ಸಿಎಂ ಸಿದ್ದರಾಮಯ್ಯಗೆ ಬಿಗ್ ಶಾಕ್.. ಗವರ್ನರ್ ಆದೇಶ ಎತ್ತಿ ಹಿಡಿದ ಹೈಕೋರ್ಟ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಸಂಕಷ್ಟ ಶುರುವಾಗಿದೆ. ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿರುವ ಹೈಕೋರ್ಟ್, ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದ ಗವರ್ನರ್ ಆದೇಶವನ್ನು ಎತ್ತಿ ಹಿಡಿದಿದೆ.
ಸಿಎಂ ಸಿದ್ದರಾಮಯ್ಯ ಪರ ಹಾಗೂ ದೂರುದಾರರ ವಾದ, ಪ್ರತಿವಾದ ಆಲಿಸಿದ್ದ ಹೈಕೋರ್ಟ್ ಇಂದಿಗೆ ತೀರ್ಪನ್ನು ಕಾಯ್ದಿರಿಸಿತ್ತು. ಮುಡಾ ಪ್ರಕರಣದಲ್ಲಿ ಅರ್ಜಿದಾರರ ಕ್ರಮ ಸೂಕ್ತವಾಗಿದೆ. ಹೀಗಾಗಿ ಗವರ್ನರ್ ಆದೇಶವನ್ನು ಹೈಕೋರ್ಟ್ ಒಪ್ಪಿಕೊಂಡಿದೆ.
ನ್ಯಾಯಾಲಯದಲ್ಲಿ ಸಿಎಂ ಸಿದ್ದರಾಮಯ್ಯ ಪರವಾಗಿ ಸುಪ್ರೀಂಕೋರ್ಟ್ನ ಹಿರಿಯ ವಕೀಲ ಅಭಿಷೇಕ್ ಮನುಸಿಂಘ್ವಿ ಹಾಗೂ ಪ್ರೊ.ರವಿಕುಮಾರ್ ವರ್ಮಾ ಅವರು ವಾದ ಮಂಡನೆ ಮಾಡಿದರು. ಇನ್ನು ರಾಜ್ಯಪಾಲರ ಪರವಾಗಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮಂಡಿಸಿದರು. ಎರಡು ಕಡೆಯ ವಾದ-ಪ್ರತಿವಾದ ಆಲಿಸಿದ್ದ ನ್ಯಾ.ಎಂ ನಾಗಪ್ರಸನ್ನ ನೇತೃತ್ವದ ಏಕಸದಸ್ಯ ಪೀಠ ಪ್ರಕರಣ ತನಿಖೆ ಆಗಬೇಕು ಎಂದು ಹೇಳಿದೆ.