6 ವರ್ಷದ ಬಾಲಕಿ ಮೇಲೆ ಆಕೆಯ ತಂದೆ ಸೇರಿ ಕುಟುಂಬ ಮೂವರು ಕಳೆದ ಒಂದು ವರ್ಷದಿಂದ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ.ಈ ಘಟನೆ ಬೆಳಕಿಗೆ ಬಂದ ನಂತರ ಗ್ರಾಮಸ್ಥರಲ್ಲಿ ಆಕ್ರೋಶ ವ್ಯಕ್ತವಾಗಿದೆ.
ಹಲವು ತಿಂಗಳುಗಳಿಂದ ಬಾಲಕಿ ಮೇಲೆ ನಿರಂತರ ಅತ್ಯಾಚಾರವೆಸಗುತ್ತಿದ್ದ ಆಕೆಯ ತಂದೆ, ಚಿಕ್ಕಪ್ಪ ಹಾಗೂ ಅಜ್ಜನನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಸಂಬಂಧಿಯೊಬ್ಬರ ಜತೆ ಬಾಲಕಿ ಬಂದು ಸ್ಥಳೀಯ ಬಿಧುನಾ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಎಫ್ಐಆರ್ ದಾಖಲಿಸಲಾಗಿದೆ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಎಎಸ್ಪಿ ಅಲೋಕ್ ಹೇಳಿದರು.
ಉತ್ತರ ಪ್ರದೇಶದ ಔರಿಯಾ ಜಿಲ್ಲೆಯ ಬಿಧುನಾ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯಲ್ಲಿ ಇಂತಹ ಘಟನೆ ನಡೆದಿದೆ. ಆಕೆ ಗರ್ಭಿಣಿ ಎಂದು ತಿಳಿಯುತ್ತಿದ್ದಂತೆ ತಂದೆ ಆಕೆಯನ್ನು ಕೊಲೆ ಮಾಡಲು ಯೋಜನೆ ರೂಪಿಸಿದ್ದ, ಸಂತ್ರಸ್ತ ಬಾಲಕಿ ತನ್ನ ಚಿಕ್ಕಮ್ಮನೊಂದಿಗೆ ಪೊಲೀಸ್ ಠಾಣೆಗೆ ಬಂದಿದ್ದಳು. ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೆ ಕರೆದೊಯ್ಯಲಾಯಿತು ಮತ್ತು ಪ್ರಾಥಮಿಕವಾಗಿ ಅವಳು ಎರಡು ತಿಂಗಳ ಗರ್ಭಿಣಿ ಎಂಬುದು ತಿಳಿದುಬಂದಿದೆ ಎಂದು ಮಿಶ್ರಾ ಹೇಳಿದರು.
ಆರೋಪಿಗಳನ್ನು ಬಂಧಿಸಲಾಗಿದ್ದು, ಸ್ಥಳೀಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ. ಲೈಂಗಿಕ ಅಪರಾಧಗಳಿಂದ ಮಕ್ಕಳ ಕಟ್ಟುನಿಟ್ಟಿನ ರಕ್ಷಣೆ (ಪೋಕ್ಸೊ) ಕಾಯ್ದೆಯಡಿಯೂ ದೂರು ದಾಖಲಿಸಲಾಗಿದೆ ಎಂದು ಮಿಶ್ರಾ ಹೇಳಿದರು.
8ರ ಬಾಲೆ ಅ*ಚಾರ ವಿರೋಧಿಸಿದ್ದಕ್ಕೆ ಕೊ* ಮಾಡಿದ್ದ ಆರೋಪಿಗೆ ಗುಂಡೇಟು.
ವಾರಾಣಸಿ:- ವಾರಾಣಸಿಯ ಶಾಲೆಯೊಂದರ ಬಳಿಕ ಗೋಣಿಚೀಲದಲ್ಲಿ 8 ವರ್ಷದ ಬಾಲಕಿಯ ಅರೆಬೆತ್ತಲೆ ಶವ ಪತ್ತೆಯಾಗಿತ್ತು. ಅತ್ಯಾಚಾರವನ್ನು ವಿರೋಧಿಸಿದ್ದಕ್ಕೆ ಆರೋಪಿ ಬಾಲಕಿಯನ್ನು ಕೊಂದು, ಗೋಣಿಚೀಲದಲ್ಲಿ ತುಂಬಿ ಎಸೆದು ಪರಾರಿಯಾಗಿದ್ದ. ಆರೋಪಿ ಇರ್ಷಾದ್ಗೆ ಗುಂಡು ಹಾರಿಸಿ ಪೊಲೀಸರು ಆತನನ್ನು ಬಂಧಿಸಿದ್ದಾರೆ. ವಾರಾಣಸಿಯ ಸುಜಾಬಾದ್ ಪ್ರದೇಶದಲ್ಲಿ…