ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ.
ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.