ಮಂಗಳೂರು :- ಮುರಡೇಶ್ವರ, ಉಡುಪಿ ಸೇರಿದಂತೆ ಕರ್ನಾಟಕದಲ್ಲಿರುವ ವಿವಿಧ ಬೀಚ್ಗಳಲ್ಲಿ ಒಂದಲ್ಲ ಒಂದು ಅವಘಡಗಳು ಸಂಭವಿಸುತ್ತಲೇ ಇವೆ. ಬೀಚ್ಗೆ ಬರುವ ಪ್ರವಾಸಿಗರು ಸಮುದ್ರ ಪಾಲಾಗುತ್ತಿರುವ ಪ್ರಕರಣಗಳು ಹೆಚ್ಚಿವೆ. ಆದರೂ ಸಹ ಸಂಬಂಧಪಟ್ಟ ಜಿಲ್ಲಾಡಳಿತ ಯಾವುದೇ ಸುರಕ್ಷಿತ ಕ್ರಮಕ್ಕೆ ಮುಂದಾಗಿತ್ತಿಲ್ಲ. ಇದೀಗ ಮಂಗಳೂರಿನಲ್ಲಿ ಬೀಚ್ಗೆ ಬಂದಿದ್ದ ನಾಲ್ವರು ಪ್ರವಾಸಿಗರ ಪೈಕಿ ಮೂವರು ನೀರುಪಾಲಾಗಿರುವ ಘಟನೆ ನಡೆದಿದೆ. ಬೀಚ್ಗೆ ಪ್ರವಾಸಕ್ಕೆ ಬಂದಿದ್ದ ಮೂವರು ವ್ಯಕ್ತಿಗಳು ಸಮುದ್ರ ಪಾಲಾಗಿರುವಂತಹ ಘಟನೆ ಮಂಗಳೂರಿನ ಕುಳಾಯಿ ಬಳಿಯ ಹೊಸಬೆಟ್ಟು ಬೀಚ್ ಬಳಿ ನಡೆದಿದೆ. ಚಿತ್ರದುರ್ಗದ ಮಂಜುನಾಥ್, ಶಿವಮೊಗ್ಗದ ಶಿವಕುಮಾರ್ ಮತ್ತು ಬೆಂಗಳೂರಿನ ಸತ್ಯವೇಲು ಮೃತರು. ಬೀದರ್ನ ಪರಮೇಶ್ವರ್ನನ್ನು ಸ್ಥಳೀಯ ಮೀನುಗಾರರು ರಕ್ಷಿಸಿದ್ದಾರೆ. ಸುರತ್ಕಲ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.
ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ: ಪೊಲೀಸರಿಗೆ ಸಿಎಂ ಸೂಚನೆ.
ಬೆಂಗಳೂರು: ಅಪರಾಧಿಗಳಿಗೆ ಭಯದ ವಾತಾವರಣ, ಜನ ಸಾಮಾನ್ಯರಿಗೆ ಭಯ ಮುಕ್ತ ವಾತಾವರಣ ನಿರ್ಮಿಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಕರೆ ನೀಡಿದರು. ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಚಾಮರಾಜಪೇಟೆ, ಕಬ್ಬನ್ ಪಾರ್ಕ್ ಮತ್ತು ಹೈಗ್ರೌಂಡ್ಸ್ ಪೊಲೀಸ್ ಠಾಣೆ,…