ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್

ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆಗಳಿಂದ, ರೈತರನ್ನು ನಾಶ ಮಾಡಲು ಹೊರಟಿದೆ : ಕುರುಬೂರ್ ಶಾಂತಕುಮಾರ್

ಕೇಂದ್ರ ಸರ್ಕಾರಕ್ಕೆ ದುರ್ಬಲ ಅಧಿಕಾರ ಸಿಕ್ಕಿದರು ರೈತ ವಿರೋಧಿ ಧೋರಣೆಗಳನ್ನೇ ಮುಂದುವರಿಸುತ್ತಿದೆ. ಇದೇ ರೀತಿ ರೈತ ವಿರೋಧಿ ಧೋರಣೆ ಮುಂದುವರೆದರೆ ಅಧಿಕಾರದಿಂದಲೇ ದೂರ ಹಾಕುವ ಸನ್ನಿವೇಶ ನಿರ್ಮಾಣ ಮಾಡಬೇಕಾಗುತ್ತದೆ ಎಂಬುದನ್ನು ಅರಿಯಬೇಕು.
ರೈತರ ಕೃಷಿ ಭೂಮಿ, ಸಾಲ ವಸುಲಾತಿ ನೆಪದಲ್ಲಿ ಭೂಮಿ ಕಿತ್ತುಕೊಳ್ಳುವ ಸರ್ಪ್ರೈಸಿ ಕಾಯ್ದೆ ಜಾರಿಗೆ ತಂದು. ಸಾಲ ಕಟ್ಟದ ರೈತರ ಜಮೀನುಗಳನ್ನು ಬ್ಯಾಂಕುಗಳು ವಶ ಪಡಿಸಿಕೊಳ್ಳುತ್ತಿವೆ ಇಂತಹ ರೈತ ದ್ರೋಹಿ ಕಾನೂನುಗಳ ವಿರುದ್ಧ ಪ್ರಬಲ ಹೋರಾಟ ನಡೆಸಬೇಕಾಗಿದೆ. ಇಲ್ಲದಿದ್ದರೆ ರೈತ ಕುಲವೇ ನಾಶವಾಗುತ್ತದೆ. ಎಂದು ಸಂಯುಕ್ತ ಕಿಸಾನ್ ಮೋರ್ಚಾ (ರಾಜಕೀಯೇತರ) ಸಂಘಟನೆಯ ದಕ್ಷಿಣ ಭಾರತ ರಾಜ್ಯಗಳ ಸಂಚಾಲಕ ಕುರುಬೂರು ಶಾಂತಕುಮಾರ್ ಪಾಂಡಿಚೇರಿ ಕಾರಯ್ಕಲ್ ನಲ್ಲಿ ನಡೆದ ಸಮಾವೇಶದಲ್ಲಿ ಮಾತನಾಡುತ್ತ ತಿಳಿಸಿದರು.

ಇಂದು ನಡೆದ ರಾಷ್ಟ್ರೀಯ ರೈತ ಸಮಾವೇಶದಲ್ಲಿ. ತಮಿಳುನಾಡು ಕರ್ನಾಟಕ ಆಂಧ್ರಪ್ರದೇಶ್. ತೆಲಂಗಾಣ. ಕೇರಳ. ರಾಜ್ಯಗಳ ರೈತ ಮುಖಂಡರು ಭಾಗವಹಿಸಿದ್ದರು. ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ ಕಾತರಿ ಕಾನೂನು ಜಾರಿ. ರೈತರ ಸಂಪೂರ್ಣ ಸಾಲಮನ್ನಾ. ಡಾ. ಸ್ವಾಮಿನಾಥನ್ ವರದಿಯಂತೆ ಕನಿಷ್ಠ ಬೆಂಬಲ ಬೆಲೆ ನಿಗದಿ. ಬೆಳೆ ವಿಮೆ ಪದ್ಧತಿ ತಿದ್ದುಪಡಿ ಆಗಬೇಕು. 60 ವರ್ಷ ತುಂಬಿದ ರೈತರಿಗೆ ಪಿಂಚಣಿ ಯೋಜನೆ ಜಾರಿಗೆ ತರಬೇಕು ಎಂಬ ಇನ್ನಿತರ ಒತ್ತಾಯಗಳ ಬಗ್ಗೆ ದೆಹಲಿಯಲ್ಲಿ ನಡೆಯುತ್ತಿರುವ ರೈತ ಹೋರಾಟಕ್ಕೆ ಮುಂದಿನ ದಿನಗಳಲ್ಲಿ ಬೆಂಬಲಿಸಿ ಪ್ರಬಲಗೊಳಿಸಲು ಪಾಂಡಿಚೇರಿಯಲ್ಲಿ ದಕ್ಷಿಣ ಭಾರತ ರಾಜ್ಯದ ರೈತ ಮುಖಂಡರು ತೀರ್ಮಾನಿಸಿದರು.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಆಂಧ್ರಪ್ರದೇಶ: ಮಹಿಳೆಯೊಬ್ಬರಿಗೆ ಬಂದ ಪಾರ್ಸೆಲ್ನಲ್ಲಿ ಅಪರಿಚಿತ ಶವ ಪತ್ತೆಯಾಗಿರುವ ಆಘಾತಕಾರಿ ಘಟನೆ ಪಶ್ಚಿಮ ಗೋದಾವರಿ ಜಿಲ್ಲೆಯ ಉಂಡಿ ಮಂಡಲದ ಯಂಡಗಂಡಿಯಲ್ಲಿ ನಡೆದಿದೆ. ಮಹಿಳೆ ಪಾರ್ಸೆಲ್ನಲ್ಲಿ ಅಪರಿಚಿತ ಶವವನ್ನು ಕಂಡು ಬೆಚ್ಚಿಬಿದ್ದಿದ್ದು , ಆಕೆಯ ಕುಟುಂಬಸ್ಥರು ಈ ಸಂಬಂಧ ಕೂಡಲೇ ಪೊಲೀಸರಿಗೆ ಮಾಹಿತಿ…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!