ಶ್ರೀ ಎಸ್.ಎಂ.ಕೃಷ್ಣಾಜಿಯವರು ಅಸಾಧಾರಣ ನಾಯಕರಾಗಿದ್ದರು, ಸಮಾಜದ ಎಲ್ಲ ವರ್ಗಗಳ ಜನರಿಂದ ಮೆಚ್ಚುಗೆಗೆ ಪಾತ್ರರಾಗಿದ್ದರು. ಅವರು ಯಾವಾಗಲೂ ಇತರರ ಜೀವನವನ್ನು ಸುಧಾರಿಸಲು ದಣಿವರಿಯಿಲ್ಲದೆ ಶ್ರಮಿಸಿದರು. ಅವರು ಕರ್ನಾಟಕದ ಮುಖ್ಯಮಂತ್ರಿಯಾಗಿ ತಮ್ಮ ಅಧಿಕಾರಾವಧಿಯಲ್ಲಿ ವಿಶೇಷವಾಗಿ ಮೂಲಸೌಕರ್ಯ ಅಭಿವೃದ್ಧಿಗೆ ಗಮನಹರಿಸಿದ್ದಾರೆ. ಶ್ರೀ ಎಸ್.ಎಂ.ಕೃಷ್ಣ ಜೀ ಅವರು ಸಮೃದ್ಧ ಓದುಗ ಮತ್ತು ಚಿಂತಕರೂ ಆಗಿದ್ದರು ಎಂದು ಬರೆದಿದ್ದಾರೆ.
ನಾಳೆ ಎಸ್ಎಂ ಕೃಷ್ಣ ಅವರ ಅಂತ್ಯಕ್ರಿಯೆ ನಡೆಯಲಿದೆ. ಹುಟ್ಟೂರಾದ ಮದ್ದೂರಿನ ಸೋಮನಹಳ್ಳಿ ಅಂತ್ಯಸಂಸ್ಕಾರ ನೆರವೇರಲಿದೆ. ಈ ಬಗ್ಗೆ ಕುಟುಂಬಸ್ಥರೆಲ್ಲ ಸೇರಿ ಸರ್ಕಾರದ ಜೊತೆ ಮಾತನಾಡಿ ನಿರ್ಧಾರ ತೆಗೆದುಕೊಂಡಿದ್ದಾರೆ. ಇನ್ನು ಎಸ್‌ಎಂಕೆ ಅವರ ತಂದೆ-ತಾಯಿ ಸಮಾಧಿ ಸೋಮನಹಳ್ಳಿಯಲ್ಲೇ ಇರುವುದರಿಂದ ಅಲ್ಲಿಯೇ ಕೃಷ್ಣರ ಪಾರ್ಥಿವ ಶರೀರವನ್ನು ಸಕಲ ಸರ್ಕಾರಿ ವಿಧಿವಿಧಾನಗಳೊಂದಿಗೆ ಮಣ್ಣು ಮಾಡಲಾಗುತ್ತದೆ.