ತುಮಕೂರು: ದೂರು ನೀಡಲು ಬಂದ ಮಹಿಳೆಯೊಂದಿಗೆ ಪೊಲೀಸ್ ಠಾಣೆಯಲ್ಲೇ ಅಸಭ್ಯವಾಗಿ ವರ್ತಿಸಿದ ಆರೋಪದಡಿ ಬಂಧನಕ್ಕೊಳಗಾಗಿರುವ ಮಧುಗಿರಿ ಡಿವೈಎಸ್ ಪಿ ರಾಮಚಂದ್ರಪ್ಪ ಅವರನ್ನು ಮಧುಗಿರಿ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಪೊಲೀಸರು ಮೆಡಿಕಲ್ ಟೆಸ್ಟ್ ಮಾಡಿಸಿದರು.
ಶುಕ್ರವಾರ ರಾತ್ರಿ ಬಂಧಿಸಿರುವ ಮಧುಗಿರಿ ಪೊಲೀಸರು, ಆರೋಪಿ ರಾಮಚಂದ್ರಪ್ಪ ಅವರನ್ನು ಇಂದು ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಮಧುಗಿರಿ ಜೆಎಂಎಫ್ ಸಿ ಕೋರ್ಟ್ನ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಿದ್ದಾರೆ. ಸಂತ್ರಸ್ತ ಮಹಿಳೆಯಿಂದ ದೂರು ಪಡೆದು ಎಫ್ಐಆರ್ ದಾಖಲಿಸಿಕೊಂಡಿದ್ದಾರೆ. ನಂತರ ಡಿವೈಎಸ್ ಪಿಯನ್ನ ಬಂಧಿಸಿ ಕೆಲ ಸಮಯ ಮಧುಗಿರಿ ಪೊಲೀಸ್ ಠಾಣೆಯಲ್ಲಿ ಕೂರಿಸಿ ವಿಚಾರಣೆ ನಡೆಸಿದರು.
ದೂರು ನೀಡಲು ಬಂದಿದ್ದ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿರುವ ಆರೋಪದಡಿ ಮಧುಗಿರಿ ಉಪವಿಭಾಗದ ಡಿವೈಎಸ್ಪಿ ರಾಮಚಂದ್ರಯ್ಯ ಅವರನ್ನ ಸಸ್ಪೆಂಡ್ ಮಾಡಿ ಪೊಲೀಸ್ ಇಲಾಖೆ ನಿನ್ನೆಯೇ ಆದೇಶಿಸಿತ್ತು.
ಮಹಿಳೆಯೊಂದಿಗೆ ಅಸಭ್ಯ ವರ್ತನೆ ತೋರಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಇದರಿಂದ ಪೊಲೀಸ್ ಇಲಾಖೆಯು ತಲೆತಗ್ಗಿಸುವಂತಾಗಿತ್ತು. ಹೀಗಾಗಿ ನಿವೃತ್ತಿಗೆ ಎರಡು ವರ್ಷವಿದ್ದ ರಾಮಚಂದ್ರಯ್ಯ ಅವರನ್ನ ಅಮಾನತು ಮಾಡಿ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಅಲೋಕ್ ಮೋಹನ್ ಅವರು ಆದೇಶ ಹೊರಡಿಸಿದ್ದಾರೆ. ಜಮೀನು ವಿಚಾರವಾಗಿ ಮಹಿಳೆಯು ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ವಿಚಾರಣೆಗೆ ಎಂದು ಕರೆಯಿಸಿಕೊಂಡಿದ್ದ ಡಿವೈಎಸ್ಪಿ ಅವರು ಆ ಮಹಿಳೆಯೊಂದಿಗೆ ಅಸಭ್ಯವಾಗಿ ವರ್ತಿಸಿದ್ದರು. ಕೆಲ ದಿನಗಳ ಹಿಂದೆಯೇ ಈ ಕೃತ್ಯವೆಸಗಿದ್ದು, ಶುಕ್ರವಾರ ವಿಡಿಯೋ ವೈರಲ್ ಆಗಿತ್ತು.
ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…