ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಇವತ್ತು ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಕೆ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ. ಬೊಂಬೆನಾಡಿನ ಕೈ ಅಧಿಪತಿಯಾಗಿ ಈಗಾಗಲೇ ಯೋಗೇಶ್ವರ್ ನಾಮಪತ್ರ ಸಲ್ಲಿಸಿದ್ದಾರೆ.
ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿ, ಬಳಿಕ ಚನ್ನಪಟ್ಟಣದ ಶೇರ್ವಾ ಹೋಟೆಲ್ ಸರ್ಕಲ್‌ನಿಂದ ರೋಡ್ ಶೋ ಮೂಲಕ ತಾಲೂಕು ಕಚೇರಿಗೆ ಆಗಮಿಸಲಿದ್ದಾರೆ. ಬಳಿಕ ಮಾಜಿ ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ಮಧ್ಯಾಹ್ನ 12ಗಂಟೆಗೆ ನಿಖಿಲ್ ನಾಮಪತ್ರ ಸಲ್ಲಿಸಲಿದ್ದಾರೆ.