ಪ್ರಗತಿಪರ ಚಿಂತಕ ಪ್ರೊ.ಮಹೇಶ್ ಚಂದ್ರಗುರು ನಿಧನ
ಪ್ರಗತಿಪರ ಚಿಂತಕ, ನಿವೃತ್ತ ಪ್ರಾಧ್ಯಾಪಕ ಪ್ರೊ. ಬಿ.ಪಿ. ಮಹೇಶ್ ಚಂದ್ರಗುರು (67) ಹೃದಯಾಘಾತದಿಂದ ಶನಿವಾರ ರಾತ್ರಿ ನಿಧನರಾಗಿದ್ದಾರೆ.
ಕಳೆದ ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಪ್ರೊ. ಮಹೇಶ್ ಚಂದ್ರಗುರು ಅವರನ್ನು ಇತ್ತೀಚೆಗಷ್ಟೇ ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗ್ಯಾಂಗ್ರೀನ್ನಿಂದ ಗುಣಮುಖರಾಗಿದ್ದ ಅವರನ್ನು ಎರಡು ವಾರಗಳ ಹಿಂದೆ ಆಸ್ಪತ್ರೆಯಿಂದ ಮನೆಗೆ ಕರೆದುಕೊಂಡು ಬರಲಾಗಿತ್ತು. ಆದರೆ, ಶನಿವಾರ ರಾತ್ರಿ 7:15ಕ್ಕೆ ವಿಜಯನಗರದ ಎರಡನೇ ಹಂತದ ತಮ್ಮ ನಿವಾಸದಲ್ಲಿ ಹೃದಯಾಘಾತದಿಂದ ಅವರು ನಿಧನರಾದರು.