#DKshivakumar Archives - Good News 24x7 https://www.goodnews24x7.com/tag/dkshivakumar/ Kannada Thu, 24 Oct 2024 09:10:30 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #DKshivakumar Archives - Good News 24x7 https://www.goodnews24x7.com/tag/dkshivakumar/ 32 32 ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್ https://www.goodnews24x7.com/cp-yogeshwar-filed-his-nomination-as-candidate-from-channapatna/ https://www.goodnews24x7.com/cp-yogeshwar-filed-his-nomination-as-candidate-from-channapatna/#respond Thu, 24 Oct 2024 09:10:30 +0000 https://www.goodnews24x7.com/?p=919 ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ. ರೋಡ್…

The post ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್ appeared first on Good News 24x7.

]]>
ಬಿಜೆಪಿ, ಜೆಡಿಎಸ್ ಮಿತ್ರಪಕ್ಷಗಳ ನಾಯಕರ ಟಿಕೆಟ್ ಗುದ್ದಾಟವನ್ನೇ ಅಸ್ತ್ರ ಮಾಡಿಕೊಂಡ ಕಾಂಗ್ರೆಸ್ ಪಡೆ ಸಿಪಿ ಯೋಗೇಶ್ವರ್‌ರನ್ನ ಪಕ್ಷಕ್ಕೆ ಸೆಳೆದಿದ್ದರ ಜತೆಗೆ, ಚನ್ನಪಟ್ಟಣ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ದಳಪತಿಗಳ ಸಾಮ್ರಾಜ್ಯ ಚನ್ನಪಟ್ಟಣದಿಂದ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ.

ರೋಡ್ ಶೋ ಮೂಲಕ ಚನ್ನಪಟ್ಟಣ ತಾಲೂಕು ಕಚೇರಿಗೆ ಆಗಮಿಸಿದ ಸಿಪಿ ಯೋಗೇಶ್ವರ್ ಉಮೇದುವಾರಿಕೆ ಸಲ್ಲಿಸಿದರು. ಸಿಪಿ ಯೋಗೇಶ್ವರ್ ನಾಮಪತ್ರ ಸಲ್ಲಿಕೆ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಶಾಸಕರು ಉಪಸ್ಥಿತರಿದ್ದರು.

The post ಚನ್ನಪಟ್ಟಣ ಕೈ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಸಿಪಿ ಯೋಗೇಶ್ವರ್ appeared first on Good News 24x7.

]]>
https://www.goodnews24x7.com/cp-yogeshwar-filed-his-nomination-as-candidate-from-channapatna/feed/ 0 919
ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/#respond Thu, 19 Sep 2024 06:48:01 +0000 https://www.goodnews24x7.com/?p=606 ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ…

The post ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? appeared first on Good News 24x7.

]]>
ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಇಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿ ಬಗ್ಗೆ ತೀವ್ರ ಕುತೂಹಲ ಕೆರಳಿದ್ದು, ನಿಖಿಲ್ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಹೆರು ಕೇಳಿಬಂದಿತ್ತು. ಅದರೆ, ಇದೀಗ ಇವರಿಬ್ಬರನ್ನೂ ಬದಿಗಿರಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುಳಿವು ಲಭ್ಯವಾಗಿದೆ.

ಗೊಂಬೆ ನಾಡು ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಪಡೆದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇವಲ ಶಾಸಕರಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಇದರ ಬೆನ್ನಲ್ಲಿಯೇ ಕೇಂದ್ರದಲ್ಲಿ ಭಾರಿ ಕೈಗಾರಿಕಾ ಇಲಾಖೆಯ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಇದರ ಬೆನ್ನಲ್ಲಿಯೇ ಚನ್ನಪಟ್ಟಣ ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕಿದೆ.

 

ಉಪ ಚುನಾವಣೆಗೆ ಟಿಕೆಟ್‌ಗೆ ಭಾರಿ ಪೈಪೋಟಿ: ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿಯಿಂದ ಸ್ಪರ್ಧಿಸಿದರೆ, ಅವರ ವಿರುದ್ಧ ಜೆಡಿಎಸ್‌ನಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಲೋಕಸಭೆಯಲ್ಲಿ ಬಿಜೆಪಿ – ಜೆಡಿಸ್ ಮೈತ್ರಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಸಂಸತ್ತಿಗೆ ಹೋಗಿದ್ದರಿಂದ ಚನ್ನಪಟ್ಟಣದ ಮೈತ್ರಿ ಟಿಕೆಟ್ ಅನ್ನು ಯಾರಿಗೆ ನೀಡಬೇಕು ಎಂಬ ಕುತೂಹಲ ಉಂಟಾಗಿದೆ. ಜೆಡಿಎಸ್ ಪಕ್ಷದಿಂದ ಗೆದ್ದ ಕ್ಷೇತ್ರವನ್ನು ಮೈತ್ರಿ ಧರ್ಮ ಪಾಲಿಸುವುದಕ್ಕಾಗಿ ಬಿಜೆಪಿಗೆ ಬಿಟ್ಟು ಕೊಡಲು ಒಪ್ಪುತ್ತಿಲ್ಲ. ಆದರೆ, ಇಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ ಮೈತ್ರಿ ಟಿಕೆಟ್ ತನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದರು.

ಮೂರ್ನಾಲ್ಕು ಬಾರಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ: ಹಾಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿ.ಪಿ. ಚನ್ನಪಟ್ಟಣ ಉಪ ಚುನಾವಣೆಗೆ ಮೈತ್ರಿ ಟಿಕೆಟ್ ತನಗೇ ಬೇಕೆಂದು ಪಟ್ಟು ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಲು ಮೂರ್ನಾಲ್ಕು ಬಾರಿ ದೆಹಲಿಗೂ ಹೋಗಿ ಬಂದಿದ್ದಾರೆ. ಅಲ್ಲಿ ಜೆ.ಪಿ. ನಡ್ಡಾ, ರಾಜನಾಥ ಸಿಂಗ್, ಅಮಿತ್ ಶಾ ಸೇರಿದಂತೆ ರಾಜ್ಯದ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚಿಸಿ ಟಿಕೆಟ್‌ಗಾಗಿ ಲಾಬಿ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಬಿಜೆಪಿ ನಾಯಕರು ಒಂದೆರೆಡು ಸತ್ತಿನ ಮಾತುಕತೆಯನ್ನೂ ಮಾಡಿದ್ದಾರೆ. ಆದರೆ, ಈ ಸಭೆಯಲ್ಲಿ ಸಿ.ಪಿ. ಯೋಗೇಶ್ವರ್ ಅವರಿಗೆ ಮೈತ್ರಿ ಟಿಕೆಟ್ ಕೊಡುವುದಕ್ಕೆ ಹಿಂದೇಟು ಹಾಕಲಾಗಿದೆ. ಆದ್ದರಿಂದ ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹಗೆ ಉಪ ಚುನಾವನೆ ಮೈತ್ರಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂಬ ಸುಳಿವು ಸಿಕ್ಕಿದೆ.

ದೊಡ್ಡಗೌಡರಿಗೂ ಹತ್ತಿರವಾಗಿದ್ದ ಪ್ರತಾಪ್ ಸಿಂಹ:
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಸ್ ಮೈತ್ರಿ ಸುಳಿವು ಸಿಗುತ್ತಿದ್ದಂತೆಯೇ ಮೈಸೂರು-ಕೊಡಲು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು. ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೂ ಹೊಂದಿದ್ದರು. ಆದರೆ, ಲೋಕಸಭಾ ಚುನಾವಣೆಗೆ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್‌ಗೆ ಟಿಕೆಟ್ ನೀಡಿತ್ತು. ಆದರೂ ಜೆಡಿಎಸ್‌ನೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೇ ಹೊಂದಿದ್ದಾರೆ. ಇದರ ಫಲವೇ ಇದೀಗ ಚನ್ನಪಟ್ಟಣದ ಮೈತ್ರಿ ಟಿಕೆಟ್ ಪ್ರತಾಪ್ ಸಿಂಹ ಪಾಲಾಗುತ್ತಿದೆ ಎಂಬ ಖಚಿತತೆಯನ್ನು ಹೆಚ್ಚು ಮಾಡುತ್ತಿದೆ.

The post ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? appeared first on Good News 24x7.

]]>
https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/feed/ 0 606
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ https://www.goodnews24x7.com/congress-party-and-government-will-stand-behind-cm-siddaramaiah-d-k-shivakumar/ https://www.goodnews24x7.com/congress-party-and-government-will-stand-behind-cm-siddaramaiah-d-k-shivakumar/#respond Sat, 17 Aug 2024 10:12:50 +0000 https://www.goodnews24x7.com/?p=382 ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ…

The post ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ appeared first on Good News 24x7.

]]>
ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್

ರಾಜ್ಯಪಾಲರ ಕಚೇರಿ ದುರ್ಬಳಕೆ ಮಾಡಿಕೊಂಡು ಸುಳ್ಳು ಪ್ರಕರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಲುಕಿಸಿ ಸರ್ಕಾರ ಅಸ್ಥಿರಗೊಳಿಸುವ ಷಡ್ಯಂತ್ರ ನಡೆಯುತ್ತಿದೆ. ಇಡೀ ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ, ಅವರು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಖಡಕ್ಕಾಗಿ ತಿಳಿಸಿದರು.

“ಸಿದ್ದರಾಮಯ್ಯ ಅವರು ನಮ್ಮ ಮುಖ್ಯಮಂತ್ರಿಗಳು, ಅವರು ಮುಖ್ಯಮಂತ್ರಿಗಳಾಗಿ ಮುಂದುವರೆಯುತ್ತಾರೆ. ನಮ್ಮ ಮುಖ್ಯಮಂತ್ರಿಗಳು ಈ ಯಾವುದೇ ಒತ್ತಡಕ್ಕೆ ಮಣಿಯುವುದಿಲ್ಲ. ಅವರು ನಮ್ಮ ಮುಖ್ಯಮಂತ್ರಿಗಳಾಗಿ ಮುಂದುವರಿಯಲಿದ್ದು, ನಾವು ಒಟ್ಟಾಗಿ ರಾಜ್ಯದ ಜನರ ಸೇವೆ ಮುಂದುವರಿಸುತ್ತೇವೆ. ಕೇವಲ ಕಾಂಗ್ರೆಸ್ ಪಕ್ಷ ಮಾತ್ರವಲ್ಲ ಇಡೀ ಇಂಡಿಯಾ ಒಕ್ಕೂಟ ನಮ್ಮ ಮುಖ್ಯಮಂತ್ರಿಗಳ ಬೆನ್ನಿಗೆ ನಿಲ್ಲಲಿದೆ. ಮುಖ್ಯಮಂತ್ರಿಗಳ ವಿರುದ್ಧ ಸುಳ್ಳು ಪ್ರಕರಣ ಸೃಷ್ಟಿಸಲಾಗಿದೆ. ಹೀಗಾಗಿ ಕಾನೂನು ಚೌಕಟ್ಟಿನಲ್ಲಿ ಹೋರಾಟ ಮುಂದುವರಿಸುತ್ತೇವೆ. ಇದರ ಜತೆಗೆ ರಾಜಕೀಯವಾಗಿಯೂ ಜನರ ಮಧ್ಯೆ ಹೋರಾಟ ಮಾಡಲಾಗುವುದು” ಎಂದು ತಿಳಿಸಿದರು.

 

“ರಾಜ್ಯಪಾಲರ ಕಚೇರಿಯನ್ನು ಬಿಜೆಪಿ ಕಚೇರಿಯಾಗಿ ಪರಿವರ್ತನೆ ಮಾಡಿಕೊಳ್ಳಲು ನಡೆಯುತ್ತಿರುವ ಹುನ್ನಾರದ ವಿರುದ್ಧ ಹೋರಾಟ ಮಾಡುತ್ತೇವೆ. ಪ್ರಜಾಪ್ರಭುತ್ವ ಹಾಗೂ ಸಂವಿಧಾನ ರಕ್ಷಣೆ ಮಾಡಬೇಕಿದೆ. ಮುಖ್ಯಮಂತ್ರಿಗಳ ವಿರುದ್ಧ ಕಾನೂನು ಬಾಹಿರವಾಗಿ ವಿಚಾರಣೆಗೆ ಅನುಮತಿ ನೀಡಲಾಗಿದೆ. ನಾವು ಕಾನೂನು ಗೌರವಿಸುತ್ತೇವೆ. ದೇಶದ ಕಾನೂನು ನಮಗೆ ರಕ್ಷಣೆ ನೀಡಲಿದೆ ಎಂಬ ವಿಶ್ವಾಸವಿದೆ. ನ್ಯಾಯ ಪೀಠದಿಂದ ಅನ್ಯಾಯ ಆಗುವುದಿಲ್ಲ ಎಂಬ ನಂಬಿಕೆ ಇದೆ. ಹೀಗಾಗಿ ಕಾನೂನು ಸಮರಕ್ಕೆ ನಾವು ಸಜ್ಜಾಗಿದ್ದೇವೆ” ಎಂದು ತಿಳಿಸಿದರು.

The post ಕಾಂಗ್ರೆಸ್ ಪಕ್ಷ ಹಾಗೂ ಸರ್ಕಾರ ಸಿಎಂ ಸಿದ್ದರಾಮಯ್ಯ ಅವರ ಬೆನ್ನಿಗೆ ನಿಲ್ಲುತ್ತದೆ : ಡಿ.ಕೆ. ಶಿವಕುಮಾರ್ appeared first on Good News 24x7.

]]>
https://www.goodnews24x7.com/congress-party-and-government-will-stand-behind-cm-siddaramaiah-d-k-shivakumar/feed/ 0 382
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/#respond Tue, 02 Jul 2024 07:01:04 +0000 https://www.goodnews24x7.com/?p=164 ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…

The post ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ appeared first on Good News 24x7.

]]>
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್

ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.

The post ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ appeared first on Good News 24x7.

]]>
https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/feed/ 0 164