ಡಿವೈಎಸ್‍ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಸಚಿವ ಕೆ.ಜೆ ಜಾರ್ಜ್ ಸೇರಿದಂತೆ ಐಪಿಎಸ್ ಅಧಿಕಾರಿಗಳಾದ ಎ.ಎಂ ಪ್ರಸಾದ್ ಮತ್ತು ಪ್ರಣಬ್ ಮೊಹಂತಿಗೆ ಸುಪ್ರೀಂಕೋರ್ಟ್‍ನಿಂದ ಬಿಗ್ ರಿಲೀಫ್ ಸಿಕ್ಕಿದೆ. ಪ್ರಕರಣದಲ್ಲಿ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿದಿದೆ. ಪ್ರಕರಣದಲ್ಲಿ ಕೆ.ಜೆ ಜಾರ್ಜ್ ಪಾತ್ರವಿಲ್ಲ ಎಂದು ಹೈಕೋರ್ಟ್ ತೀರ್ಪು ನೀಡಿತ್ತು.
ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್‍ನಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ತಿಳಿಸಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು. ಸಿಬಿಐ ಹಾಗೂ ಸಿಐಡಿ ತನಿಖಾ ತಂಡಗಳು ಬಿ ರಿಪೋರ್ಟ್‍ನಲ್ಲಿ ಕೆ.ಜೆ ಜಾರ್ಜ್ ಅವರ ಪಾತ್ರವಿಲ್ಲ ಎಂದು ತನಿಖಾ ವರದಿಯಲ್ಲಿ ತಿಳಿಸಿದ್ದವು. ಈ ಸಂಬಂಧ ಕೆ.ಜೆ. ಜಾರ್ಜ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಹೈಕೋರ್ಟ್ ಪ್ರತಿವಾದಿಗಳ ದೂರನ್ನು ತಳ್ಳಿಹಾಕಿತ್ತು.