ನಾಳೆ ಭಾರತ VS ಬಾಂಗ್ಲಾದೇಶ ನಡುವಿನ 2ನೇ ಟಿ20 ಪಂದ್ಯ, ಸರಣಿ ವಶಪಡಿಸಿಕೊಳ್ಳುವ ತವಕದಲ್ಲಿ ಸೂರ್ಯಕುಮಾರ್ ಯಾದವ್ ಪಡೆ…
ಭಾರತ ಮತ್ತು ಬಾಂಗ್ಲಾದೇಶ ನಡುವಣ 2ನೇ ಟಿ20 ಪಂದ್ಯವು ನಾಳೆ ನಡೆಯಲಿದೆ. ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ನಡೆಯಲಿರುವ ಈ ಪಂದ್ಯವು ಬಾಂಗ್ಲಾದೇಶ ತಂಡದ ಪಾಲಿಗೆ ನಿರ್ಣಾಯಕ.
ಮೊದಲ ಟಿ20 ಪಂದ್ಯದಲ್ಲಿ ಬಾಂಗ್ಲಾ ವಿರುದ್ಧ ಟೀಮ್ ಇಂಡಿಯಾ 7 ವಿಕೆಟ್ಗಳ ಭರ್ಜರಿ ಜಯ ಸಾಧಿಸಿದೆ. ಹೀಗಾಗಿ ಎರಡನೇ ಪಂದ್ಯದ ಮೂಲಕ ಸರಣಿ ವಶಪಡಿಸಿಕೊಳ್ಳುವ ಉತ್ತಮ ಅವಕಾಶ ಭಾರತ ತಂಡದ ಮುಂದಿದೆ.
ಅತ್ತ ಸರಣಿ ಆಸೆಯನ್ನು ಜೀವಂತವಿರಿಸಿಕೊಳ್ಳಬೇಕಿದ್ದರೆ ಬಾಂಗ್ಲಾದೇಶ ತಂಡವು 2ನೇ ಪಂದ್ಯದಲ್ಲಿ ಜಯ ಸಾಧಿಸುವುದು ಅನಿವಾರ್ಯ. ಹೀಗಾಗಿ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಉಭಯ ತಂಡಗಳಿಂದ ಭರ್ಜರಿ ಪೈಪೋಟಿ ನಿರೀಕ್ಷಿಸಬಹುದು