ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

Shri Chamundeshwari Field Development Authorityದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿದ ಸಿ.ಎಂ.ಸಿದ್ದರಾಮಯ್ಯ

ಚಾಮುಂಡಿ ತಾಯಿ ಸನ್ನಿಧಿಯಲ್ಲಿ ಗುಣಮಟ್ಟದ ವ್ಯವಸ್ಥೆ ಕಲ್ಪಿಸದಿದ್ದರೆ ಸಂಬಂಧಪಟ್ಟವರ ಮೇಲೆ ಸೂಕ್ತ ಕ್ರಮ ಕೈಗೊಳ್ಳುವುದು ಖಚಿತ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಎಚ್ಚರಿಸಿದರು.

ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಮೊದಲ ಸಭೆಯನ್ನು ತಾಯಿ ಸನ್ನಿಧಿಯಲ್ಲೇ ನಡೆಸಿ ಪ್ರಸ್ತಾವಿಕವಾಗಿ ಮಾತನಾಡಿದರು‌. ಹಿಂದೆಯೂ ಸಮಿತಿ ಇತ್ತು. ಆದರೆ ಪ್ರಾಧಿಕಾರ ರಚನೆಯಿಂದಾಗಿ ಅಭಿವೃದ್ಧಿಗೆ ಹೆಚ್ಚಿನ ಅಧಿಕಾರ ಮತ್ತು ಅವಕಾಶ ಒದಗಿದಂತಾಗಿದೆ ಎಂದರು.

ಇಲ್ಲಿಗೆ ಬರುವ ಭಕ್ತರಿಗೆ ಹೆಚ್ಚಿನ ಮತ್ತು ಉನ್ನತ ಮಟ್ಟದ ಆರೋಗ್ಯಕರ ಸವಲತ್ತು ಹಾಗೂ ಸೌಲಭ್ಯಗಳನ್ನು ಒದಗಿಸುವುದು ನಮ್ಮ ಗುರಿಯಾಗಿದೆ ಎಂದರು. ಶ್ರೀ ಕ್ಷೇತ್ರ ಹಾಗೂ ದೇವಸ್ಥಾನದ ಸಂಪ್ರದಾಯ ಮತ್ತು ಚರಿತ್ರೆ, ಘನತೆಯನ್ನು ಕಾಪಾಡುವ ಜೊತೆಗೆ ಉನ್ನತೀಕರಿಸಬೇಕು ಎಂದರು.

ಪ್ರಾಧಿಕಾರ ವ್ಯವಸ್ಥಿತವಾಗಿ ನಡೆಯಬೇಕು. ಕಾಲ ಕಾಲಕ್ಕೆ ಸಭೆಗಳು ನಡೆದು ಹೆಚ್ಚಿನ ಶ್ರಮ ಶುಚಿತ್ವಕ್ಕೆ ಹಾಕಬೇಕು. ಕಸವನ್ನು ಆಗ್ಗಿಂದಾಗೇ ತೆರವುಗೊಳಿಸಬೇಕು. ವಾಹನಗಳ ಸಂಖ್ಯೆಯೂ ಹೆಚ್ಚಾಗಿದೆ. ವಾಹನ ನಿಲುಗಡೆಗೆ ಇನ್ನಷ್ಟು ಸುಸಜ್ಜಿತ ವ್ಯವಸ್ಥೆ ಕಲ್ಪಿಸಬೇಕಿದೆ.

ಶ್ರೀ ಕ್ಷೇತ್ರದ ಅಭಿವೃದ್ಧಿಗೆ ಹಣಕ್ಕೆ ತೊಂದರೆ ಇಲ್ಲ. ಕೇಳಿದಷ್ಟು ಹಣವನ್ನು ಕೇಳಿದಾಗಲೆಲ್ಲಾ ಒದಗಿಸಲಾಗುತ್ತಿದ್ದರೂ ಕೆಲಸಗಳು ಮಾತ್ರ ನಿರೀಕ್ಷಿತ ವೇಗದಲ್ಲಿ ನಡೆಯುತ್ತಿಲ್ಲ. ಇದನ್ನು ನಾನು ಸಹಿಸಲ್ಲ. ಸಮಯಕ್ಕೆ ಸರಿಯಾಗಿ ಕೆಲಸ ಮಾಡದಿದ್ದರೆ ನಾನು ಮುಲಾಜಿಲ್ಲದೆ ಕ್ರಮ ತೆಗೆದುಕೊಳ್ಳುತ್ತೇನೆ ಎಂದು ಎಚ್ಚರಿಸಿದರು.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!