ರಾಜ್ಯಪಾಲರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನಲ್ಲಿ ಕೊಡಗು ಜಿಲ್ಲೆಗೆ ತೆರಳುವ ಮುನ್ನ ಮೈಸೂರು ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.
ಶೋಕಾಸ್ ನೋಟೀಸು ಕೊಟ್ಟಿರುವುದು ಕಾನೂನುಬಾಹಿರವಾಗಿದೆ , ಸಂವಿಧಾನಕ್ಕೆ ವಿರುದ್ಧವಾಗಿದೆ. ಕೇಂದ್ರ ಸರ್ಕಾರ ರಾಜಭವನವನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ. ಚುನಾಯಿತ ಸರ್ಕಾರವನ್ನು ಅಸ್ಥಿರಗೊಳಿಸಲು ಪ್ರಯತ್ನಿಸುತ್ತಿದೆ ಎಂದು ಮುಖ್ಯಮಂತ್ರಿಗಳು ತಿಳಿಸಿದರು.
ಪ್ರಾಸಿಕ್ಯೂಶನ್ ಗೆ ಅನುಮತಿ ಕೊಟ್ಟಿರುವ ಸಂದರ್ಭದಲ್ಲಿ ಏನು ಬೆಳವಣಿಗಳಾಗಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿ ನಿನ್ನೆ
ನಡೆದ ಸಚಿವ ಸಂಪುಟ ಸಭೆಗೆ ಕೆಟ್ಟ ಸಾಂಪ್ರದಾಯವಾಗುತ್ತದೆ ಎಂದು ಸಭೆಗೆ ಹೋಗದೇ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರನ್ನು ಸಚಿವ ಸಂಪುಟ ಸಭೆ ನಡೆಸಲು ನೇಮಿಸಲಾಗಿತ್ತು. ಶೋಕಾಸ್ ನೋಟಿಸ್ ಬಗ್ಗೆ ಸುದೀರ್ಘ ಚರ್ಚೆ ಮಾಡಿ, ನೋಟೀಸು ನೀಡಿರುವುದು ಕಾನೂನು ಬಾಹಿರವಾಗಿದ್ದು, ನೋಟೀಸನ್ನು ಅದನ್ನು ಹಿಂಪಡೆಯಬೇಕೆಂದು ನಿರ್ಧರಿಸಲಾಗಿದೆ ಎಂದರು.