ಬಿಗ್ ಬಾಸ್ ಮನೆಯಿಂದ ಹೊರಬಂದ ಲಾಯರ್ ಜಗದೀಶ್?
ಬಿಗ್ ಬಾಸ್ ಕನ್ನಡ ಸೀಸನ್ 11ರಲ್ಲಿ ಲಾಯರ್ ಜಗದೀಶ್ ಅವರು ಸಾಕಷ್ಟು ಸದ್ದು ಮಾಡಿದ್ದರು. ಅವರು ಎರಡೇ ವಾರ ಇದ್ದರೂ ಸಾಕಷ್ಟು ಚರ್ಚೆ ಹುಟ್ಟುಹಾಕಿದ್ದರು. ಈಗ ಜಗದೀಶ್ ಅವರು ಬಿಗ್ ಬಾಸ್ ಮನೆಯಿಂದ ಹೊರಹೋಗಿದ್ದಾರೆ ಎನ್ನಲಾಗಿದೆ. ಸೋಶಿಯಲ್ ಮೀಡಿಯಾದಲ್ಲಿ ಹೀಗೊಂದು ಚರ್ಚೆ ನಡೆದಿದೆ.
ನಿನ್ನೆ ಎಪಿಸೋಡ್ನಲ್ಲೂ ಕೂಡ ದೊಡ್ಡ ಜಗಳವಾಗಿತ್ತು. ರಂಜಿತ್ ಮತ್ತು ಜಗದೀಶ್ ನಡುವೆ ನೇರಾನೇರ ಜಗಳ ಆಗಿತ್ತು. ಜಗದೀಶ್ ಮತ್ತು ಉಗ್ರಂ ಮಂಜು ನಡುವೆ ಜಗಳವಾಗಿತ್ತು. ಕೆಲವು ಪ್ರಾಥಮಿಕ ಮಾಹಿತಿ ಪ್ರಕಾರ ಮತ್ತೊಬ್ಬ ಸ್ಪರ್ಧಿ ಮಾನಸಾ ಅವರ ವಿಚಾರಕ್ಕೆ ಜಗಳ ಆಗಿದೆ ಎನ್ನಲಾಗಿದೆ. ಈ ಮೂಲಕ ಕನ್ನಡ ಬಿಗ್ಬಾಸ್ ಇತಿಹಾಸದಲ್ಲಿ ಜಗಳ ಆಡಿಕೊಂಡು ಸ್ಪರ್ಧಿಗಳು ಹೊರಬಿದ್ದ ಎರಡನೇ ಪ್ರಕರಣ ಇದಾಗಿದೆ. ಈ ಹಿಂದೆ ಹುಚ್ಚ ವೆಂಕಟ್ ಬಿಗ್ಬಾಸ್ ಮನೆಯಿಂದ ಔಟ್ ಆಗಿದ್ದರು.