ಮಾಜಿ ಸಂಸದ ಸಿ.ಎಚ್. ವಿಜಯಶಂಕರ್ ಅವರನ್ನು ಮೇಘಾಲಯದ ನೂತನ ರಾಜ್ಯಪಾಲರನ್ನಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು ನೇಮಿಸಿದ್ದಾರೆ.
ಸಿ. ಎಚ್. ವಿಜಯಶಂಕರ್ ಅವರ ಪೂರ್ಣ ಹೆಸರು ಚಂದ್ರಶೇಖರ್ ಹೆಚ್. ವಿಜಯಶಂಕರ್. 1956ರ ಅಕ್ಟೋಬರ್ 21ರಂದು ಅವರು ಜನಿಸಿದರು. ಮೂಲತಃ ರಾಣೆಬೆನ್ನೂರಿನವರಾದ ಅವರು ರಾಜಕೀಯ ನೆಲೆ ಕಂಡುಕೊಂಡಿದ್ದು ಮೈಸೂರಿನಲ್ಲಿ.
ಸಿ. ಎಚ್. ವಿಜಯಶಂಕರ್ 1998ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದಿಂದ 1 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ಜಯಗಳಿಸಿ ಸಂಸದರಾಗಿ ಆಯ್ಕೆಯಾದರು. 2004ರ ಲೋಕಸಭೆ ಚುನಾವಣೆಯಲ್ಲಿ ಮೈಸೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದು, 316,442 ಮತಗಳನ್ನು ಪಡೆದು ಜೆಡಿಎಸ್‌ನ ಎ. ಎಸ್. ಗುರುಸ್ವಾಮಿ ಸೋಲಿಸಿ ಸಂಸದರಾಗಿ 2ನೇ ಬಾರಿಗೆ ಆಯ್ಕೆಯಾದರು.2014ರ ಲೋಕಸಭೆ ಚುನಾವಣೆಯಲ್ಲಿ ಸಿ. ಎಚ್. ವಿಜಯಶಂಕರ್ ಅವರನ್ನು ಬಿಜೆಪಿ ಹಾಸನ ಕ್ಷೇತ್ರದಿಂದ ಕಣಕ್ಕಿಳಿಸಿತು. 1,65,688 ಮತಗಳನ್ನು ಪಡೆದ ಅವರು ಜೆಡಿಎಸ್‌ನ ಎಚ್. ಡಿ. ದೇವೇಗೌಡರ ವಿರುದ್ಧ ಸೋತರು, ಚುನಾವಣೆಯಲ್ಲಿ 3ನೇ ಸ್ಥಾನವನ್ನು ಪಡೆದರು.