ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್

ಸರ್ಕಾರ ಹೋಗುತ್ತೆ ಅಂದರೆ ಹೋಗಲಿ, ಜಾತಿ ಗಣತಿ ಜಾರಿ ಮಾಡಿ : ಬಿ.ಕೆ.ಹರಿಪ್ರಸಾದ್

ಜಾತಿ ಗಣತಿ ವರದಿ ಜಾರಿಯಾದರೆ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅಧಿಕಾರಕ್ಕೆ ರಾಜಿಯಾಗದೆ ಮೊದಲು ವರದಿ ಜಾರಿ ಮಾಡಿ’ ಎಂದು ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಬಿ.ಕೆ.ಹರಿಪ್ರಸಾದ್‌ ಆಗ್ರಹಿಸಿದ್ದಾರೆ. ತನ್ಮೂಲಕ ಜಾತಿ ಗಣತಿ ವರದಿ ಜಾರಿ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸ್ವಪಕ್ಷದಲ್ಲೇ ಒತ್ತಡ ಹೆಚ್ಚಾದಂತಾಗಿದೆ.

ರಾಜ್ಯ ಸರ್ಕಾರ ಸಿದ್ಧವಾಗಿರುವ ವರದಿ ಬಗ್ಗೆ ಯಾಕೆ ಯೋಚಿಸುತ್ತಿದೆಯೋ ಗೊತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು. ಜಾತಿಗಣತಿ ವರದಿ ತಕ್ಷಣ ಜಾರಿ ಮಾಡಲಿ. ಈ ಬಗ್ಗೆ ಮೀನಮೇಷ ಎಣಿಸುವುದು ಬೇಡ. ಜಾತಿಗಣತಿ ವರದಿ ಬಗ್ಗೆ ಯಾರ ವಿರೋಧದ ಪ್ರಶ್ನೆಯೂ ಇಲ್ಲ. ಇದು ಎಲ್ಲಾ ವರ್ಗಗಳ ಸರ್ವತೋಮುಖ ಅಭಿವೃದ್ಧಿಗೆ ನೆರವಾಗುತ್ತದೆ. ಇದರಿಂದ ಸರ್ಕಾರ ಹೋಗುತ್ತೆ ಎನ್ನುವುದಾದರೆ ಹೋಗಲಿ. ಅದಕ್ಕೆ ಭಯ ಯಾಕೆ ಪಡಬೇಕು ಎಂದರು. ಇಡೀ ದೇಶದಲ್ಲಿ ಮೊಟ್ಟ ಮೊದಲನೆಯ ಜನಗಣತಿ ಮಾಡಿದ್ದು ಕರ್ನಾಟಕ.

ನಾಲ್ವಡಿ ಕೃಷ್ಣರಾಜ ಒಡೆಯರ್‌ 1918ರಲ್ಲೇ ಜನಗಣತಿ ನಡೆಸಿ ಮೀಸಲಾತಿ ತಂದರು. ಅಂತಹ ರಾಜ್ಯದಲ್ಲಿ ನಾವೇಕೆ ಭಯ ಪಡಬೇಕು. ಇದರಲ್ಲಿ ಸ್ಪಷ್ಟತೆ ಬೇಕು ಅಷ್ಟೇ ಎಂದು ಹೇಳಿದರು. ವರದಿ ಜಾರಿಗೆ ಹಿಂಜರಿಕೆ ಯಾಕೆ ಎಂಬ ಪ್ರಶ್ನೆಗೆ ಉತ್ತರಿಸಿದ ಹರಿಪ್ರಸಾದ್‌, ಅದನ್ನು ಸರ್ಕಾರದಲ್ಲಿ ಇರುವವರನ್ನು ಕೇಳಿದರೆ ಒಳ್ಳೆಯದು. ಚುನಾವಣೆ ಇದೆಯೋ ಇಲ್ಲವೋ ಎಂಬುದು ಪ್ರಶ್ನೆಯಲ್ಲ. ನಾವು ಮಾಡಿರುವ ವರದಿ ಜಾರಿಗೆ ಬರಬೇಕು ಅಷ್ಟೇ ಎಂದು ಸ್ಪಷ್ಟಪಡಿಸಿದರು.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!