ಬಡವರ ಬಿಪಿಎಲ್ ಕಾರ್ಡ್ ರದ್ದಾದರೆ ಅಧಿಕಾರಿಗಳ ವಿರುದ್ಧವೇ ಕ್ರಮ : ಎಕ್ಸ್ ಖಾತೆಯಲ್ಲಿ ಈ ಕುರಿತು ಟ್ವೀಟ್ ಮಾಡಿರೋ ಸಿಎಂ ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಉಳಿದಂತೆ ಯಾರೊಬ್ಬರ ಪಡಿತರ ಚೀಟಿ ರದ್ದು ಮಾಡಬಾರದು ಎಂದು ಆಹಾರ ಇಲಾಖೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದೇನೆ.
ಸರ್ಕಾರಿ ನೌಕರರು ಮತ್ತು ಆದಾಯ ತೆರಿಗೆ ಪಾವತಿದಾರರನ್ನು ಹೊರತುಪಡಿಸಿದಂತೆ ಉಳಿದ ಯಾವುದೇ ಕುಟುಂಬದವರ ಪಡಿತರ ಚೀಟಿ ರದ್ದಾಗಿದ್ದರೆ ತಕ್ಷಣ ವಾಪಸ್ ನೀಡಬೇಕು. ಬಡ ಕುಟುಂಬದವರ ಪಡಿತರ ಚೀಟಿಗಳನ್ನು ವಿನಾಕಾರಣ ರದ್ದು ಮಾಡಿದರೆ ಆಹಾರ ಇಲಾಖೆ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸಲಾಗುವುದು. ಈ ಬಗ್ಗೆ ಸಿಎಂ ಸಿದ್ದರಾಮಯ್ಯ ಎಕ್ಸ್ ಖಾತೆನಲ್ಲಿ ವಾರ್ನ್ ಮಾಡಿದ್ದಾರೆ.
ರಾಜ್ಯದಲ್ಲಿ ಬಿಪಿಎಲ್ ಕಾರ್ಡ್ಗಳ ಆಪರೇಷನ್ ದೊಡ್ಡ ಮಟ್ಟಿಗೆ ನಡೆಯುತ್ತಿದೆ. ಬಿಪಿಲ್ ಕಾರ್ಡ್‌ಗಳನ್ನು ಎಪಿಎಲ್‌ಗೆ ಬದಲಾವಣೆ ಮಾಡಲಾಗುತ್ತಿದೆ. ಇದರಿಂದ ಬಡಜನರು ಕಂಗಾಲಾಗಿದ್ದಾರೆ. ಈ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಜನರಿಗೆ ಅಭಯದ ಹಸ್ತ ಚಾಚಿದ್ದಾರೆ. ಬಡವರಿಗೆ ಅನ್ಯಾಯ ಆಗದಂತೆ ಖಡಕ್ ಸೂಚನೆಯೊಂದನ್ನ ರವಾನಿಸಿದ್ದಾರೆ.