ಶಿಗ್ಗಾವಿಯಲ್ಲಿ ಭರತ್ ಬೊಮ್ಮಾಯಿ, ಸಂಡೂರಿನಲ್ಲಿ ಹನುಮಂತುಗೆ ಬಿಜೆಪಿ ಟಿಕೆಟ್
ಚನ್ನಪಟ್ಟಣ, ಶಿಗ್ಗಾವಿ ಮತ್ತು ಸಂಡೂರು ಈ ಮೂರೂ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಈ ಪೈಕಿ ಚನ್ನಪಟ್ಟಣ ಹೊರತುಪಡಿಸಿ ಶಿಗ್ಗಾವಿ ಮತ್ತು ಸಂಡೂರು ಕ್ಷೇತ್ರಗಳಿಗೆ ಬಿಜೆಪಿ ಉಮೇದುವಾರರನ್ನು ಪ್ರಕಟಿಸಿದೆ. ಶಿಗ್ಗಾವಿಯಿಂದ ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಪುತ್ರ ಭರತ್ ಅವರು ಕಣಕ್ಕಿಳಿಯಲಿದ್ದಾರೆ. ಹಾಗೆಯೇ ಸಂಡೂರಿನಿಂದ ಜನಾರ್ದನ್ ರೆಡ್ಡಿ ಆಪ್ತ ಬಂಗಾರು ಹನುಮಂತುಗೆ ಟಿಕೆಟ್ ನೀಡಲಾಗಿದೆ.
ಚನ್ನಪಟ್ಟಣದಲ್ಲಿ ಎನ್ಡಿಎ ಅಭ್ಯರ್ಥಿ ಇನ್ನೂ ಘೋಷಣೆಯಾಗದ ಕಾರಣ ಅಭ್ಯರ್ಥಿ ಹೆಸರನ್ನು ಪ್ರಕಟಿಸಿಲ್ಲ. ಬಿಜೆಪಿ ರಾಜ್ಯ ಘಟಕದ ಪಟ್ಟಿ ಬರುವ ಮುನ್ನವೇ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಣೆ ಮಾಡಿದೆ. ಬೆಲ್ಲದ್ ಸೇರಿದಂತೆ ಕೆಲ ಬಿಜೆಪಿ ನಾಯಕರು ಬೊಮ್ಮಾಯಿ ಪುತ್ರನ ಪರ ಬ್ಯಾಟಿಂಗ್ ಮಾಡಿದ್ದರು
ಇನ್ನು, ಚನ್ನಪಟ್ಟಣದಲ್ಲಿ ಕಾಂಗ್ರೆಸ್ನಿಂದ ಡಿಸಿಎಂ ಡಿ.ಕೆ. ಶಿವಕುಮಾರ್ ಸಹೋದರ ಡಿ.ಕೆ. ಸುರೇಶ್ ಕಣಕ್ಕಿಳಿಯಲಿದ್ದಾರೆ ಎನ್ನುವ ಮಾತುಗಳು ಕೇಳಿ ಬಂದಿವೆ. ಅತ್ತ ಎನ್ಡಿಎ ಮೈತ್ರಿಕೂಟದಿಂದ ಜೆಡಿಎಸ್ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಬಿಜೆಪಿ ಟಿಕೆಟ್ಗೆ ಸಿ.ಪಿ ಯೋಗೇಶ್ವರ್ ಪ್ರಯತ್ನಿಸಿದ್ರೂ ಈ ಕ್ಷೇತ್ರದಲ್ಲಿ ಜೆಡಿಎಸ್ಗೇ ಅವಕಾಶ ಹೆಚ್ಚು ಎನ್ನುವ ಸುದ್ದಿ ಹೊರಬಿದ್ದಿದೆ.