳಿಯ ಗೇಟ್ ಬಳಿ ನಡೆದಿದೆ. ವೆಂಕಟೇಶ್ (52) ಮೃತ ಜೆಡಿಎಸ್ ಪಕ್ಷದ ಮುಖಂಡ.
ತಮ್ಮನಾಯಕನಹಳ್ಳಿ ಗೇಟ್ನಿಂದ ವೆಂಕಟೇಶ್ ತನ್ನ ಸ್ವಗ್ರಾಮ ತಮ್ಮನಾಯಕನಹಳ್ಳಿ ಮನೆಗೆ ಬೈಕ್ನಲ್ಲಿ ತೆರಳುತ್ತಿದ್ದರು. ಈ ವೇಳೆ ಅಪರಿಚಿತ ವ್ಯಕ್ತಿಗಳು ಅಡ್ಡಗಟ್ಟಿ ಮಚ್ಚು ಲಾಂಗುಗಳಿಂದ ಮನಸೋಇಚ್ಛೆ ದಾಳಿ ಮಾಡಿದ್ದಾರೆ. ಅಲ್ಲದೇ ಕೈಗೆ ಲಾಂಗ್ಗಳಿಂದ ಹೊಡೆದಿದ್ದರಿಂದ ಕೈ ಸಹ ಕಟ್ ಆಗಿದೆ. ಮಾರಣಾಂತಿಕ ದಾಳಿ ಬಳಿಕ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ರಕ್ತದ ಮಡುವಿನಲ್ಲಿ ಒದ್ದಾಡುತ್ತಾ ವೆಂಕಟೇಶ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ, ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ವೆಂಕಟೇಶ್ ಅವರ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.

Lavc60.20.101

ದಾಳಿ ಮಾಡಿದವರು ಯಾರು ಎಂಬ ಬಗ್ಗೆ ಮಾಹಿತಿ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ಶ್ವಾನದಳದ ಸಿಬ್ಬಂದಿ ಹಾಗೂ ಬೆರಳಚ್ಚು ತಜ್ಞರು ಆಗಮಿಸಿದ್ದು, ಸ್ಥಳದಲ್ಲಿ ಎಲ್ಲ ಮಾಹಿತಿಯನ್ನು ಕಲೆ ಹಾಕುತ್ತಿರುವ ಬಗ್ಗೆ ಪೊಲೀಸರು ತಿಳಿಸಿದ್ದಾರೆ.
”ವೆಂಕಟೇಶ್ ಬಿಳಿ ಸ್ಕೂಟಿಯಲ್ಲಿ ತೆರಳುತ್ತಿದ್ದಾಗ ದುಷ್ಕರ್ಮಿಗಳು ಅವರನ್ನು ಅಡ್ಡಗಟ್ಟಿ ಹರಿತವಾದ ಮಾರಕಾಸ್ತ್ರಗಳಿಂದ ದಾಳಿ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ. ಮೃತ ವೆಂಕಟೇಶ್ ಅವರ ತಲೆ, ಮುಖ, ಕೈ ಮೇಲೆ ಮಾರಣಾಂತಿಕ ಹಲ್ಲೆ ಆಗಿರುವುದು ಪ್ರಾಥಮಿಕ ತನಿಖೆಯಿಂದ ಗೊತ್ತಾಗಿದೆ. ಹಲ್ಲೆ ಮಾಡಿದವರಾರು ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ” ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಾಲ್ ಚೌಕ್ಸೆ ತಿಳಿಸಿದ್ದಾರೆ.

Related Posts

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಅವರ ಪ್ರೇಮಕಥೆ, ವಿವಾಹ ಮತ್ತು ಮಗುವಿನ ಬಗ್ಗೆ ಈ ಸ್ಟೋರಿಯಲ್ಲಿ ಚರ್ಚೆ ಆಗುತ್ತಿದೆ. ರಣವೀರ್ ಅವರು ದೀಪಿಕಾಗೆ ಕನ್ನಡದಲ್ಲಿ ಪ್ರಪೋಸ್ ಮಾಡಿದ ವಿಡಿಯೋ ವೈರಲ್ ಆಗಿದೆ. ಅವರ ಪ್ರೀತಿಯ ಆರಂಭ, ಮದುವೆ ಮತ್ತು ಈಗ…

Leave a Reply

Your email address will not be published. Required fields are marked *

You Missed

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ  ಪ್ರಪೋಸ್ !

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಕೆಜಿಗಟ್ಟಲೇ ಬಂಗಾರ ಧರಿಸಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ಭಕ್ತ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

ಪ್ರೀತಿಸಿದ ಹುಡುಗಿ ಕೈಕೊಟ್ಟಿದ್ದಕ್ಕೆ ಪ್ರಾ* ಕಳೆದುಕೊಂಡ ಯುವಕ!

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

5 ಸಾವಿರ ರೂಪಾಯಿ ನೋಟಿನ ಬಗ್ಗೆ RBI ಹೇಳಿದ್ದಿಷ್ಟು !

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?

ಗರ್ಲ್ಸ್‌ ಹಾಸ್ಟೆಲ್‌ನಲ್ಲಿ ಹಿಡನ್‌ ಕ್ಯಾಮೆರಾ ; 300 ಕ್ಕೂ ಹೆಚ್ಚು ವಿಡಿಯೋ ಸೆರೆ ?