Good News 24×7 https://www.goodnews24x7.com/ Kannada Fri, 20 Dec 2024 10:42:07 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg Good News 24×7 https://www.goodnews24x7.com/ 32 32 ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್… https://www.goodnews24x7.com/c-t-ravi-shifted-from-belagavi-to-bengaluru/ https://www.goodnews24x7.com/c-t-ravi-shifted-from-belagavi-to-bengaluru/#respond Fri, 20 Dec 2024 10:42:07 +0000 https://www.goodnews24x7.com/?p=1220 ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

The post ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್… appeared first on Good News 24x7.

]]>
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್​ಗೆ ವರ್ಗಾವಣೆ​ ಮಾಡಿ ಆದೇಶಿಸಿದ್ದಾರೆ.

ಸಿ.ಟಿ.ರವಿ ಅವರನ್ನು ಬೆಳಗಾವಿಯಿಂದ ಗೌರವಯುತವಾಗಿ ಕರೆತರಲು ಕೋರ್ಟ್​ ಸೂಚನೆ ನೀಡಿದೆ. ಜೊತೆಗೆ​ ಟ್ರಾನ್ಸಿಟ್​ ವಾರೆಂಟ್​ ಕೊಟ್ಟಿದ್ದು, 24 ಗಂಟೆಯೊಳಗೆ ಬೆಂಗಳೂರು ಕೋರ್ಟ್​ಗೆ ಸಿ.ಟಿ.ರವಿ ಅವರನ್ನು ಹಾಜರು ಪಡಿಸಲು ಆದೇಶಿಸಿದೆ. ಬೆಳಗಾವಿ ಕೋರ್ಟ್‌ನಿಂದ ಬೆಂಗಳೂರು ತಲುಪುವ ಅವಧಿ ಹೊರತುಪಡಿಸಿ, ಬೆಂಗಳೂರು ತಲುಪಿದ ಕೂಡಲೇ ಜನ ಪ್ರತಿನಿಧಿಗಳ ನ್ಯಾಯಾಲಯಕ್ಕೆ ಹಾಜರು ಪಡಿಸಲು ಸೂಚನೆ ನೀಡಲಾಗಿದೆ. ಅಲ್ಲದೇ ಯಾವುದೇ ರೀತಿಯ ತೊಂದರೆ ಎಚ್ಚರವಹಿಸುವಂತೆಯೂ ಕೋರ್ಟ್‌ ತಾಕೀತು ಮಾಡಿದೆ.

The post ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್… appeared first on Good News 24x7.

]]>
https://www.goodnews24x7.com/c-t-ravi-shifted-from-belagavi-to-bengaluru/feed/ 0 1220
ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ! https://www.goodnews24x7.com/%e0%b2%aa%e0%b2%be%e0%b2%b0%e0%b3%8d%e0%b2%b8%e0%b3%86%e0%b2%b2%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%be%e0%b2%a8%e0%b2%b5/ https://www.goodnews24x7.com/%e0%b2%aa%e0%b2%be%e0%b2%b0%e0%b3%8d%e0%b2%b8%e0%b3%86%e0%b2%b2%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%be%e0%b2%a8%e0%b2%b5/#respond Fri, 20 Dec 2024 09:51:55 +0000 https://www.goodnews24x7.com/?p=1213 ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

The post ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ! appeared first on Good News 24x7.

]]>
ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ.
ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪಶ್ಚಿಮ ಗೋದಾವರಿ ಜಿಲ್ಲಾ ಎಸ್ಪಿ ನಯೀಮ್ ಅಸ್ಮಿ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಮನೆ ನಿರ್ಮಾಣಕ್ಕಾಗಿ ಮಹಿಳೆಯೊಬ್ಬರು ಕ್ಷತ್ರಿಯ ಸೇವಾ ಸಮಿತಿಯಿಂದ ಧನ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದರು. ಮೊದಲ ಹಂತದಲ್ಲಿ ಕ್ಷತ್ರಿಯ ಸೇವಾ ಸಮಿತಿಯಿಂದ ಮನೆ ನಿರ್ಮಾಣಕ್ಕೆ ಟೈಲ್ಸ್ ನೀಡಲಾಗಿತ್ತು. ನಂತರ, ಮಹಿಳೆ ಮತ್ತೆ ಆರ್ಥಿಕ ಸಹಾಯಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಇದರಿಂದ ಎರಡನೇ ಕಂತಿನಲ್ಲಿ ಪಾರ್ಸೆಲ್ನಲ್ಲಿ ವಿದ್ಯುತ್ ಉಪಕರಣಗಳ ಬದಲು ಮೃತದೇಹ ಸಿಕ್ಕಿದೆ. ಮೃತದೇಹವನ್ನು ನೋಡಿದ ಮಹಿಳೆಯ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ.

The post ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ! appeared first on Good News 24x7.

]]>
https://www.goodnews24x7.com/%e0%b2%aa%e0%b2%be%e0%b2%b0%e0%b3%8d%e0%b2%b8%e0%b3%86%e0%b2%b2%e0%b3%8d%e0%b2%a8%e0%b2%b2%e0%b3%8d%e0%b2%b2%e0%b2%bf-%e0%b2%87%e0%b2%a4%e0%b3%8d%e0%b2%a4%e0%b3%81-%e0%b2%ae%e0%b2%be%e0%b2%a8%e0%b2%b5/feed/ 0 1213
87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ.. https://www.goodnews24x7.com/87th-all-india-kannada-literary-conference-inaugurated-with-great-pomp/ https://www.goodnews24x7.com/87th-all-india-kannada-literary-conference-inaugurated-with-great-pomp/#respond Fri, 20 Dec 2024 09:49:31 +0000 https://www.goodnews24x7.com/?p=1211 87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

The post 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ.. appeared first on Good News 24x7.

]]>
87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು.

ಕರ್ನಾಟಕದಲ್ಲಿ ಅತಿ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆಯೆಂದು ಹೆಸರು ಪಡೆದಿರುವ ಹಾಗೂ ಸಕ್ಕರೆ ನಗರಿ ಎಂದೇ ಪ್ರಸಿದ್ಧವಾಗಿರುವ ಮಂಡ್ಯದಲ್ಲಿ ಆಯೋಜಿಸಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಅತ್ಯಂತ ಅಭಿಮಾನದಿಂದ ಹಾಗೂ ಸಂತೋಷದಿಂದ ಉದ್ಘಾಟಿಸಿದರು.

ಶ್ರೀ ಆದಿ ಚುಂಚನಗಿರಿ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿ ಅವರು ದಿವ್ಯ ಸಾನಿಧ್ಯ ವಹಿಸಿದ್ದರು. ಸಮ್ಮೇಳನಾಧ್ಯಕ್ಷರಾದ ನಾಡೋಜ ಡಾ. ಗೊ.ರು.ಚನ್ನಬಸಪ್ಪ, ಹಿರಿಯ ಸಾಹಿತಿಗಳಾದ ಡಾ. ದೊಡ್ಡರಂಗೇಗೌಡ, ಜ್ಞಾನ ಪೀಠ ಪ್ರಶಸ್ತಿ ಪುರಸ್ಕೃತರಾದ ಡಾ ಚಂದ್ರ ಶೇಖರ ಕಂಬಾರ, ವೇದಿಕೆಯ ಮೇಲೆ ಇದ್ದರು.

ಈ ಸಂದರ್ಭದಲ್ಲಿ ಕೃಷಿ ಸಚಿವರಾದ ಚೆಲುವನಾರಾಯಣಸ್ವಾಮಿ, ಸಮಾಜ ಕಲ್ಯಾಣ ಇಲಾಖೆಯ ಸಚಿವರಾದ ಡಾ ಹೆ.ಚ್.ಸಿ.ಮಹದೇವಪ್ಪ, ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರಾದ ಮುನಿಯಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರಾದ ಶಿವರಾಜ್ ತಂಗಡಗಿ, ಕರ್ನಾಟಕ ವಿಧಾನಸಭೆ ಉಪ ಸಭಾಧ್ಯಕ್ಷರಾದ ರುದ್ರಪ್ಪ ಲಮಾಣಿ, ಶಾಸಕರಾದ ಪಿ.ಎಂ.ನರೇಂದ್ರ ಸ್ವಾಮಿ, ಪಿ.ರವಿಕುಮಾರ್, ಎಂ.ಬಿ‌,ರಮೇಶ್ ಬಂಡಿ ಸಿದ್ದೇಗೌಡ, ದರ್ಶನ್ ಪುಟ್ಟಣ್ಣಯ್ಯ, ಕೆ.ಎಂ.ಉದಯ ಹಾಗೂ ಗಣ್ಯರು ಉಪಸ್ಥಿತರಿದ್ದರು.

The post 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ.. appeared first on Good News 24x7.

]]>
https://www.goodnews24x7.com/87th-all-india-kannada-literary-conference-inaugurated-with-great-pomp/feed/ 0 1211
ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ https://www.goodnews24x7.com/yava-he%e1%b9%87%e1%b9%87umakka%e1%b8%b7u-intaha-aropaga%e1%b8%b7a-bagge-su%e1%b8%b7%e1%b8%b7u-duru-ko%e1%b8%8dodilla-sie%e1%b9%81-siddaramayya-ctravi-laxmi-hebbalkar-samanyavagi-yava-he/ https://www.goodnews24x7.com/yava-he%e1%b9%87%e1%b9%87umakka%e1%b8%b7u-intaha-aropaga%e1%b8%b7a-bagge-su%e1%b8%b7%e1%b8%b7u-duru-ko%e1%b8%8dodilla-sie%e1%b9%81-siddaramayya-ctravi-laxmi-hebbalkar-samanyavagi-yava-he/#respond Fri, 20 Dec 2024 06:44:04 +0000 https://www.goodnews24x7.com/?p=1204 ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ.…

The post ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>
ಸಾಮಾನ್ಯವಾಗಿ ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡಲು ಸಾಧ್ಯವಿಲ್ಲ. ಅವಾಚ್ಯ ಪದ ಬಳಕೆ ಆರೋಪ ಸುಳ್ಳಾಗಿದ್ದರೆ ಸಿ.ಟಿ.ರವಿಯವರ ಬಂಧನವೇಕಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು.

ಹೆಣ್ಣುಮಕ್ಕಳಿಗೆ ಇಷ್ಟು ಕೆಟ್ಟ ಭಾಷೆಯಲ್ಲಿ ಅವಹೇಳನಕಾರಿಯಾಗಿ ಮಾತನಾಡಿರುವುದನ್ನು ಬಿಜೆಪಿಯವರು ಬೆಂಬಲಿಸುತ್ತಿದ್ದಾರೆ. ಸಿ.ಟಿ. ರವಿಯವರು ಕೀಳುಭಾಷೆ ಬಳಸಿದ್ದನ್ನು ಸ್ಥಳದಲ್ಲಿದ್ದವರು ಕೇಳಿಸಿಕೊಂಡಿದ್ದಾರೆ. ಅಷ್ಟು ಕೆಟ್ಟ ಮಾತು ಆಡಿರುವುದಕ್ಕೆ ಸಾಕ್ಷಿಯಾದ ಆಡಿಯೊ, ವಿಡಿಯೊ ಇದೆ ಎಂದು ಹೇಳಿದ್ದಾರೆ. ಆದರೆ ನಾನು ಅದನ್ನು ನೋಡಿಲ್ಲ. ರವಿ ಹೇಳಿದ್ದು ಸುಳ್ಳಾದರೆ, ಅವರ ಬಂಧನವೇಕಾಯಿತು? ಸಾಮಾನ್ಯವಾಗಿ ಇಂತಹ ಆರೋಪಗಳ ಬಗ್ಗೆ ಹೆಣ್ಣುಮಕ್ಕಳು ಸುಳ್ಳು ದೂರು ಕೊಡುವುದಿಲ್ಲ. ಸಿ.ಟಿ.ಯವರು ಅವಾಚ್ಯ ಪದ ಏಕೆ ಬಳಸಿದರೆಂದು ನನಗೆ ತಿಳಿದಿಲ್ಲ.ಇದೊಂದು ಕ್ರಿಮಿನಲ್ ಅಪರಾಧ ಎಂದರು.

ಸಭಾಪತಿ ಬಸವರಾಜ ಹೊರಟ್ಟಿಯವರು, ಸಿಟಿ ರವಿಯವರು ಕೆಟ್ಟ ಎಂಬ ಪದ ಬಳಸಿದ್ದಾರೆಂದು ತಿಳಿಸಿರುವ ಬಗ್ಗೆ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಸಿ.ಟಿ.ರವಿಯವರು ತಾನು ಕೆಟ್ಟ ಪದ ಬಳಸಿರುವುದಾಗಿ ತಿಳಿಸಿದ್ದಾರೆ. ಇದು after thought ಮಾತು. ಈಗ ಆ ರೀತಿ ಹೇಳುತ್ತಿದ್ದಾರೆ. ಆದರೆ ಅವಾಚ್ಯ ಪದ ಬಳಸಿರುವುದು ನಿಜವಾಗಿರುವುದಕ್ಕೇ ಸಚಿವರು ದೂರು ನೀಡಿದ್ದಾರೆ ಎಂದರು.

The post ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ appeared first on Good News 24x7.

]]>
https://www.goodnews24x7.com/yava-he%e1%b9%87%e1%b9%87umakka%e1%b8%b7u-intaha-aropaga%e1%b8%b7a-bagge-su%e1%b8%b7%e1%b8%b7u-duru-ko%e1%b8%8dodilla-sie%e1%b9%81-siddaramayya-ctravi-laxmi-hebbalkar-samanyavagi-yava-he/feed/ 0 1204
ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್. https://www.goodnews24x7.com/%e0%b2%b8%e0%b2%be%e0%b2%b0%e0%b2%bf%e0%b2%97%e0%b3%86-%e0%b2%87%e0%b2%b2%e0%b2%be%e0%b2%96%e0%b3%86%e0%b2%af%e0%b2%bf%e0%b2%82%e0%b2%a6-%e0%b2%b5%e0%b3%88%e0%b2%9f%e0%b3%8d-%e0%b2%ac%e0%b3%8b/ https://www.goodnews24x7.com/%e0%b2%b8%e0%b2%be%e0%b2%b0%e0%b2%bf%e0%b2%97%e0%b3%86-%e0%b2%87%e0%b2%b2%e0%b2%be%e0%b2%96%e0%b3%86%e0%b2%af%e0%b2%bf%e0%b2%82%e0%b2%a6-%e0%b2%b5%e0%b3%88%e0%b2%9f%e0%b3%8d-%e0%b2%ac%e0%b3%8b/#respond Wed, 18 Dec 2024 11:03:57 +0000 https://www.goodnews24x7.com/?p=1201 ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.…

The post ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್. appeared first on Good News 24x7.

]]>
ಬೆಂಗಳೂರು :- ಟ್ರಾವೆಲ್ಸ್ ಮಾಲೀಕರು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಬಾಡಿಗೆಗೆ ನೀಡುತ್ತಿದ್ದಾರೆ. ಇದರಿಂದ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಸಾರಿಗೆ ಇಲಾಖೆ ಆ ಕಾರುಗಳನ್ನು ಸೀಜ್ ಮಾಡುವ ಮೂಲಕ ಟ್ರಾವೆಲ್ಸ್ ಮಾಲೀಕರಿಗೆ ಶಾಕ್ ನೀಡಿದೆ.
ನಗರದಲ್ಲಿ ಇಂದು ಸಾರಿಗೆ ಇಲಾಖೆ ಬೃಹತ್ ಕಾರ್ಯಾಚರಣೆ ಮಾಡುವ ಮೂಲಕ, ಜಾಗ್ವಾರ್, ಬಿಎಂಡಬ್ಲೂ, ರೇಂಜ್ ರೋವರ್, ಸೇರಿದಂತೆ ಕೋಟ್ಯಂತರ ರೂ. ಬೆಲೆಬಾಳುವ 25 ಐಷಾರಾಮಿ ಕಾರುಗಳನ್ನು ಆರ್ಡಿಓ ಅಧಿಕಾರಿಗಳು ಸೀಜ್ ಮಾಡಿದ್ದಾರೆ. ಜೊತೆಗೆ 50 ಲಕ್ಷ ರೂ. ದಂಡ ವಸೂಲಿ ಮಾಡಿದ್ದಾರೆ.
ಯಶವಂತಪುರ, ರಾಜಾಜಿ ನಗರ, ಮತ್ತಿಕೆರೆ, ಪೀಣ್ಯ, ಮಲ್ಲೇಶ್ವರಂ ಸೇರಿದಂತೆ ಅಕ್ಕಪಕ್ಕದ ಏರಿಯಾಗಳಲ್ಲಿ ಪ್ರತಿ ತಂಡದಲ್ಲೂ ಸಾರಿಗೆ ಇಲಾಖೆಯ ಇನ್ಸ್ಪೆಕ್ಟರ್ ಒಳಗೊಂಡಂತೆ ಒಟ್ಟು 9 ತಂಡಗಳಿಂದ ಕಾರ್ಯಾಚರಣೆ ಮಾಡಲಾಗಿದೆ.
ಟ್ರಾವೆಲ್ಸ್ ಮಾಲೀಕರು ಔಡಿ, ಬಿಎಂಡಬ್ಲೂ, ಬೆನ್ಜ್, ವೋಲ್ವೋ ಸೇರಿದಂತೆ ಸಾಕಷ್ಟು ಐಷಾರಾಮಿ ವೈಟ್ ಬೋರ್ಡ್ ಕಾರುಗಳನ್ನು ಸೆಲೆಬ್ರಿಟಿಗಳಿಗೆ ಯೆಲ್ಲೋ ಬೋರ್ಡ್ ರೀತಿಯಲ್ಲಿ ಬಾಡಿಗೆಗೆ ನೀಡುತ್ತಿದ್ದಾರೆ. ನಿಯಮದ ಪ್ರಕಾರ ವೈಟ್ ಬೋರ್ಡ್ ಕಾರು ಇರುವುದು ಸ್ವಂತ ಬಳಕೆಗೆ. ಆದರೆ, ವೈಟ್ ಬೋರ್ಡ್ ಐಷಾರಾಮಿ ಕಾರುಗಳನ್ನು ದೊಡ್ಡ ಸಿನಿಮಾ ನಟರು ಸೇರಿದಂತೆ ಸೆಲೆಬ್ರಿಟಿಗಳಿಗೆ ಬಾಡಿಗೆ ನೀಡಲು ಬಳಕೆ ಮಾಡಲಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸಾರಿಗೆ ಇಲಾಖೆಗೆ ಕೋಟ್ಯಂತರ ರೂ. ನಷ್ಟ ಉಂಟಾಗುತ್ತಿದೆ. ಹಾಗಾಗಿ ಇಂದು ಆ ಕಾರುಗಳನ್ನು ಸೀಜ್ ಮಾಡಲಾಗಿದೆ.
ಇನ್ನು ಈ ವೇಳೆ ತೆರಿಗೆ ಕಟ್ಟದ, ವೈಟ್ ಬೋರ್ಡ್ನಲ್ಲಿ ಬೇರೆ ಬೇರೆ ರಾಜ್ಯದ ವಾಹನಗಳು ಅನಧಿಕೃತವಾಗಿ ಬೆಂಗಳೂರಿನಲ್ಲಿ ಸಂಚಾರ ಮಾಡುತ್ತಿರುವ ಮತ್ತು ಟ್ರಾವೆಲ್ಸ್ ನಡೆಸುತ್ತಿರುವ ವೈಟ್ ಬೋರ್ಡ್ ಕಾರುಗಳನ್ನು ಸೀಜ್ ಮಾಡಿದ್ದಾರೆ.

The post ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್. appeared first on Good News 24x7.

]]>
https://www.goodnews24x7.com/%e0%b2%b8%e0%b2%be%e0%b2%b0%e0%b2%bf%e0%b2%97%e0%b3%86-%e0%b2%87%e0%b2%b2%e0%b2%be%e0%b2%96%e0%b3%86%e0%b2%af%e0%b2%bf%e0%b2%82%e0%b2%a6-%e0%b2%b5%e0%b3%88%e0%b2%9f%e0%b3%8d-%e0%b2%ac%e0%b3%8b/feed/ 0 1201
ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್! https://www.goodnews24x7.com/%e0%b2%8e%e0%b2%b7%e0%b3%8d%e0%b2%9f%e0%b3%87-%e0%b2%b0%e0%b3%87%e0%b2%a1%e0%b3%8d-%e0%b2%ae%e0%b2%be%e0%b2%a1%e0%b2%bf%e0%b2%a6%e0%b3%8d%e0%b2%b0%e0%b3%82-%e0%b2%85%e0%b2%a6%e0%b3%87-%e0%b2%b0/ https://www.goodnews24x7.com/%e0%b2%8e%e0%b2%b7%e0%b3%8d%e0%b2%9f%e0%b3%87-%e0%b2%b0%e0%b3%87%e0%b2%a1%e0%b3%8d-%e0%b2%ae%e0%b2%be%e0%b2%a1%e0%b2%bf%e0%b2%a6%e0%b3%8d%e0%b2%b0%e0%b3%82-%e0%b2%85%e0%b2%a6%e0%b3%87-%e0%b2%b0/#respond Wed, 18 Dec 2024 10:49:31 +0000 https://www.goodnews24x7.com/?p=1196 ಬೆಂಗಳೂರು : ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ರಾಜಾತಿಥ್ಯ ಕೇಸ್ ಬಳಿಕ ಜೈಲ್ನಲ್ಲಿ ಸಾಕಷ್ಟು ಮೊಬೈಲ್ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್…

The post ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್! appeared first on Good News 24x7.

]]>
ಬೆಂಗಳೂರು : ಸೆಂಟ್ರಲ್ ಜೈಲ್ ಪರಪ್ಪನ ಅಗ್ರಹಾರದಲ್ಲಿ ದರ್ಶನ್ ರಾಜಾತಿಥ್ಯ ಕೇಸ್ ಬಳಿಕ ಜೈಲ್ನಲ್ಲಿ ಸಾಕಷ್ಟು ಮೊಬೈಲ್ ಪತ್ತೆ ಆಗಿದ್ದವು. ಸಿಸಿಬಿ ಅಧಿಕಾರಿಗಳು ರೇಡ್ ಮಾಡಿ, ಕಟ್ಟುನಿಟ್ಟಿನ ಕ್ರಮಕೈಗೊಂಡಿದ್ದರೂ ಮೊಬೈಲ್ ಬಳಕೆ ನಿಯಂತ್ರಣಕ್ಕೆ ಬಂದಿರಲಿಲ್ಲ. ಇದೀಗ ಪರಪ್ಪನ ಅಗ್ರಹಾರದಲ್ಲಿ ಮತ್ತೆ ಮೊಬೈಲ್ ಬಳಕೆ ಮಾಡಲಾಗುತ್ತಿದ್ದು, ಆ ಮೂಲಕ ಆರೋಪಿಗಳು ಜೈಲಿನಿಂದಲೇ ಹಣಕ್ಕಾಗಿ ಧಮ್ಕಿ ಮತ್ತು ಡ್ರಗ್ ಡೀಲಿಂಗ್ ಮಾಡುತ್ತಿದ್ದಾರೆ.

ಸೆಂಟ್ರಲ್ ಜೈಲ್ನಲ್ಲಿ ಇದೀಗ ಮತ್ತೆ ಮೊಬೈಲ್ ಬಳಕೆಯಿಂದಾಗಿ ರೌಡಿಗಳು ಮತ್ತು ಡ್ರಗ್ಸ್ ಡೀಲರ್ಗಳ ಆಟಾಟೋಪ ಮುಂದುವರಿದಿದೆ. ಆರೋಪಿಗಳು, ಶಿಕ್ಷೆಗೆ ಒಳಪಟ್ಟ ಖೈದಿಗಳಿಂದ ಮೊಬೈಲ್ ಬಳಕೆ ನಿತ್ಯ ನಿರಂತರವಾಗಿದೆ.
ಹೊರಗಡೆಗಿಂತ ಪರಪ್ಪನ ಅಗ್ರಹಾರ ಜೈಲೇ ಕ್ರಿಮಿನಲ್ಗಳಿಗೆ ಸೇಫ್ ಆಯ್ತಾ ಎಂಬ ಅನುಮಾನಗಳು ಶುರುವಾಗಿವೆ. ಜೈಲಿನ ಖೈದಿಗಳು ರಾಜರೋಷವಾಗಿ ಮೊಬೈಲ್ ಬಳಸುತ್ತಿದ್ದಾರೆ. ಇದಕ್ಕೆ ಸಾಲು ಸಾಲು ಸಾಕ್ಷಿಗಳು ಸಿಕ್ಕಿವೆ. ಜೈಲಿನಲ್ಲಿ ಇನ್ನೂ 250-300 ಮೊಬೈಲ್ಗಳು ಇರುವ ಮಾಹಿತಿಯಿದೆ.
ಜೈಲಿನಲ್ಲೇ ಕೂತು ಸೈಕೋ ವಿಶ್ವನಾಥ್ ಎಂಬ ರೌಡಿಯಿಂದ ವ್ಯಾಪಾರಿಯೊಬ್ಬರಿಗೆ ಫೋನ್ ಮಾಡಿ ಹಣಕ್ಕಾಗಿ ಧಮ್ಕಿ ಹಾಕಲಾಗಿದೆ. ಪ್ರತಿ ವಾರ 40 ಸಾವಿರ ರೂ. ಹಣ ಹಫ್ತಾ ಕೊಡಬೇಕು ಇಲ್ಲ ಕೊಲೆ ಮಾಡುವುದಾಗಿ ಬೆದರಿಕೆ ನೀಡಲಾಗಿದೆ. ಈ ಸಂಬಂಧ ಸೈಕೋ ವಿಶ್ವನಾಥ್ ವಿರುದ್ಧ ಸಿಸಿಬಿಗೆ ವ್ಯಾಪಾರಿ ದೂರು ನೀಡಿದ್ದಾರೆ. ಸದ್ಯ ಬಾಡಿ ವಾರೆಂಟ್ ಮೇಲೆ ಸೈಕೋ ವಿಶ್ವನಾಥ್ ವಶಕ್ಕೆ ಪಡೆದು ಸಿಸಿಬಿ ಪೊಲೀಸರಿಂದ ವಿಚಾರಣೆ ಮಾಡಲಾಗಿದೆ.
ಪರಪ್ಪನ ಜೈಲಿನಲ್ಲೇ ಕೂತು ಬೆಂಗಳೂರಿನಲ್ಲಿ ಡ್ರಗ್ಸ್ ಪೆಡ್ಲಿಂಗ್ ಮಾಡಲಾಗುತ್ತಿದೆ. ಡ್ರಗ್ಸ್ ಕೇಸ್ನಲ್ಲಿ ಜೈಲಿಗೆ ಹೋಗಿರುವ ಆರೋಪಿಯಿಂದಲೇ ಡ್ರಗ್ಸ್ ಡೀಲಿಂಗ್ ಮಾಡಲಾಗುತ್ತಿದೆ. ಇತ್ತೀಚೆಗೆ ಸಿಸಿಬಿ ಪೊಲೀಸರು ಡ್ರಗ್ಸ್ ಅಡ್ಡೆ ಮೇಲೆ ದಾಳಿ ಮಾಡಿದ್ದರು. ಇಬ್ಬರನ್ನ ಬಂಧಿಸಿ ವಿಚಾರಣೆ ಮಾಡಿದಾಗ ಮತ್ತೊಬ್ಬನ ಬಗ್ಗೆ ಮಾಹಿತಿ ನೀಡಿದ್ದರು. ಪರಪ್ಪನ ಅಗ್ರಹಾರ ಜೈಲಿನಲ್ಲಿ ಕುಳಿತ ಆ ಆರೋಪಿ ಡ್ರಗ್ಸ್ ಮಾರಾಟ ಮಾಡಿಸುತ್ತಿದ್ದ. ಆತನ ಸೂಚನೆಯಂತೆ ಡ್ರಗ್ಸ್ ಕಲೆಕ್ಟ್ ಮಾಡಿ ಪೋರ್ಟರ್ ಮೂಲಕ ಮಾರಾಟ ಮಾಡುತ್ತಿದ್ದರು. ಸದ್ಯ ಈತನನ್ನೂ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆಯಲು ಸಿಸಿಬಿ ಸಿದ್ದತೆ ನಡೆಸಿದೆ.
ಜೈಲಿನಲ್ಲೇ ಕೂತು ಬಾಲಕೃಷ್ಣ ಎಂಬಾತನಿಂದ ನಗರದಲ್ಲಿ ಗಾಂಜಾ ಡೀಲಿಂಗ್ ಮಾಡಲಾಗಿದೆ. ಅಶೋಕ ನಗರ ಪೊಲೀಸರಿಂದ ನಾಲ್ವರು ಆರೋಪಿಗಳನ್ನ ಬಂಧಿಲಾಗಿತ್ತು. ಶ್ರೀಕಾಂತ್, ಮುನಿರಾಜು, ಚಂದ್ರಕಾಂತ್, ಬಾಲಕೃಷ್ಣ@ ಜಿಗಣಿ ಬಾಲು ಬಂಧಿತರು. ಆರೋಪಿಗಳು ವಿಶಾಖಪಟ್ಟಣದಿಂದ ಬೆಂಗಳೂರಿಗೆ ಗಾಂಜಾ ಸಾಗಿಸುತ್ತಿದ್ದರು.
ಆರೋಪಿಗಳ ಪೈಕಿ ಜಿಗಣಿ ಬಾಲು ಕ್ರೈಂ ಕೇಸ್ವೊಂದರಲ್ಲಿ ಜೈಲು ಸೇರಿದ್ದ. ಆದರೆ ಜೈಲಿನಲ್ಲಿ ಕೂತು ಗಾಂಜಾ ವ್ಯವಹಾರ ನಡೆಸುತ್ತಿದ್ದ. ಸದ್ಯ ಗಾಂಜಾ ಕೇಸ್ನಲ್ಲಿ ಬಾಡಿ ವಾರೆಂಟ್ ಮೇಲೆ ವಶಕ್ಕೆ ಪಡೆದು ವಿಚಾರಣೆ ಮಾಡಲಾಗುತ್ತಿದೆ.

The post ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್! appeared first on Good News 24x7.

]]>
https://www.goodnews24x7.com/%e0%b2%8e%e0%b2%b7%e0%b3%8d%e0%b2%9f%e0%b3%87-%e0%b2%b0%e0%b3%87%e0%b2%a1%e0%b3%8d-%e0%b2%ae%e0%b2%be%e0%b2%a1%e0%b2%bf%e0%b2%a6%e0%b3%8d%e0%b2%b0%e0%b3%82-%e0%b2%85%e0%b2%a6%e0%b3%87-%e0%b2%b0/feed/ 0 1196
14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ https://www.goodnews24x7.com/14-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%b5%e0%b2%bf%e0%b2%95%e0%b3%8d%e0%b2%b8%e0%b3%8d-%e0%b2%a1%e0%b2%ac%e0%b3%8d%e0%b2%ac%e0%b2%a6-%e0%b2%ae%e0%b3%81/ https://www.goodnews24x7.com/14-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%b5%e0%b2%bf%e0%b2%95%e0%b3%8d%e0%b2%b8%e0%b3%8d-%e0%b2%a1%e0%b2%ac%e0%b3%8d%e0%b2%ac%e0%b2%a6-%e0%b2%ae%e0%b3%81/#respond Tue, 17 Dec 2024 13:12:21 +0000 https://www.goodnews24x7.com/?p=1191 ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ. ಸರೆಡಿ ಗ್ರಾಮದ…

The post 14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ appeared first on Good News 24x7.

]]>
ರಾಜಸ್ಥಾನ: ಆಟವಾಡುತ್ತಲೇ ವಿಕ್ಸ್ ಡಬ್ಬದ ಮುಚ್ಚಳ ನುಂಗಿ 14 ತಿಂಗಳ ಮಗು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಬನ್ಸ್ವಾರಾದಲ್ಲಿ ನಡೆದಿದೆ. ಮದುವೆಯಾಗಿ 18 ವರ್ಷಗಳ ಬಳಿಕ ಹುಟ್ಟಿದ ಮಗು ಈಗ ದುರಂತ ಅಂತ್ಯ ಕಂಡಿದ್ದು, ಪೋಷಕರ ಆಕ್ರೋಶ ಮುಗಿಲು ಮುಟ್ಟಿದೆ.

ಸರೆಡಿ ಗ್ರಾಮದ ನಿವಾಸಿ ಹೀರೆನ್ ಜೋಶಿ ಅವರ ಮಗ ಮಾನ್ವಿಕ್(14 ತಿಂಗಳು) ಸೋಮವಾರ ರಾತ್ರಿ ಮನೆಯಲ್ಲಿದ್ದ ವಿಕ್ಸ್ ಡಬ್ಬಿಯ ಜೊತೆಗೆ ಆಟವಾಡುತ್ತಿದ್ದನು. ಮಗು ಆಟವಾಡುತ್ತಿರುವುದನ್ನು ಗಮನಿಸದ ಪೋಷಕರು ತಮ್ಮದೇ ಕೆಲಸದಲ್ಲಿ ತೊಡಗಿದ್ದಾರೆ. ಆದರೆ ಇದಕ್ಕಿದ್ದಂತೆ ಮಗು ಉಸಿರಾಡಲು ಸಾಧ್ಯವಾಗದೇ ನೆಲದಲ್ಲಿ ಬಿದ್ದು ಹೊರಲಾಡುತ್ತಿರುವುದು ಕಂಡುಬಂದಿದೆ. ಈ ವೇಳೆ ಮಗುವಿನ ಪೋಷಕರು ಪರಿಶೀಲಿಸಿದಾಗ ಗಂಟಲಲ್ಲಿ ವಿಕ್ಸ್ ಡಬ್ಬದ ಮುಚ್ಚಳ ಪತ್ತೆಯಾಗಿದೆ. ಪ್ರಾರಂಭದಲ್ಲಿ ಮಗುವಿನ ಪೋಷಕರು ಮುಚ್ಚಳ ತೆಗೆಯಲು ಪ್ರಯತ್ನಿಸಿದ್ದಾರೆ, ಆದರೆ ಸಾಧ್ಯವಾಗದೇ ಹತ್ತಿರದ ಆಸ್ಪತ್ರೆಗೆ ಕರೆದೊಯ್ದಿದ್ದಿದ್ದಾರೆ. ಆದರೆ ಅಲ್ಲಿ ವೈದ್ಯರು ಸಿಗದ ಕಾರಣ ಪೋಷಕರು ಮಗುವನ್ನು ಬಾಂಸ್ವಾಡ ಜಿಲ್ಲಾ ಆಸ್ಪತ್ರೆಗೆ ಕರೆದುಕೊಂಡು ಹೋಗುತ್ತಿದ್ದಾಗಲೇ ದಾರಿ ಮಧ್ಯೆ ಮಗು ಉಸಿರು ಚೆಲ್ಲಿದೆ.
ವೈದ್ಯರಿಲ್ಲದ ಕಾರಣ ಸಕಾಲಕ್ಕೆ ಚಿಕಿತ್ಸೆ ದೊರೆಯದೆ ಮಗು ಪ್ರಾಣ ಕಳೆದುಕೊಂಡಿದೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ತಡರಾತ್ರಿ ಕುಟುಂಬಸ್ಥರು ಹಾಗೂ ಸ್ಥಳೀಯರು ಸಮುದಾಯ ಆರೋಗ್ಯ ಕೇಂದ್ರಕ್ಕೆ ಆಗಮಿಸಿ ಪ್ರತಿಭಟನೆ ನಡೆಸಿದ್ದಾರೆ. ಮೃತ ಮಗುವಿನ ತಂದೆ ಹಿರೇನ್ ಜೋಶಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕ ರಾಗಿದ್ದು, ಇವರಿಗೆ ಈಗಾಗಲೇ ಎರಡು ಹೆಣ್ಣು ಮಕ್ಕಳಿದ್ದಾರೆ. ಆದರೆ ಗಂಡು ಮಗನಿಗಾಗಿ 18ವರ್ಷಗಳಿಂದ ಹಾತೊರೆಯುತ್ತಿದ್ದರು. ಅದರಂತೆ ಗಂಡು ಮಗು ಜನಿಸಿದ್ದು, ಇದೀಗ ಮಗುವಿನ ಅಕಾಲಿಕ ಸಾವು ತೀವ್ರ ಅಘಾತ ಉಂಟುಮಾಡಿದೆ.

The post 14 ತಿಂಗಳ ಮಗು ವಿಕ್ಸ್ ಡಬ್ಬದ ಮುಚ್ಚಳ ನುಂಗಿ ಸಾ* ; 18ವರ್ಷಗಳ ಬಳಿಕ ಜನಿಸಿದ ಮಗುವಿನ ದುರಂತ ಅಂತ್ಯ appeared first on Good News 24x7.

]]>
https://www.goodnews24x7.com/14-%e0%b2%a4%e0%b2%bf%e0%b2%82%e0%b2%97%e0%b2%b3-%e0%b2%ae%e0%b2%97%e0%b3%81-%e0%b2%b5%e0%b2%bf%e0%b2%95%e0%b3%8d%e0%b2%b8%e0%b3%8d-%e0%b2%a1%e0%b2%ac%e0%b3%8d%e0%b2%ac%e0%b2%a6-%e0%b2%ae%e0%b3%81/feed/ 0 1191
ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ. https://www.goodnews24x7.com/%e0%b2%9c%e0%b3%80%e0%b2%b5%e0%b2%82%e0%b2%a4-%e0%b2%95%e0%b3%8b%e0%b2%b3%e0%b2%bf-%e0%b2%a8%e0%b3%81%e0%b2%82%e0%b2%97%e0%b2%bf-%e0%b2%aa%e0%b3%8d%e0%b2%b0%e0%b2%be%e0%b2%a3-%e0%b2%95%e0%b2%b3/ https://www.goodnews24x7.com/%e0%b2%9c%e0%b3%80%e0%b2%b5%e0%b2%82%e0%b2%a4-%e0%b2%95%e0%b3%8b%e0%b2%b3%e0%b2%bf-%e0%b2%a8%e0%b3%81%e0%b2%82%e0%b2%97%e0%b2%bf-%e0%b2%aa%e0%b3%8d%e0%b2%b0%e0%b2%be%e0%b2%a3-%e0%b2%95%e0%b2%b3/#respond Tue, 17 Dec 2024 12:39:52 +0000 https://www.goodnews24x7.com/?p=1187 ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ. ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ…

The post ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ. appeared first on Good News 24x7.

]]>
ಸುರ್ಗುಜಾ: ಮಾಟಗಾರನ ಸಲಹೆಯಂತೆ ಜೀವಂತ ಕೋಳಿ ನುಂಗಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ ಘಟನೆ ಛತ್ತೀಸ್ಗಢದ ಸುರ್ಗುಜಾದಲ್ಲಿ ನಡೆದಿದೆ.
ಛಿಂದಕಲೊ ಗ್ರಾಮದ ಆನಂದ್ ಕುಮಾರ್ ಯಾದವ್ ಸಾವನ್ನಪ್ಪಿದ ವ್ಯಕ್ತಿ. ಗಂಡು ಮಗುವಿಗೆ ಹಪಹಪಿಸುತ್ತಿದ್ದ ಈತ ತಾಂತ್ರಿಕ್ (ಮಾಟಗಾರ)ವೊಬ್ಬನ ಮೊರೆ ಹೋಗಿದ್ದಾನೆ. ಆಗ ಆತ ಜೀವಂತ ಕೋಳಿಯನ್ನು ನುಂಗಲು ಸಲಹೆ ನೀಡಿದ್ದಾನೆ. ಅದರನುಸಾರ ಡಿಸೆಂಬರ್ 14ರಂದು ಆನಂದ್, ಜೀವಂತ ಕೋಳಿ ತಿಂದು ಪ್ರಜ್ಞೆ ತಪ್ಪಿ, ಕುಸಿದು ಬಿದ್ದಿದ್ದಾನೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.

ತಕ್ಷಣಕ್ಕೆ ಆತನನ್ನು ಅಂಬಿಕಪುರ್ನಲ್ಲಿನ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾನೆ. ಸಾವಿಗೆ ನಿಖರ ಕಾರಣ ತಿಳಿಯಲು ಮರಣೋತ್ತರ ಪರೀಕ್ಷೆ ನಡೆಸಿದ ವೈದ್ಯರು ಅಚ್ಚರಿ ವ್ಯಕ್ತಪಡಿಸಿದರು. ಆತನ ಎಲ್ಲಾ ಅಂಗಾಂಗಗಳನ್ನು ಪರೀಕ್ಷಿಸಿದಾಗ ಯಾವುದೇ ವೈದ್ಯಕೀಯ ಸಮಸ್ಯೆ ಕಂಡುಬಂದಿರಲಿಲ್ಲ. ಬಳಿಕ ಕುತ್ತಿಗೆ ಸೀಳಿದಾಗ ಜೀವಂತ ಕೋಳಿ ಸಿಲುಕಿರುವುದು ಗೊತ್ತಾಯಿತು. ಆನಂದ್ನ ಶ್ವಾಸನಾಳ ಮತ್ತು ಅನ್ನನಾಳದಲ್ಲಿ ಕೋಳಿ U ಆಕಾರದಲ್ಲಿ ಸಿಲುಕಿಕೊಂಡ ಪರಿಣಾಮ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ. ಗಂಟಲಿನಲ್ಲಿ ಕೋಳಿ ಸಿಲುಕಿ ನುಂಗಲು ಸಾಧ್ಯವಾಗದೇ ಉಸಿರುಗಟ್ಟಿ ಸಾವನ್ನಪ್ಪಿದ್ದಾನೆ ಎಂದು ವೈದ್ಯರು ಪೊಲೀಸರಿಗೆ ತಿಳಿಸಿದ್ದಾರೆ.
ಎಎಸ್ಪಿ ಅಮೊಲಕ್ ಸಿಂಗ್ ದಿಲೊನ್ ಮಾತನಾಡಿ, “ಅಂತಿಮ ಮರಣೋತ್ತರ ಪರೀಕ್ಷಾ ವರದಿಗೆ ಕಾಯುತ್ತಿದ್ದೇವೆ. ಇದು ಜನರಲ್ಲಿರುವ ಮೌಢ್ಯದ ಅಭ್ಯಾಸಗಳು ಮತ್ತು ಅದರಿಂದ ಎದುರಾಗುವ ಅಪಾಯವನ್ನು ತೋರಿಸುತ್ತಿದೆ” ಎಂದರು.
“ಆನಂದ್ ಕೋಳಿ ನುಂಗಿರುವ ಕುರಿತು ನಮಗೆ ತಿಳಿದಿಲ್ಲ. ಈ ಬಗ್ಗೆ ಯಾವ ಸುಳಿವು ಕೂಡಾ ನಮಗಿಲ್ಲ” ಕುಟುಂಬಸ್ಥರು ಪ್ರತಿಕ್ರಿಯಿಸಿದ್ದಾರೆ. ಆದರೆ ಸ್ಥಳೀಯರ ಪ್ರಕಾರ, ಆನಂದ್ ಗಂಡು ಮಗುವಿಗಾಗಿ ಹಪಹಪಿಸುತ್ತಿದ್ದ. ಇದೇ ಕಾರಣಕ್ಕೆ ಈ ರೀತಿಯ ಮೌಢ್ಯಕ್ಕೆ ಬಲಿಯಾಗಿದ್ದಾನೆ.

The post ಜೀವಂತ ಕೋಳಿ ನುಂಗಿ ಪ್ರಾಣ ಕಳೆದುಕೊಂಡ ವ್ಯಕ್ತಿ. appeared first on Good News 24x7.

]]>
https://www.goodnews24x7.com/%e0%b2%9c%e0%b3%80%e0%b2%b5%e0%b2%82%e0%b2%a4-%e0%b2%95%e0%b3%8b%e0%b2%b3%e0%b2%bf-%e0%b2%a8%e0%b3%81%e0%b2%82%e0%b2%97%e0%b2%bf-%e0%b2%aa%e0%b3%8d%e0%b2%b0%e0%b2%be%e0%b2%a3-%e0%b2%95%e0%b2%b3/feed/ 0 1187
ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. https://www.goodnews24x7.com/%e0%b2%96%e0%b2%be%e0%b2%b8%e0%b2%97%e0%b2%bf-%e0%b2%ac%e0%b2%b8%e0%b3%8d-%e0%b2%a1%e0%b2%82%e0%b2%aa%e0%b2%b0%e0%b3%8d-%e0%b2%9f%e0%b3%8d%e0%b2%b0%e0%b2%95%e0%b3%8d%e0%b2%97%e0%b3%86-%e0%b2%a1/ https://www.goodnews24x7.com/%e0%b2%96%e0%b2%be%e0%b2%b8%e0%b2%97%e0%b2%bf-%e0%b2%ac%e0%b2%b8%e0%b3%8d-%e0%b2%a1%e0%b2%82%e0%b2%aa%e0%b2%b0%e0%b3%8d-%e0%b2%9f%e0%b3%8d%e0%b2%b0%e0%b2%95%e0%b3%8d%e0%b2%97%e0%b3%86-%e0%b2%a1/#respond Tue, 17 Dec 2024 12:01:27 +0000 https://www.goodnews24x7.com/?p=1182 ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ…

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>
ಗುಜರಾತ್ :- ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.

ಗುಜರಾತ್ನ ಭಾವನಗರ ಜಿಲ್ಲೆಯ ಹೆದ್ದಾರಿಯಲ್ಲಿ ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ ಹೊಡೆದ ಪರಿಣಾಮ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ಸುಮಾರು 10 ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಭಾವನಗರದಿಂದ ಮಹುವಾ ಕಡೆಗೆ ಬಸ್ ತೆರಳುತ್ತಿದ್ದಾಗ ಬೆಳಗ್ಗೆ 6 ಗಂಟೆ ಸುಮಾರಿಗೆ ತ್ರಪಾಜ್ ಗ್ರಾಮದ ಬಳಿ ಅಪಘಾತ ಸಂಭವಿಸಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಹರ್ಷದ್ ಪಟೇಲ್ ತಿಳಿಸಿದ್ದಾರೆ.
ಬಸ್ ಹಿಂದಿನಿಂದ ಡಂಪರ್ ಲಾರಿಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಆರು ಮಂದಿ ಸಾವನ್ನಪ್ಪಿದ್ದಾರೆ, ಎಂಟರಿಂದ ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿ ತಿಳಿಸಿದ್ದಾರೆ. ಗಾಯಾಳುಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರು ಅಪಾಯದಿಂದ ಪಾರಾಗಿದ್ದಾರೆ ಎಂದು ವರದಿಯಾಗಿದೆ. ಡಿಕ್ಕಿಯ ರಭಸಕ್ಕೆ ಬಸ್ಸಿನ ಬಲಭಾಗದ ಮುಂಭಾಗ ಸಂಪೂರ್ಣ ಜಖಂಗೊಂಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

The post ಖಾಸಗಿ ಬಸ್ ಡಂಪರ್ ಟ್ರಕ್ಗೆ ಡಿಕ್ಕಿ: 6 ಮಂದಿ ಸಾವು, 10 ಜನರಿಗೆ ಗಂಭೀರ ಗಾಯ. appeared first on Good News 24x7.

]]>
https://www.goodnews24x7.com/%e0%b2%96%e0%b2%be%e0%b2%b8%e0%b2%97%e0%b2%bf-%e0%b2%ac%e0%b2%b8%e0%b3%8d-%e0%b2%a1%e0%b2%82%e0%b2%aa%e0%b2%b0%e0%b3%8d-%e0%b2%9f%e0%b3%8d%e0%b2%b0%e0%b2%95%e0%b3%8d%e0%b2%97%e0%b3%86-%e0%b2%a1/feed/ 0 1182
ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….! https://www.goodnews24x7.com/%e0%b2%b5%e0%b2%95%e0%b3%8d%e0%b2%b8%e0%b3%8d-%e0%b2%86%e0%b2%b8%e0%b3%8d%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-150-%e0%b2%95/ https://www.goodnews24x7.com/%e0%b2%b5%e0%b2%95%e0%b3%8d%e0%b2%b8%e0%b3%8d-%e0%b2%86%e0%b2%b8%e0%b3%8d%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-150-%e0%b2%95/#respond Sun, 15 Dec 2024 11:09:14 +0000 https://www.goodnews24x7.com/?p=1166 ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವ‌ರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು…

The post ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….! appeared first on Good News 24x7.

]]>
ಬೆಂಗಳೂರು, :- ವಕ್ಸ್ ಆಸ್ತಿ ಕಬಳಿಕೆಯ ಬಗ್ಗೆ ಮೌನವಾಗಿರಲು ಬಿ.ವೈ.ವಿಜಯೇಂದ್ರ ಅವರು ತಮಗೆ 150 ಕೋಟಿ ರೂ. ಆಮಿಷವೊಡ್ಡಿದ್ದರು ಎಂದು ಬಿಜೆಪಿ ಸರ್ಕಾರದಲ್ಲಿ ಅಲ್ಪ ಸಂಖ್ಯಾತ ಆಯೋಗದ ಅಧ್ಯಕ್ಷರಾಗಿದ್ದ ಅನ್ವ‌ರ್ ಮಾಣಿಪಾಡಿ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ನೇರವಾಗಿ ಪತ್ರ ಬರೆದಿರುವುದು ಬಯಲಾಗಿದೆ.
ಪ್ರಧಾನಮಂತ್ರಿಯವರು ಈ ಆರೋಪ ವನ್ನು ಗಂಭೀರವಾಗಿಸ್ವೀಕರಿಸಿ ತಕ್ಷಣ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಸಿಎಂ ಸಿದ್ದರಾಮಯ್ಯ ಆಗ್ರಹಿಸಿದ್ದಾರೆ. ಈ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು, ಆರೋಪ ಮಾಡಿದ್ದಾರೆ. ಬಿ.ಎಸ್ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿಯೇ ವಿಜಯೇಂದ್ರ ನಮ್ಮ ಮನೆಗೆ ಬಂದು ವಕ್ಸ್ ಆಸ್ತಿ ಕಬಳಿಕೆಯ ತನಿಖೆ ನಡೆಸಿ ನೀಡಿರುವ ವರದ ಬಗ್ಗೆ ಮೌನ ವಹಿಸುವಂತೆ ಕೇಳಿಕೊಂಡಿದ್ದು ಮಾತ್ರ ವಲ್ಲ ಇದಕ್ಕಾಗಿ ವೊಡ್ಡಿದ್ದರು. ನಾನು 150 ಕೋಟಿ ರೂ. ಆಮಿಷ ಅವರಿಗೆ ಗದರಿಸಿ ಮನೆಯಿಂದ ಓಡಿಸಿದ್ದೆ. ಅದರ ನಂತರ ಈ ಎಲ್ಲಾ ಘಟನೆಗಳನ್ನು ಉಲ್ಲೇಖಿಸಿ ಪ್ರಧಾನಿ ನರೇಂದ್ರ ಮೋದಿ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಪತ್ರ ಬರೆದಿದ್ದೆ ಎಂದು ಸಾಕ್ಷಾತ್ ಅನ್ವರ್ ಮಾಣಿಪ್ಪಾಡಿಯವರೇ ಮಾಧ್ಯಮದ ಮುಂದೆ ಹೇಳಿಕೊಂಡಿದ್ದರು.


‘ನಾ ಖಾವೂಂಗಾ, ನಾ ಖಾನೆ ದೂಂಗಾ’ ಎಂದು ಊರೆಲ್ಲ ಡಂಗೂರ ಹೊಡ್ಕೊಂಡು ತಿರುಗಾಡುವ ನರೇಂದ್ರ ಮೋದಿಯವರು ಈ ಆರೋಪದ ಬಗ್ಗೆ ಮೌನವಾಗಿರುವುದು ಸಂಶಯವನ್ನು ಮಾತ್ರವಲ್ಲ ಅನೇಕ ಪ್ರಶ್ನೆಗಳನ್ನು ಹುಟ್ಟುಹಾಕಿದೆ. ವಕ್ಸ್ ಆಸ್ತಿ ವಿಚಾರದಲ್ಲಿ ವಿಜಯೇಂದ್ರ ಅವರು ವಹಿಸುತ್ತಿರುವ ಆಸಕ್ತಿಯನ್ನು ನೋಡಿದರೆ ಅವರು ಮತ್ತು ಅವರ ಕುಟುಂಬ ವರ್ಗ ವಕ್ಸ್ ಆಸ್ತಿ ಕಬಳಿಕೆಯಲ್ಲಿ ನೇರವಾಗಿ ಶಾಮೀಲಾಗಿರುವಂತೆ ಕಾಣುತ್ತಿದೆ. ಅವರ ಜೊತೆ ಪಕ್ಷದ ಮಹಾಮಹಿಮರೆಲ್ಲರೂ ಶಾಮೀಲಾಗಿರುವ ಸಂಶಯ ಇದೆ. ಬಿ.ಎಸ್.ಯಡಿಯೂರಪ್ಪ ಮತ್ತು ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿ ಯಾಗಿದ್ದ ಕಾಲದಲ್ಲಿಯೇ ವಕ್ಸ್ ಆಸ್ತಿಗೆ ಸಂಬಂಧಿ ಸಿದಂತೆ ರಾಜ್ಯ ಸರ್ಕಾರ ಗರಿಷ್ಠ ಸಂಖ್ಯೆಯಲ್ಲಿ ನೋಟಿಸ್ ನೀಡಿರುವುದನ್ನು ಈಗಾಗಲೇ ಮಾಧ್ಯಮ ಗಳು ವ್ಯಾಪಕವಾಗಿ ವರದಿ ಮಾಡಿವೆ. ಮಾಣಿಪಾಡಿ ಅವರ ಬಾಯಿ ಮುಚ್ಚಿಸುವ ಷಡ್ಯಂತ್ರದಲ್ಲಿ ಯಾರೆಲ್ಲ ಶಾಮೀಲಾಗಿದ್ದಾರೆ, ಎಕ್ಸ್ ಆಸ್ತಿ ಲೂಟಿಯಲ್ಲಿ ಬೇರೆ ಯಾರೆಲ್ಲ ಪಾಲುದಾರರಿದ್ದಾರೆ ಎನ್ನುವ ಬಗ್ಗೆಯೂ ತನಿಖೆಯಾಗಬೇಕಾಗಿದೆ. ಆಶ್ಚರ್ಯದ ಸಂಗತಿ ಯೆಂದರೆ, ಒಂದೆಡೆ ಇಂತಹ ಗಂಭೀರ ಆರೋಪ ಹೊತ್ತುಕೊಂಡಿರುವ ವಿಜಯೇಂದ್ರ ಅವರು ಬಿಜೆಪಿಯ ರಾಜ್ಯಾಧ್ಯಕ್ಷರಾಗುತ್ತಾರೆ, ಇನ್ನೊಂದೆಡೆ ಪಕ್ಷದ ಹೈಕಮಾಂಡ್‌ಗೆ ಎರಡು ಸಾವಿರ ಕೋಟಿ ರೂ. ಸಂದಾಯ ಮಾಡಿ ವಿಜಯೇಂದ್ರ ಅವರು ತಮ್ಮ ತಂದೆ ಯಡಿಯೂರಪ್ಪನವರನ್ನು ಮುಖ್ಯಮಂತ್ರಿ ಮಾಡಿದ್ದಾರೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಆರೋಪಿಸುತ್ತಾರೆ. ಈ ಎಲ್ಲಾ ಬೆಳವಣಿಗೆಗಳನ್ನು ಒಂದು ಕ್ರಮದಲ್ಲಿ ಜೋಡಿಸಿ ನೋಡಿದರೆ ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ, ಕರ್ನಾಟಕವನ್ನು ಎಟಿಎಂ ಮಾಡಿತ್ತು ಎಂದು ಆರೋಪಿಸಬೇಕಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರೇ, ಕೋವಿಡ್ ಸಲಕರಣೆಗಳ ಖರೀದಿ ಭ್ರಷ್ಟಾಚಾರ ದಿಂದ ಹಿಡಿದು ವಕ್ ಆಸ್ತಿ ಕಬಳಿಕೆಯಲ್ಲಿನ ಲೂಟಿ ವರೆಗೆ ರಾಜ್ಯ ಬಿಜೆಪಿಯ ಕಪಾಟಿನಿಂದ ಒಂದೊಂದೇ ಅಸ್ತಿ ಪಂಜರಗಳು ಉರುಳಿ ಬೀಳುತ್ತಲೇ ಇದೆ. ಈ ಹಗರಣಗಳಿಂದ ತಪ್ಪಿಸಿಕೊಳ್ಳುವ ಉದ್ದೇಶದಿಂದಲೇ ರಾಜ್ಯದ ಬಿಜೆಪಿ ನಾಯಕರು ನಮ್ಮ ಪಕ್ಷ ಮತ್ತು ನಾಯಕರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜನರ ಗಮನ ಬೇರೆ ಕಡೆ ಸೆಳೆಯುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

The post ವಕ್ಸ್ ಆಸ್ತಿ ವಿಚಾರದಲ್ಲಿ 150 ಕೋಟಿ ಆಮಿಷ….! appeared first on Good News 24x7.

]]>
https://www.goodnews24x7.com/%e0%b2%b5%e0%b2%95%e0%b3%8d%e0%b2%b8%e0%b3%8d-%e0%b2%86%e0%b2%b8%e0%b3%8d%e0%b2%a4%e0%b2%bf-%e0%b2%b5%e0%b2%bf%e0%b2%9a%e0%b2%be%e0%b2%b0%e0%b2%a6%e0%b2%b2%e0%b3%8d%e0%b2%b2%e0%b2%bf-150-%e0%b2%95/feed/ 0 1166