ಆಸ್ಟ್ರೇಲಿಯಾ ವಿರುದ್ಧದ ಪ್ರತಿಷ್ಠಿತ ಬಾರ್ಡರ್ – ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. ಈ ಸರಣಿಗಾಗಿ ಒಟ್ಟು 18 ಸದಸ್ಯರನ್ನು ಆಯ್ಕೆ ಮಾಡಲಾಗಿದ್ದು, ಈ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ, ಉಪನಾಯಕನಾಗಿ ಜಸ್ ಪ್ರೀತ್ ಬುಮ್ರಾ ಕಾಣಿಸಿಕೊಳ್ಳಲಿದ್ದಾರೆ.
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ 5 ಪಂದ್ಯಗಳ ಟೆಸ್ಟ್ ಸರಣಿಯು ನವೆಂಬರ್ 22 ರಿಂದ ಶುರುವಾಗಲಿದೆ. ಮೊದಲ ಪಂದ್ಯವು ಪರ್ತ್ನಲ್ಲಿ ನಡೆದರೆ, ಎರಡನೇ ಪಂದ್ಯವು ಅಡಿಲೇಡ್ನಲ್ಲಿ ಜರುಗಲಿದೆ. ಹಾಗೆಯೇ ಮೂರನೇ ಪಂದ್ಯಕ್ಕೆ ಬ್ರಿಸ್ಬೇನ್ ಆತಿಥ್ಯವಹಿಸಿದರೆ, ನಾಲ್ಕನೇ ಪಂದ್ಯವು ಮೆಲ್ಬೋರ್ನ್ನಲ್ಲಿ ನಡೆಯಲಿದೆ. ಕೊನೆಯ ಪಂದ್ಯವು ಸಿಡ್ನಿಯಲ್ಲಿ ಜರುಗಲಿದೆ.
ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಅಭಿಮನ್ಯು ಈಶ್ವರನ್, ಶುಭ್ಮನ್ ಗಿಲ್ , ವಿರಾಟ್ ಕೊಹ್ಲಿ , ಕೆಎಲ್ ರಾಹುಲ್, ರಿಷಭ್ ಪಂತ್ (ವಿಕೆಟ್ ಕೀಪರ್), ಸರ್ಫರಾಝ್ ಖಾನ್, ಧ್ರುವ್ ಜುರೆಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ , ಮೊಹಮ್ಮದ್ ಸಿರಾಜ್ , ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಹರ್ಷಿತ್ ರಾಣ, ನಿತೀಶ್ ಕುಮಾರ್ ರೆಡ್ಡಿ, ವಾಷಿಂಗ್ಟನ್ ಸುಂದರ್.