ತುಮಕೂರು: ತುಮಕೂರು ತಾಲೂಕಿನ ಪೆಮ್ಮನಹಳ್ಳಿ ಗ್ರಾಮದಲ್ಲಿ 11 ವರ್ಷದ ಮಗಳೇ ತನ್ನ ತಂದೆಯ ಮೃತದೇಹದ ಅಂತ್ಯಸಂಸ್ಕಾರ ನೆರವೇರಿಸಿ ಗಮನ ಸೆಳೆದಿದ್ದಾಳೆ. 6ನೇ ತರಗತಿ ಓದುತ್ತಿರುವ ಮೋನಿಷಾ, ತಂದೆಯ ಅಂತಿಮ ವಿಧಿವಿಧಾನಗಳನ್ನು ನೆರವೇರಿಸಿದ ಬಾಲಕಿ.
ಈಕೆಯ ತಂದೆ ಕೆಂಪರಾಜು (48) ಕ್ಯಾನ್ಸರ್ ಕಾಯಿಲೆಯಿಂದ ಬಳಲುತ್ತಿದ್ದರು. ಕಳೆದ ಎರಡು ದಿನಗಳ ಹಿಂದೆ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದರು. ವೃತ್ತಿಯಲ್ಲಿ ಆಟೋ ಚಾಲಕರಾಗಿದ್ದ ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದು, ಮೋನಿಷಾ ಹಿರಿಯ ಪುತ್ರಿ. “ಮೃತಪಟ್ಟ ತಂದೆಯ ಅಂತ್ಯಸಂಸ್ಕಾರ ನೆರವೇರಿಸಿದ ಬಾಲಕಿ ಧೈರ್ಯವಂತೆ. ಆಕೆ ಸಮಾಜಕ್ಕೆ ಮಾದರಿ ಮಗು” ಎಂದು ಗ್ರಾಮಸ್ಥರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದೇ ರೀತಿ 2022ರಲ್ಲಿಯೂ ಸಹ ತುಮಕೂರಿನಲ್ಲಿ ಹೆಣ್ಣು ಮಕ್ಕಳಿಬ್ಬರೇ ಮುಂದೆ ನಿಂತು ತಮ್ಮ ತಂದೆಯ ಅಂತ್ಯ ಸಂಸ್ಕಾರ ನೆರವೇರಿಸಿ ಮಾದರಿಯಾಗಿದ್ದರು. ಅನಾರೋಗ್ಯದಿಂದ ಮೃತಪಟ್ಟ ತಮ್ಮ ತಂದೆ ಗಂಗಾಧರ್ ಅವರ ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನು ಪುತ್ರಿಯರಾದ ಸವಿತಾ ಮತ್ತು ಲಕ್ಷ್ಮಿ ನೆರವೇರಿಸಿ ಸಮಾಜಕ್ಕೆ ಹೊಸ ಸಂದೇಶ ರವಾನಿಸಿದ್ದರು. ಗಂಡು ಮಕ್ಕಳಿಗಿಂತ ಹೆಣ್ಣು ಮಕ್ಕಳು ಸಹ ಯಾವುದರಲ್ಲೂ ಕಡಿಮೆ ಇಲ್ಲ ಎನ್ನುವ ಕೊರಗು ನಿವಾರಿಸಿದ್ದಾರೆ.
ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.
ಭೋಪಾಲ್ :- ಕುಡಿದ ಅಮಲಿನಲ್ಲಿ ಗಂಡ ಹೆಂಡತಿಗೆ ಹೊಡೆಯುವುದು, ಗಂಡ ದಿನವೂ ಕುಡಿದು ಬಂದು ಹೊಡೆಯುತ್ತಾನೆ ಎಂದು ಹೆಂಡತಿ ಪೊಲೀಸರಿಗೆ ದೂರು ನೀಡುವುದು ಸಾಮಾನ್ಯ. ಆದರೆ, ಇಲ್ಲೊಬ್ಬಳು ಮಹಿಳೆ ತಾನೇ ಕಂಠಪೂರ್ತಿ ಕುಡಿದು ಗಂಡನಿಗೆ ಇನ್ನಿಲ್ಲದಷ್ಟು ಹಿಂಸೆ ನೀಡಿದ್ದಾಳೆ. ಕುಡುಕಿ ಹೆಂಡತಿಯ…