ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎನ್‌ಡಿಎ ಕೂಟದ ಅಭ್ಯರ್ಥಿಯಾಗಿ ಜೆಡಿಎಸ್ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನಾಮಪತ್ರ ಸಲ್ಲಿಸಲಿದ್ದಾರೆ. ರಂಗೇರಿರುವ ಚನ್ನಪಟ್ಟಣ ಚುನಾವಣ ಅಖಾಡದಲ್ಲಿ ಸೈನಿಕ-ಅಭಿಮನ್ಯು ಚದುರಂಗದಾಟ ಶುರುವಾಗಿದೆ. ಈಗಾಗಲೇ ಕೈ ಹಿಡಿದಿರೋ ಸಿ.ಪಿ ಯೋಗೇಶ್ವರ್ ಮಿನಿ ಸಮರವನ್ನ ಮತ್ತಷ್ಟು ರಣರೋಚಕ ಘಟ್ಟಕ್ಕೆ ಕೊಂಡೊಯ್ದಿದ್ದಾರೆ.
ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ನಿಖಿಲ್ ಕುಮಾರಸ್ವಾಮಿ ಉಮೇದುವಾರಿಕೆ ಸಲ್ಲಿಸಿದರು. ನಿಖಿಲ್ ನಾಮಪತ್ರ ಸಲ್ಲಿಕೆ ವೇಳೆ ಕುಮಾರಸ್ವಾಮಿ, ಸದಾನಂದ ಗೌಡ, ಬಿ.ವೈ.ರಾಘವೇಂದ್ರ ಉಪಸ್ಥಿತರಿದ್ದರು.