ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಬೆಂಗಳೂರು : ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ರಾಜಾತಿಥ್ಯ ಕೇಸ್ ಬಳಿಕ ಜೈಲ್ನಲ್ಲಿ ಸಾಕಷ್ಟು ಮೊಬೈಲ್ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್ ಬಳಕೆ ಮಾಡಲಾಗುತ್ತಿದ್ದು, ಆ ಮೂಲಕ ಆರೋಪಿಗಳು ಜೈಲಿನಿಂದಲೇ ಹಣಕ್ಕಾಗಿ ಧಮ್ಕಿ ಮತ್ತು ಡ್ರಗ್ ಡೀಲಿಂಗ್ ಮಾಡುತ್ತಿದ್ದಾರೆ.

ಸೆಂಟ್ರಲ್ ಜೈಲ್ನಲ್ಲಿ ಇದೀಗ ಮತ್ತೆ ಮೊಬೈಲ್ ಬಳಕೆಯಿಂದಾಗಿ ರೌಡಿಗಳು ಮತ್ತು ಡ್ರಗ್ಸ್ ಡೀಲರ್ಗಳ ಆಟಾಟೋಪ ಮುಂದುವರಿದಿದೆ. ಆರೋಪಿಗಳು, ಶಿಕ್ಷೆಗೆ ಒಳಪಟ್ಟ ಖೈದಿಗಳಿಂದ ಮೊಬೈಲ್ ಬಳಕೆ ನಿತ್ಯ ನಿರಂತರವಾಗಿದೆ.
ಹೊರಗಡೆಗಿಂತ ಪರಪ್ಪನ ಅಗ್ರಹಾರ ಜೈಲೇ ಕ್ರಿಮಿನಲ್ಗಳಿಗೆ ಸೇಫ್ ಆಯ್ತಾ ಎಂಬ ಅನುಮಾನಗಳು ಶುರುವಾಗಿವೆ. ಜೈಲಿನ ಖೈದಿಗಳು ರಾಜರೋಷವಾಗಿ ಮೊಬೈಲ್ ಬಳಸುತ್ತಿದ್ದಾರೆ. ಇದಕ್ಕೆ ಸಾಲು ಸಾಲು ಸಾಕ್ಷಿಗಳು ಸಿಕ್ಕಿವೆ. ಜೈಲಿನಲ್ಲಿ ಇನ್ನೂ 250-300 ಮೊಬೈಲ್ಗಳು ಇರುವ ಮಾಹಿತಿಯಿದೆ.
ಜೈಲಿನಲ್ಲೇ ಕೂತು ಸೈಕೋ ವಿಶ್ವನಾಥ್ ಎಂಬ ರೌಡಿಯಿಂದ ವ್ಯಾಪಾರಿಯೊಬ್ಬರಿಗೆ ಫೋನ್ ಮಾಡಿ ಹಣಕ್ಕಾಗಿ ಧಮ್ಕಿ ಹಾಕಲಾಗಿದೆ. ಪ್ರತಿ ವಾರ 40 ಸಾವಿರ ರೂ. ಹಣ ಹಫ್ತಾ ಕೊಡಬೇಕು ಇಲ್ಲ ಕೊಲೆ ಮಾಡುವುದಾಗಿ ಬೆದರಿಕೆ ನೀಡಲಾಗಿದೆ. ಈ ಸಂಬಂಧ ಸೈಕೋ ವಿಶ್ವನಾಥ್ ವಿರುದ್ಧ ಸಿಸಿಬಿಗೆ ವ್ಯಾಪಾರಿ ದೂರು ನೀಡಿದ್ದಾರೆ. ಸದ್ಯ ಬಾಡಿ ವಾರೆಂಟ್ ಮೇಲೆ ಸೈಕೋ ವಿಶ್ವನಾಥ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರಿಂದ ವಿಚಾರಣೆ ಮಾಡಲಾಗಿದೆ.
ಪರಪ್ಪನ ಜೈಲಿನಲ್ಲೇ ಕೂತು ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡಲಾಗುತ್ತಿದೆ. ಡ್ರಗ್ಸ್ ಕೇಸ್ನಲ್ಲಿ ಜೈಲಿಗೆ ಹೋಗಿರುವ ಆರೋಪಿಯಿಂದಲೇ ಡ್ರಗ್ಸ್ ಡೀಲಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರು ಡ್ರಗ್ಸ್ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಇಬ್ಬರನ್ನ ಬಂಧಿಸಿ ವಿಚಾರಣೆ ಮಾಡಿದಾಗ ಮತ್ತೊಬ್ಬನ ಬಗ್ಗೆ ಮಾಹಿತಿ ನೀಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತ ಆ ಆರೋಪಿ ಡ್ರಗ್ಸ್ ಮಾರಾಟ ಮಾಡಿಸುತ್ತಿದ್ದ. ಆತನ ಸೂಚನೆಯಂತೆ ಡ್ರಗ್ಸ್ ಕಲೆಕ್ಟ್ ಮಾಡಿ ಪೋರ್ಟರ್ ಮೂಲಕ ಮಾರಾಟ ಮಾಡುತ್ತಿದ್ದರು. ಸದ್ಯ ಈತನನ್ನೂ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಸಿಸಿಬಿ ಸಿದ್ದತೆ ನಡೆಸಿದೆ.
ಜೈಲಿನಲ್ಲೇ ಕೂತು ಬಾಲಕೃಷ್ಣ ಎಂಬಾತನಿಂದ ನಗರದಲ್ಲಿ ಗಾಂಜಾ ಡೀಲಿಂಗ್ ಮಾಡಲಾಗಿದೆ. ಅಶೋಕ ನಗರ ಪೊಲೀಸರಿಂದ ನಾಲ್ವರು ಆರೋಪಿಗಳನ್ನ ಬಂಧಿಲಾಗಿತ್ತು. ಶ್ರೀಕಾಂತ್, ಮುನಿರಾಜು, ಚಂದ್ರಕಾಂತ್, ಬಾಲಕೃಷ್ಣ@ ಜಿಗಣಿ ಬಾಲು ಬಂಧಿತರು. ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು.
ಆರೋಪಿಗಳ ಪೈಕಿ ಜಿಗಣಿ ಬಾಲು ಕ್ರೈಂ ಕೇಸ್ವೊಂದರಲ್ಲಿ ಜೈಲು ಸೇರಿದ್ದ. ಆದರೆ ಜೈಲಿನಲ್ಲಿ ಕೂತು ಗಾಂಜಾ ವ್ಯವಹಾರ ನಡೆಸುತ್ತಿದ್ದ. ಸದ್ಯ ಗಾಂಜಾ ಕೇಸ್ನಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.