ಬಿಜೆಪಿಯ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ನೆನ್ನೆ ಕಾಂಗ್ರೆಸ್ ಸೇರ್ಪಡೆಯಾ ಗಿದ್ದು, ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಂದು ಬೆಳಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ರಾಜಕೀಯದಲ್ಲಿ ಅದಲು ಬದಲು ಆಟ, ಆಪರೇಷನ್ ಎಲ್ಲವೂ ಕಾಮನ್. ಇವತ್ತು ಜೊತೆಗೆ ಇದ್ದವರು ವಿರೋಧಿಗಳೂ ಆಗಬಹುದು. ಶತ್ರುಗಳು ಸ್ನೇಹಿತರೂ ಆಗಬಹುದು. ರಾಜಕೀಯದಲ್ಲಿ ಯಾವುದೂ ಅಸಾಧ್ಯವಲ್ಲ. ಅದೇ ರೀತಿ ರಾತ್ರಿ ಕಳೆದು ಬೆಳಗಾಗೋದ್ರೊಳಗೆ ಚನ್ನಪಟ್ಟಣದ ರಾಜಕೀಯ ನಾಟಕೀಯ ಬೆಳವಣಿಗೆಗೆ ಸಾಕ್ಷಿಯಾಗಿದೆ.
ಬಿಜೆಪಿ ತೊರೆದು ಕಾಂಗ್ರೆಸ್ ಸೇರ್ಪಡೆಯಾದ ಸಿ.ಪಿ. ಯೋಗೇಶ್ವರ್‌ಗೆ ಬೈ ಎಲೆಕ್ಷನ್ ಯೋಗ ಕೂಡಿ ಬಂದಿದೆ. ಕಾಂಗ್ರೆಸ್ ಹೈಕಮಾಂಡ್ ಯೋಗೇಶ್ವರ್‌ಗೆ ಟಿಕೆಟ್ ನೀಡಿದೆ. ಈ ಮೂಲಕ ಸೈನಿಕ ಮಿನಿಯುದ್ಧದ ಅಖಾಡಕ್ಕೆ ಅಧಿಕೃತವಾಗಿ ಎಂಟ್ರಿಕೊಟ್ಟಿದ್ದಾರೆ. ಇವತ್ತು ಬೆಳಗ್ಗೆ 11 ಗಂಟೆಗೆ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಬೈ ಎಲೆಕ್ಷನ್‌ಗೆ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.