ಮೈಸೂರು : ಮೈಸೂರು ಜಿಲ್ಲಾ ಹಾಲು ಒಕ್ಕೂಟದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಕೆ.ಎನ್.ಸುರೇಶ್ ನಾಯ್ಕ್ ಅವರು ಮಂಗಳವಾರ ಅಧಿಕಾರ ಸ್ವೀಕರಿಸಿದರು.
ಆಲನಹಳ್ಳಿಯ ಮೇಘ ಡೈರಿ ಕಚೇರಿಯಲ್ಲಿ ಆಡಳಿತ ಮತ್ತು ಖರೀದಿ ವಿಭಾಗದ ವ್ಯವಸ್ಥಾಪಕ ಕೆ.ಎಸ್.ಜಗದೀಶ್ ಅವರಿಂದ ಅಧಿಕಾರ ಸ್ವೀಕರಿಸಿದರು. ಧಾರವಾಡ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿದ್ದ ಸುರೇಶ್ ನಾಯಕ್ ಇಂದಿನಿಂದ ಮೈಸೂರು ಜಿಲ್ಲಾ ಹಾಲು ಒಕ್ಕೂಟದ ವ್ಯವಸ್ಥಾಪಕ ನಿರ್ದೇಶಕರಾಗಿ ಒಕ್ಕೂಟವನ್ನು ಮುನ್ನಡೆಸಲಿದ್ದಾರೆ.
ಈ ಸಂದರ್ಭದಲ್ಲಿ ಮಾರುಕಟ್ಟೆ ವ್ಯವಸ್ಥಾಪಕರು ಎಚ್.ಕೆ.ಜಯಶಂಕರ್, ಡೇರಿ ವ್ಯವಸ್ಥಾಪಕರು ಬಿ.ಎಲ್. ಶ್ವೇತ, ತಾಂತ್ರಿಕ ವಿಭಾಗದ ವ್ಯವಸ್ಥಾಪಕರು ಎಸ್.ಗಿರಿಜಾ, ಅಧಿಕಾರಿ ಹಾಗೂ ಸಿಬ್ಬಂದಿ ಇನ್ನಿತರರು ಉಪಸ್ಥಿತರಿದ್ದರು.