ಬೆಂಗಳೂರು: ಬೊಮ್ಮಸಂದ್ರ ಕೈಗಾರಿಕಾ ಪ್ರದೇಶದಲ್ಲಿನ ಬಟ್ಟೆ ಗೋದಾಮು ಕಾರ್ಖಾನೆಯೊಂದರಲ್ಲಿ ಗುರುವಾರ ಭಾರಿ ಬೆಂಕಿ ಅವಘಡ ಸಂಭವಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ರೂ. ಮೌಲ್ಯದ ವಸ್ತು ಹಾಗೂ ಬಟ್ಟೆಗಳು ಸುಟ್ಟು ಕರಕಲಾಗಿವೆ. ಘಟನೆಗೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ. ಬೆಂಕಿ ಹೊತ್ತಿಕೊಂಡಿರುವ ಮಾಹಿತಿ ತಿಳಿದ ತಕ್ಷಣ ಸ್ಥಳಕ್ಕೆ ಆಗಮಿಸಿದ ಹೈಗ್ರೌಂಡ್ಸ್, ಚಾಮರಾಜಪೇಟೆ, ಎಲೆಕ್ಟ್ರಾನಿಕ್ ಸಿಟಿ ಹಾಗೂ ಸರ್ಜಾಪುರ ಸೇರಿದಂತೆ ಏಳು ಅಗ್ನಿಶಾಮಕ ದಳಗಳ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ನಿರತರಾಗಿದ್ದರು. ಭಾರಿ ಪ್ರಮಾಣದಲ್ಲಿ ಆವರಿಸಿದ್ದ ಬೆಂಕಿಯ ಜ್ವಾಲೆಯನ್ನು ನಂದಿಸಲು ಹರಸಾಹಸ ಪಡಬೇಕಾಯಿತು. ಮಾಹಿತಿ ತಿಳಿದು ಹೆಬ್ಬಗೋಡಿ ಪೊಲೀಸರು ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ. ಬೆಂಕಿ ಅವಘಡದಲ್ಲಿ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ ಎಂದು ಪೊಲೀಸ್ ಮೂಲಗಳು ದೃಢಪಡಿಸಿವೆ. ಅಗ್ನಿ ದುರಂತ ಹಿನ್ನೆಲೆಯಲ್ಲಿ ಇಡೀ ಕೈಗಾರಿಕಾ ಪ್ರದೇಶದಲ್ಲಿ ಭಾರಿ ಹೊಗೆ ಆವರಿಸಿತ್ತು. ಘಟನೆಯಿಂದ ಸ್ಥಳೀಯರಲ್ಲಿ ಆತಂಕ ಮೂಡಿತ್ತು.
ಹೆಂಡತಿ ಬದುಕಿರುವಾಗಲೇ ಇನ್ನೊಂದು ಮದುವೆಯ ಯತ್ನ;ಪೋಷಕರಿಂದ ಬ*ಯಾದ ಯುವಕ.
ಕೋಲಾರ:- ಕಳೆದ ಐದು ವರ್ಷಗಳ ಹಿಂದೆ ಉಸ್ಮಾನ್ ಎಂಬಾತ ಪ್ರೀತಿಸಿ ಮದುವೆಯಾಗಿದ್ದ .ಈತ ೨ನೇ ಮದುವೆಗೆ ಮುಂದಾಗಿದ್ದಾನೆ. ಪತ್ನಿ ಆರೋಗ್ಯ ವಿಚಾರಿಸಲು ಬಂದಿದ್ದ , ಆ ವೇಳೆ ಸಂಬAಧಿ ಯುವತಿ ಮೇಲೆ ಕಣ್ಣಾಕ್ಕಿದ್ದ ಉಸ್ಮಾನ್, ಹುಡುಗಿಯ ಮನೆಗೆ ಹೋಗಿ ಮಗಳನ್ನು ಕೊಟ್ಟು…