ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧೆ
ಮುಂಬರುವ ಲೋಕಸಭಾ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಿದೆ. ತೀವ್ರ ಕುತೂಹಲ ಸೃಷ್ಟಿಸಿರುವ ಕೇರಳದ ವಯನಾಡಿನಲ್ಲಿ ಈ ಬಾರಿ ಮಹಿಳಾ ಅಭ್ಯರ್ಥಿಗಳಿಬ್ಬರು ಮುಖಾಮುಖಿಯಾಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿಯಾಗಿರುವ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ.
36 ವರ್ಷದ ನವ್ಯಾ ಹರಿದಾಸ್ ಅವರು ಮೆಕ್ಯಾನಿಕಲ್ ಇಂಜಿನಿಯರ್ ಪದವಿ ಓದಿದ್ದು ,ಕ್ಯಾಲಿಕಟ್ ವಿಶ್ವವಿದ್ಯಾಲಯದ ಕೆಎಂಸಿಟಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಬಿ.ಟೆಕ್ ಪದವಿ ಪಡೆದಿದ್ದಾರೆ. ಸದ್ಯ ಅವರು ಕೋಝಿಕ್ಕೋಡ್ ಕಾರ್ಪೊರೇಷನ್‌ನಲ್ಲಿ ಕೌನ್ಸಿಲರ್ ಆಗಿ ಸೇವೆ ಸಲ್ಲಿಸುತ್ತಿದ್ದಾರೆ. ಅವರ ಟ್ವಿಟ್ಟರ್ ಪ್ರೊಫೈಲ್ ಪ್ರಕಾರ ಅವರು ಬಿಜೆಪಿಯಲ್ಲಿ ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ಅಲಂಕರಿಸಿದ್ದಾರೆ.