ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದ ಹೈಕೋರ್ಟ್
ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ತಡೆಯಾಜ್ಞೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ನಡೆದಿದೆ. ಇದೀಗ ಹೈಕೋರ್ಟ್ ಸಿಎಂ ಸಿದ್ದರಾಮಯ್ಯಗೆ ತಾತ್ಕಾಲಿಕ ರಿಲೀಫ್ ನೀಡಿದೆ.
ಸಿದ್ದರಾಮಯ್ಯವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿ ರಾಜ್ಯಪಾಲರು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಸಿಎಂ ಹೈಕೋರ್ಟ್ ಮೊರೆ ಹೋಗಿದ್ದರು. ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ಆ.29ರ ವರೆಗೆ ಯಾವುದೇ ಆದೇಶ ನೀಡಿದಂತೆ ಜನಪ್ರತಿನಿಧಿಗಳ ಕೋರ್ಟ್‌ಗೆ ಸೂಚನೆ ನೀಡಿದೆ.