2ನೇ ಬಾರಿಗೆ ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ..!
9ನೇ ಆವೃತ್ತಿಯ ಟಿ20 ವಿಶ್ವಕಪ್ನ ಫೈನಲ್ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವನ್ನು 7 ರನ್ಗಳಿಂದ ಮಣಿಸಿದ ಟೀಂ ಇಂಡಿಯಾ ದಾಖಲೆಯ 2ನೇ ಬಾರಿಗೆ ಟಿ20 ವಿಶ್ವಕಪ್ ಎತ್ತಿಹಿಡಿದಿದೆ. ಈ ಮೂಲಕ 17 ವರ್ಷಗಳ ನಂತರ ಮತ್ತೊಮ್ಮೆ ಟಿ20 ಚಾಂಪಿಯನ್ ಆಗುವಲ್ಲಿ ಯಶಸ್ವಿಯಾಗಿದೆ. ವಾಸ್ತವವಾಗಿ 2007 ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ನ ಚೊಚ್ಚಲ ಆವೃತ್ತಿಯಲ್ಲಿ ಟೀಂ ಇಂಡಿಯಾ ಎಂಎಸ್ ಧೋನಿ ನಾಯಕಯತ್ವದಲ್ಲಿ ಟಿ20 ವಿಶ್ವಕಪ್ ಗೆದ್ದುಕೊಂಡಿತ್ತು. ಆ ಬಳಿಕ ತಂಡ 2016 ರಲ್ಲಿ ಮತ್ತೊಮ್ಮೆ ಫೈನಲ್ಗೇರಿತ್ತಾದರೂ, ಚಾಂಪಿಯನ್ ಆಗುವಲ್ಲಿ ಎಡವಿತ್ತು. ಆದರೆ ಈ ಬಾರಿಯ ಟಿ20 ವಿಶ್ವಕಪ್ನಲ್ಲಿ ಅಜೇಯ ತಂಡವಾಗಿ ಫೈನಲ್ಗೆ ಕಾಲಿಟ್ಟಿದ್ದ ಟೀಂ ಇಂಡಿಯಾ ಟಿ20 ವಿಶ್ವಕಪ್ ಚಾಂಪಿಯನ್ ಆಗಿ ಹೊರಹೊಮ್ಮಿದೆ. ಇದರೊಂದಿಗೆ ತಂಡದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ಗೆ ಗೆಲುವಿನ ಬೀಳ್ಕೊಡುಗೆ ನೀಡಿದೆ.
ಪಂದ್ಯದ ದಿಕ್ಕು ಬದಲಿಸಿದ ಹಾರ್ದಿಕ್
ಹೀಗಾಗಿ ಕೇವಲ 23 ಎಸೆತಗಳಲ್ಲಿ ಅರ್ಧಶತಕ ಸಿಡಿಸಿದ ಕ್ಲಾಸನ್, ದಕ್ಷಿಣ ಆಫ್ರಿಕಾಕ್ಕೆ ಗೆಲುವು ಖಚಿತ ಎನಿಸುವಂತೆ ಮಾಡಿದರು. ಆದರೆ ಹಾರ್ದಿಕ್ ದಾಳಿಗಿಳಿದ 17ನೇ ಓವರ್ ಇಡೀ ಪಂದ್ಯದ ದಿಕ್ಕನೇ ಬದಲಿಸಿತು. ಈ ಹಂತದಲ್ಲಿ ಆಫ್ರಿಕಾ ಗೆಲುವಿಗೆ 24 ಎಸೆತಗಳಲ್ಲಿ 26 ರನ್ಗಳ ಅಗತ್ಯವಿತ್ತು. ಈ ವೇಳೆ ಹಾರ್ದಿಕ್ 17ನೇ ಓವರ್ನ ಮೊದಲ ಎಸೆತದಲ್ಲಿ ಕ್ಲಾಸನ್ ವಿಕೆಟ್ ಪಡೆದು, ಆ ಓವರ್ನಲ್ಲಿ ಕೇವಲ 4 ರನ್ ನೀಡುವ ಮೂಲಕ ಆಫ್ರಿಕಾ ತಂಡದ ಸಂಕಷ್ಟ ಹೆಚ್ಚಿಸಿದರು. ನಂತರ ಮುಂದಿನ ಓವರ್ನಲ್ಲಿ ಬುಮ್ರಾ ಕೇವಲ 2 ರನ್ ನೀಡಿ ಮಾರ್ಕೊ ಯಾನ್ಸನ್ರನ್ನು ಬೌಲ್ಡ್ ಮಾಡಿ ಟೀಂ ಇಂಡಿಯಾವನ್ನು ಗೆಲುವಿನ ಹತ್ತಿರಕ್ಕೆ ತಂದರು. ಕೊನೆಯ 2 ಓವರ್ಗಳಲ್ಲಿ ದಕ್ಷಿಣ ಆಫ್ರಿಕಾಕ್ಕೆ 20 ರನ್ ಅಗತ್ಯವಿತ್ತು. 19ನೇ ಓವರ್ ಬೌಲ್ ಮಾಡಿದ ಅರ್ಷದೀಪ್ ಕೇವಲ 4 ರನ್ ನೀಡಿದರು. ಕೊನೆಯ ಓವರ್ನಲ್ಲಿ 16 ರನ್ಗಳ ಅಗತ್ಯವಿತ್ತು. 20ನೇ ಓವರ್ ಬೌಲ್ ಮಾಡುವ ಜವಬ್ದಾರಿ ಹೊತ್ತ ಹಾರ್ದಿಕ್ ಮೊದಲ ಎಸೆತದಲ್ಲಿ ಡೇವಿಡ್ ಮಿಲ್ಲರ್ ಅವರ ವಿಕೆಟ್ ಪಡೆಯುವ ಮೂಲಕ ಗೆಲುವಿನ ಮುದ್ರೆಯೊತ್ತಿದರು. ಈ ಓವರ್ನಲ್ಲಿ ಹಾರ್ದಿಕ್ ಕೇವಲ 8 ರನ್ ನೀಡಿ ಟೀಂ ಇಂಡಿಯಾಗೆ ಜಯ ತಂದುಕೊಟ್ಟರು.