ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ 2024ರ ಟಿ20 ವಿಶ್ವಕಪ್ ಸೆಮಿ ಫೈನಲ್ ಹೈವೋಲ್ಟೇಜ್ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಟೀಮ್ ಇಂಡಿಯಾ ಭರ್ಜರಿ ಗೆಲುವು ಸಾಧಿಸಿದೆ. ಈ ಮೂಲಕ ಟಿ20 ವಿಶ್ವಕಪ್ ಫೈನಲ್ ಪ್ರವೇಶಿಸಿದೆ.
ನಿನ್ನೆ ಗಯಾನಾ ಇಂಟರ್ ನ್ಯಾಷನಲ್ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ, ನಾಯಕ ರೋಹಿತ್ ಶರ್ಮಾ ಅವರ ಅರ್ಧಶತಕ ಮತ್ತು ಸೂರ್ಯಕುಮಾರ್ ಯಾದವ್ ಅವರ ಅಮೋಘ ಬ್ಯಾಟಿಂಗ್ ನೆರವಿನಿಂದ ನಿಗದಿತ 20 ಓವರ್‌ಗಳಲ್ಲಿ 7 ವಿಕೆಟ್ ನಷ್ಟಕ್ಕೆ 171 ರನ್ ಕಲೆಹಾಕಿತ್ತು.
ಭಾರತ ನೀಡಿದ ಬಿಗ್ ಟಾರ್ಗೆಟ್ ಬೆನ್ನತ್ತಿದ ಇಂಗ್ಲೆಂಡ್ ಭಾರತ ತಂಡದ ಬೌಲರ್ಗಳ ಮಾರಕ ದಾಳಿಗೆ ತತ್ತರಿಸಿತು. ಹಾಗಾಗಿ ಇಂಗ್ಲೆಂಡ್ ತಂಡ 16.4 ಓವರ್ನಲ್ಲಿ ಕೇವಲ 103 ರನ್ಗಳಿಗೆ ಆಲೌಟ್ ಆಗಿದೆ. ಭಾರತ ಪರ ಕುಲ್ದೀಪ್ ಯಾದವ್, ಅಕ್ಷರ್ ಪಟೇಲ್ ತಲಾ 3 ವಿಕೆಟ್ ತೆಗೆದು ಕಮಾಲ್ ಮಾಡಿದ್ರು. ಬೂಮ್ರಾ ಕೂಡ 2 ವಿಕೆಟ್ ತೆಗೆದರು. ಭಾರತ ತಂಡಕ್ಕೆ ಬರೋಬ್ಬರಿ 68 ರನ್ಗಳ ಜಯ ಸಿಕ್ಕಿದೆ.