ವಯನಾಡ್ ಲೋಕಸಭಾ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ವಾದ್ರಾ ಸ್ಪರ್ಧೆ
ಚುನಾವಣಾ ರಾಜಕೀಯಕ್ಕೆ ಪ್ರಿಯಾಂಕಾ ವಾದ್ರಾ ಅಧಿಕೃತ ಎಂಟ್ರಿಯಾಗಿದ್ದು ಕೇರಳದ ವಯನಾಡಿನಿಂದ ಈ ಬಾರಿ ಕಣಕ್ಕೆ ಇಳಿಯಲಿದ್ದಾರೆ. ಸಂಸದ ರಾಹುಲ್ ಗಾಂಧಿ ಅವರ ರಾಜೀನಾಮೆಯಿಂದ ತೆರವಾದ ವಯನಾಡು ಕ್ಷೇತ್ರಕ್ಕೆ ಪ್ರಿಯಾಂಕಾ ಗಾಂಧಿ ಅವರನ್ನು ಕಣಕ್ಕೆ ಇಳಿಸುವುದಾಗಿ ಎಐಸಿಸಿ ಅಧಿಕೃತ ಪ್ರಕಟಣೆಯ ಮೂಲಕ ತಿಳಿಸಿದೆ.
ರಾಹುಲ್ ಗಾಂಧಿ ರಾಜೀನಾಮೆಯಿಂದ ತೆರವಾದ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ತನ್ನ ಅಭ್ಯರ್ಥಿ ಹೆಸರನ್ನು ಪ್ರಕಟಿಸಿದ್ದು, ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಿಂದ ಉಪಚುನಾವಣೆಯಲ್ಲಿ ಸ್ಪರ್ಧಿಸಲಿದ್ದಾರೆ.