ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ಕೆ; ಟೀಂ ಇಂಡಿಯಾದಲ್ಲಿ ಒಂದು ಬದಲಾವಣೆ
ಟಾಸ್ ಗೆದ್ದ ಟೀಂ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಅರ್ಷದೀಪ್ ಸಿಂಗ್ ಹೊರಗುಳಿದಿದ್ದು ಅವರ ಬದಲಿಗೆ ರವಿ ಬಿಷ್ಣೋಯಿ ಸ್ಥಾನ ಗಿಟ್ಟಿಸಿದ್ದಾರೆ.
ಭಾರತ ಮತ್ತು ಬಾಂಗ್ಲಾದೇಶ ನಡುವಿನ 3 ಪಂದ್ಯಗಳ ಟಿ20 ಸರಣಿಯ ಮೂರನೇ ಮತ್ತು ಕೊನೆಯ ಪಂದ್ಯವು ಹೈದರಾಬಾದ್ನ ರಾಜೀವ್ ಗಾಂಧಿ ಅಂತಾರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಮೊದಲೆರಡು ಪಂದ್ಯಗಳನ್ನು ಗೆಲ್ಲುವ ಮೂಲಕ ಟೀಂ ಇಂಡಿಯಾ ಈ ಸರಣಿಯಲ್ಲಿ ಅಜೇಯ ಮುನ್ನಡೆ ಸಾಧಿಸಿದೆ.