ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ : ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ : ಸಿಎಂ ಸ್ಪಷ್ಟನೆ

ಸಿಎಂ ಸಿದ್ದರಾಮಯ್ಯ ಪತ್ನಿಗೆ ಮೂಡಾ ನಿವೇಶನ ಹಂಚಿಕೆ: ಸ್ವಾದೀನ ಮಾಡಿಕೊಂಡಿದ್ದ ಜಮೀನಿಗೆ ಪರ್ಯಾಯ ನಿವೇಶನ ನೀಡಿದ್ದಾರೆ: ಸಿಎಂ ಸ್ಪಷ್ಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಧರ್ಮಪತ್ನಿಯವರಿಗೆ ಸೇರಿದ ಜಮೀನನ್ನು ಮೂಡಾ ಸ್ವಾಧೀನ ಮಾಡಿಕೊಂಡಿದ್ದು, ಅದಕ್ಕೆ ಪರ್ಯಾಯವಾಗಿ 50: 50 ಅನುಪಾತದಲ್ಲಿ ಬೇರೆಡೆ ನಿವೇಶನಗಳನ್ನು ಬಿಜೆಪಿ ಅಧಿಕಾರದಲ್ಲಿದ್ದಾಗ ಕೊಡಲಾಗಿತ್ತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಬಿಜೆಪಿ ಅವರು ಅಧಿಕಾರದಲ್ಲಿರುವಾಗ ನಮಗೆ ನಿವೇಶನ ಕೊಟ್ಟಿದ್ದಾರೆ. ನನ್ನ ಪತ್ನಿಗೆ ಸೇರಿದ್ದ 3 ಎಕರೆ 16 ಗಂಟೆ ಜಮೀನು ರಿಂಗ್ ರೋಡ್ ಪಕ್ಕದ ಕೆಸರೆಯಲ್ಲಿದೆ. ಅದನ್ನು ನನ್ನ ಭಾವಮೈದುನ ಪಡೆದಿದ್ದು ನನ್ನ ಪತ್ನಿಗೆ ದಾನವಾಗಿ ಕೊಟ್ಟಿದ್ದಾರೆ. ನಾನು ಅಧಿಕಾರದಲ್ಲಿದ್ದಾಗ ತೆಗೆದುಕೊಳ್ಳಲು ಹೋಗಿಲ್ಲ. 50: 50 ಅನುಪಾತದಲ್ಲಿ ಕೊಡಬೇಕು ಎಂದು ಕಾನೂನು ಮಾಡಿದ್ದು ಬಿಜೆಪಿಯವರು. ನಮ್ಮ ಜಮೀನನ್ನು ಸ್ವಾಧೀನ ಮಾಡಿಕೊಳ್ಳದೇ ಮೂಡಾದವರು ನಿವೇಶನಗಳನ್ನು ಮಾಡಿ ಹಂಚಿದ್ದರು. ಹಂಚಿದ ಮೇಲೆ ನಮಗೆ ಕಾನೂನುಬದ್ಧವಾಗಿ ನಿವೇಶನ ಕೊಡಬೇಕು. ಅದರಂತೆ 50:50 ಕೊಡಲು ಒಪ್ಪಿದರು ಎಂದರು.

ಸರ್ಕಾರದ ನಿಯಮಾವಳಿ, ಆದೇಶದ ಪ್ರಕಾರ ಕೊಡಿ ಎಂದು ಬಿಜೆಪಿ ಅಧಿಕಾರದಲ್ಲಿದ್ದಾಗ ಕೇಳಿಕೊಂಡಿದ್ದೆವು. ಆಗ ಅವರು ಬೇರೆ ಬೇರೆ ಸ್ಥಳಗಳಲ್ಲಿ ಸಮಾನಾಂತರ ನಿವೇಶನಗಳನ್ನು ಕೊಟ್ಟಿದ್ದಾರೆ.ಇದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು.

  • Related Posts

    ತಿರುಪತಿಯ ಪ್ರಸಾದದಲ್ಲಿ ಹುಳುಗಳು ಪತ್ತೆ

    ತಿರುಪತಿಯ ಪ್ರಸಾದದಲ್ಲಿ ಹುಳುಗಳು ಸಿಕ್ಕಿವೆ ಎಂದು ಭಕ್ತರು ಆರೋಪಿಸಿದ್ದಾರೆ. ದೇವಾಲಯವನ್ನು ನೋಡಿಕೊಳ್ಳುವ ಟ್ರಸ್ಟ್ ತಿರುಮಲ ತಿರುಪತಿ ದೇವಸ್ಥಾನಮ್ (ಟಿಟಿಡಿ) ಈ ಆರೋಪವನ್ನು ತಳ್ಳಿಹಾಕಿದೆ. ಇದು ಸ್ವೀಕಾರಾರ್ಹವಲ್ಲ ಮತ್ತು ಟಿಟಿಡಿ ಅಧಿಕಾರಿಗಳ ನಿರ್ಲಕ್ಷ್ಯ ಎದ್ದು ತೋರುತ್ತಿದೆ ಎಂದು ಭಕ್ತರೊಬ್ಬರು ಹೇಳಿದ್ದಾರೆ. ಇದಕ್ಕೆ ಕಾರಣರಾದವರ…

    ದಳಪತಿ ವಿಜಯ್ ಕೊನೆಯ ಸಿನಿಮಾದ ಮುಹೂರ್ತ

    Leave a Reply

    Your email address will not be published. Required fields are marked *

    You Missed

    ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

    ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

    ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

    ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

    87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

    ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

    ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

    ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

    ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

    ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

    ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!