#Siddaramiaha Archives - Good News 24x7 https://www.goodnews24x7.com/tag/siddaramiaha/ Kannada Wed, 11 Dec 2024 09:34:41 +0000 en-US hourly 1 https://wordpress.org/?v=6.7.1 https://www.goodnews24x7.com/wp-content/uploads/2024/06/cropped-GoodNews24x7_Logo-32x32.jpg #Siddaramiaha Archives - Good News 24x7 https://www.goodnews24x7.com/tag/siddaramiaha/ 32 32 ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/ https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/#respond Wed, 11 Dec 2024 09:34:41 +0000 https://www.goodnews24x7.com/?p=1062 ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ…

The post ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು appeared first on Good News 24x7.

]]>
ಮಾಜಿ ಮುಖ್ಯಮಂತ್ರಿ ಎಸ್​ಎಂ ಕೃಷ್ಣ ಅವರ ನಿಧನದಿಂದ ಕರ್ನಾಟಕ ಶೋಕಸಾಗರದಲ್ಲಿ ಮುಳುಗಿದೆ. ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಅವರ ಅಪಾರ ಕೊಡುಗೆ ನೀಡಿದ್ದಾರೆ. ಬೆಂಗಳೂರಿನ ಐಟಿ ಕ್ರಾಂತಿಯಲ್ಲಿ ಅವರ ಪಾತ್ರ ಪ್ರಮುಖವಾಗಿದೆ. ಹೀಗಾಗಿ ಇದೆಲ್ಲವನ್ನು ಗಮನಿಸಿ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಆರ್. ​ಅಶೋಕ್ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

ಮಾಜಿ ಮುಖ್ಯಮಂತ್ರಿ, ಸರಳ ಸಜ್ಜನಿಕೆಯ ರಾಜಕಾರಣಿ, ಅಜಾತ ಶತ್ರು ಎಸ್​.ಎಂ.ಕೃಷ್ಣ (SM Krishna) ವಿಧಿವಶರಾಗಿದ್ದಾರೆ. 92 ವಯಸ್ಸಿಗೆ ತಮ್ಮ ಸುದೀರ್ಘ ಬಾಳಪಯಣವನ್ನ ಕೊನೆಗೊಳೆಸಿದ್ದಾರೆ. ಇಡೀ ಕರ್ನಾಟಕವೇ ಕಂಬನಿ ಮಿಡಿದಿದೆ. ರಾಷ್ಟ್ರ ಹಾಗೂ ರಾಜ್ಯ ರಾಜಕಾರಣದ ಧೀಮಂತ ನಾಯಕರೆನಿಸಿಕೊಂಡಿದ್ದ ಎಸ್ಎಂ ಕೃಷ್ಣ ಅವರಿಗೆ ಮರಣೋತ್ತರ ‘ಕರ್ನಾಟಕ ರತ್ನ’ ಪ್ರಶಸ್ತಿ ನೀಡುವಂತೆ ಸಿಎಂ ಸಿದ್ದರಾಮಯ್ಯಗೆ ವಿಪಕ್ಷ ನಾಯಕ ಆರ್​. ಅಶೋಕ್​ ಮನವಿ ಮಾಡಿದ್ದಾರೆ.

 

 

The post ಎಸ್​ಎಂ ಕೃಷ್ಣಗೆ ಕರ್ನಾಟಕ ರತ್ನ: ಕೇಳಿಬಂತು ಕೂಗು appeared first on Good News 24x7.

]]>
https://www.goodnews24x7.com/%e0%b2%8e%e0%b2%b8%e0%b3%8d%e0%b2%8e%e0%b2%82-%e0%b2%95%e0%b3%83%e0%b2%b7%e0%b3%8d%e0%b2%a3%e0%b2%97%e0%b3%86-%e0%b2%95%e0%b2%b0%e0%b3%8d%e0%b2%a8%e0%b2%be%e0%b2%9f%e0%b2%95-%e0%b2%b0/feed/ 0 1062
ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/#respond Thu, 19 Sep 2024 06:48:01 +0000 https://www.goodnews24x7.com/?p=606 ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ…

The post ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? appeared first on Good News 24x7.

]]>
ಇಡೀ ರಾಜ್ಯ ರಾಜಕಾಣದಲ್ಲೇ ಅತ್ಯಂತ ದೊಡ್ಡ ಬ್ರೇಕಿಂಗ್ ಸುದ್ದಿಯಾಗಿದೆ. ರಾಜ್ಯದಲ್ಲಿ ಖಾಲಿಯಾದ ಮೂರು ವಿಧಾನಸಭಾ ಕ್ಷೇತ್ರಗಳ ಪೈಕಿ ಅತ್ಯಂತ ಕುತೂಹಲ ಹಾಗೂ ಭಾರಿ ಪೈಪೋಟಿಗೆ ಸಜ್ಜಾಗಿ ನಿಂತಿರುವ ಚನ್ನಪಟ್ಟಣದ ವಿಧಾನಸಭಾ ಕ್ಷೇತ್ರದಲ್ಲಿ ಕೇಂದ್ರ ಸಚಿವ, ಉಪ ಮುಖ್ಯಮಂತ್ರಿಗಳ ನಡುವೆ ಭಾರಿ ಪೈಪೋಟಿ ಶುರುವಾಗಿದೆ. ಇಲ್ಲಿ ಸ್ಪರ್ಧೆ ಮಾಡಲಿರುವ ಅಭ್ಯರ್ಥಿ ಬಗ್ಗೆ ತೀವ್ರ ಕುತೂಹಲ ಕೆರಳಿದ್ದು, ನಿಖಿಲ್ ಕುಮಾರಸ್ವಾಮಿ, ಸಿ.ಪಿ. ಯೋಗೇಶ್ವರ್ ಹೆರು ಕೇಳಿಬಂದಿತ್ತು. ಅದರೆ, ಇದೀಗ ಇವರಿಬ್ಬರನ್ನೂ ಬದಿಗಿರಿಸಿ ಮಾಜಿ ಸಂಸದ ಪ್ರತಾಪ್ ಸಿಂಹ ಅವರು ಮೈತ್ರಿ ಅಭ್ಯರ್ಥಿಯಾಗಲಿದ್ದಾರೆ ಎಂಬ ಸುಳಿವು ಲಭ್ಯವಾಗಿದೆ.

ಗೊಂಬೆ ನಾಡು ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ರಾಜ್ಯದಲ್ಲಿ ಕಾಂಗ್ರೆಸ್ 135 ಸ್ಥಾನ ಪಡೆದು ಬಹುಮತದಿಂದ ಅಧಿಕಾರಕ್ಕೆ ಬಂದಿದೆ. ಈ ಹಿನ್ನೆಲೆಯಲ್ಲಿ ಕೇವಲ ಶಾಸಕರಾಗಿದ್ದ ಮಾಜಿ ಸಿಎಂ ಕುಮಾರಸ್ವಾಮಿ ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಸಂಸದರಾಗಿ ಆಯ್ಕೆ ಆಗಿದ್ದಾರೆ. ಇದರ ಬೆನ್ನಲ್ಲಿಯೇ ಕೇಂದ್ರದಲ್ಲಿ ಭಾರಿ ಕೈಗಾರಿಕಾ ಇಲಾಖೆಯ ಸಂಪುಟ ದರ್ಜೆ ಸಚಿವರಾಗಿದ್ದಾರೆ. ಇದರ ಬೆನ್ನಲ್ಲಿಯೇ ಚನ್ನಪಟ್ಟಣ ವಿಧಾನಸಭಾ ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಟ್ಟಿದ್ದು, ಇದೀಗ ಚನ್ನಪಟ್ಟಣ ಕ್ಷೇತ್ರಕ್ಕೆ ಉಪ ಚುನಾವಣೆ ನಡೆಸಬೇಕಿದೆ.

 

ಉಪ ಚುನಾವಣೆಗೆ ಟಿಕೆಟ್‌ಗೆ ಭಾರಿ ಪೈಪೋಟಿ: ಚನ್ನಪಟ್ಟಣದಲ್ಲಿ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಸ್ಥಳೀಯ ನಾಯಕ ಸಿ.ಪಿ. ಯೋಗೇಶ್ವರ್ ಅವರು ಬಿಜೆಪಿಯಿಂದ ಸ್ಪರ್ಧಿಸಿದರೆ, ಅವರ ವಿರುದ್ಧ ಜೆಡಿಎಸ್‌ನಿಂದ ಮಾಜಿ ಸಿಎಂ ಕುಮಾರಸ್ವಾಮಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ, ಇದೀಗ ಲೋಕಸಭೆಯಲ್ಲಿ ಬಿಜೆಪಿ – ಜೆಡಿಸ್ ಮೈತ್ರಿ ಅಭ್ಯರ್ಥಿಯಾಗಿ ಗೆಲುವು ಸಾಧಿಸಿ ಸಂಸತ್ತಿಗೆ ಹೋಗಿದ್ದರಿಂದ ಚನ್ನಪಟ್ಟಣದ ಮೈತ್ರಿ ಟಿಕೆಟ್ ಅನ್ನು ಯಾರಿಗೆ ನೀಡಬೇಕು ಎಂಬ ಕುತೂಹಲ ಉಂಟಾಗಿದೆ. ಜೆಡಿಎಸ್ ಪಕ್ಷದಿಂದ ಗೆದ್ದ ಕ್ಷೇತ್ರವನ್ನು ಮೈತ್ರಿ ಧರ್ಮ ಪಾಲಿಸುವುದಕ್ಕಾಗಿ ಬಿಜೆಪಿಗೆ ಬಿಟ್ಟು ಕೊಡಲು ಒಪ್ಪುತ್ತಿಲ್ಲ. ಆದರೆ, ಇಲ್ಲಿ ಬಿಜೆಪಿ ನಾಯಕ ಸಿ.ಪಿ. ಯೋಗೇಶ್ವರ ಮೈತ್ರಿ ಟಿಕೆಟ್ ತನಗೇ ಕೊಡಬೇಕು ಎಂದು ಪಟ್ಟು ಹಿಡಿದಿದ್ದರು.

ಮೂರ್ನಾಲ್ಕು ಬಾರಿಗೆ ದೆಹಲಿಗೆ ಹೋಗಿದ್ದ ಯೋಗೇಶ್ವರ: ಹಾಲಿ ವಿಧಾನ ಪರಿಷತ್ ಸದಸ್ಯರೂ ಆಗಿರುವ ಸಿ.ಪಿ. ಚನ್ನಪಟ್ಟಣ ಉಪ ಚುನಾವಣೆಗೆ ಮೈತ್ರಿ ಟಿಕೆಟ್ ತನಗೇ ಬೇಕೆಂದು ಪಟ್ಟು ಹಿಡಿದಿದ್ದು, ಈ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ಭೇಟಿ ಮಾಡಲು ಮೂರ್ನಾಲ್ಕು ಬಾರಿ ದೆಹಲಿಗೂ ಹೋಗಿ ಬಂದಿದ್ದಾರೆ. ಅಲ್ಲಿ ಜೆ.ಪಿ. ನಡ್ಡಾ, ರಾಜನಾಥ ಸಿಂಗ್, ಅಮಿತ್ ಶಾ ಸೇರಿದಂತೆ ರಾಜ್ಯದ ಹಲವು ಹಿರಿಯ ನಾಯಕರನ್ನು ಭೇಟಿ ಮಾಡಿ ಚರ್ಚಿಸಿ ಟಿಕೆಟ್‌ಗಾಗಿ ಲಾಬಿ ಮಾಡಿದ್ದಾರೆ. ಇದರ ಬೆನ್ನಲ್ಲಿಯೇ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರೊಂದಿಗೆ ಕೇಂದ್ರ ಬಿಜೆಪಿ ನಾಯಕರು ಒಂದೆರೆಡು ಸತ್ತಿನ ಮಾತುಕತೆಯನ್ನೂ ಮಾಡಿದ್ದಾರೆ. ಆದರೆ, ಈ ಸಭೆಯಲ್ಲಿ ಸಿ.ಪಿ. ಯೋಗೇಶ್ವರ್ ಅವರಿಗೆ ಮೈತ್ರಿ ಟಿಕೆಟ್ ಕೊಡುವುದಕ್ಕೆ ಹಿಂದೇಟು ಹಾಕಲಾಗಿದೆ. ಆದ್ದರಿಂದ ಇದೀಗ ಮಾಜಿ ಸಂಸದ ಪ್ರತಾಪ್ ಸಿಂಹಗೆ ಉಪ ಚುನಾವನೆ ಮೈತ್ರಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ ಎಂಬ ಸುಳಿವು ಸಿಕ್ಕಿದೆ.

ದೊಡ್ಡಗೌಡರಿಗೂ ಹತ್ತಿರವಾಗಿದ್ದ ಪ್ರತಾಪ್ ಸಿಂಹ:
ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ-ಜೆಡಿಸ್ ಮೈತ್ರಿ ಸುಳಿವು ಸಿಗುತ್ತಿದ್ದಂತೆಯೇ ಮೈಸೂರು-ಕೊಡಲು ಲೋಕಸಭಾ ಸಂಸದ ಪ್ರತಾಪ್ ಸಿಂಹ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಬಳಿ ಹೋಗಿ ಆಶೀರ್ವಾದ ಪಡೆದುಕೊಂಡು ಬಂದಿದ್ದರು. ಹೆಚ್.ಡಿ.ದೇವೇಗೌಡರು, ಕುಮಾರಸ್ವಾಮಿ, ಶಾಸಕ ಜಿ.ಟಿ. ದೇವೇಗೌಡ ಸೇರಿದಂತೆ ಹಲವು ಜೆಡಿಎಸ್ ನಾಯಕರೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೂ ಹೊಂದಿದ್ದರು. ಆದರೆ, ಲೋಕಸಭಾ ಚುನಾವಣೆಗೆ ಪ್ರತಾಪ್ ಸಿಂಹ ಅವರಿಗೆ ಬಿಜೆಪಿ ಟಿಕೆಟ್ ನಿರಾಕರಿಸಿ ಮೈಸೂರು ಸಂಸ್ಥಾನದ ರಾಜ ಯದುವೀರ್ ಒಡೆಯರ್‌ಗೆ ಟಿಕೆಟ್ ನೀಡಿತ್ತು. ಆದರೂ ಜೆಡಿಎಸ್‌ನೊಂದಿಗೆ ಪ್ರತಾಪ್‌ಸಿಂಹ ಉತ್ತಮ ಒಡನಾಟವನ್ನೇ ಹೊಂದಿದ್ದಾರೆ. ಇದರ ಫಲವೇ ಇದೀಗ ಚನ್ನಪಟ್ಟಣದ ಮೈತ್ರಿ ಟಿಕೆಟ್ ಪ್ರತಾಪ್ ಸಿಂಹ ಪಾಲಾಗುತ್ತಿದೆ ಎಂಬ ಖಚಿತತೆಯನ್ನು ಹೆಚ್ಚು ಮಾಡುತ್ತಿದೆ.

The post ಚನ್ನಪಟ್ಟಣ ಉಪಚುನಾವಣೆ ಅಖಾಡಕ್ಕೆ ಪ್ರತಾಪ್ ಸಿಂಹ ಎಂಟ್ರಿ ? appeared first on Good News 24x7.

]]>
https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3-%e0%b2%89%e0%b2%aa%e0%b2%9a%e0%b3%81%e0%b2%a8%e0%b2%be%e0%b2%b5%e0%b2%a3%e0%b3%86-%e0%b2%85%e0%b2%96%e0%b2%be%e0%b2%a1/feed/ 0 606
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ https://www.goodnews24x7.com/%e0%b2%ac%e0%b3%83%e0%b2%b9%e0%b2%a4%e0%b3%8d-%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%ae%e0%b2%b9%e0%b2%be%e0%b2%a8%e0%b2%97%e0%b2%b0-%e0%b2%aa%e0%b2%be%e0%b2%b2%e0%b2%bf/ https://www.goodnews24x7.com/%e0%b2%ac%e0%b3%83%e0%b2%b9%e0%b2%a4%e0%b3%8d-%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%ae%e0%b2%b9%e0%b2%be%e0%b2%a8%e0%b2%97%e0%b2%b0-%e0%b2%aa%e0%b2%be%e0%b2%b2%e0%b2%bf/#respond Tue, 13 Aug 2024 05:38:18 +0000 https://www.goodnews24x7.com/?p=345 ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು. ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ…

The post ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ appeared first on Good News 24x7.

]]>
ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

ಮೈಸೂರು ನಗರಕ್ಕೆ ಹೊಂದಿಕೊಂಡಿರುವ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಒಳಪಡಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯರವರಲ್ಲಿ ಶಾಸಕ ಜಿ.ಟಿ.ದೇವೇಗೌಡ ಮನವಿ ಮಾಡಿದರು.
ಅವರು ಇಂದು ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ದಸರಾ ಮಹೋತ್ಸವ ಉನ್ನತ ಸಮಿತಿ ಸಭೆಯಲ್ಲಿ ಭಾಗವಹಿಸಿ ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.
ಮೈಸೂರು ನಗರವು ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದ್ದು, ಮೈಸೂರಿನ ಹೊರ ವರ್ತುಲ ರಸ್ತೆ (ಔuಣeಡಿ ಡಿiಟಿg ಡಿoಚಿಜ) ಒಳಗೆ ಬರುವ ಮೈಸೂರು ತಾಲ್ಲೂಕಿನ ಗ್ರಾಮಗಳಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಜನಸಂಖ್ಯೆ ಇದ್ದು, ಈ ವ್ಯಾಪ್ತಿಯಲ್ಲಿ ಹೆಚ್ಚಿನ ಬಡಾವಣೆಗಳು ಸಹಾ ಅಭಿವೃದ್ದಿಗೊಂಡಿದ್ದು, ನಿವಾಸಿಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ ಸದರಿ ಬಡಾವಣೆಗಳನ್ನು ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಒಳಪಡಿಸುವ ಸಲುವಾಗಿ ಪಾಲಿಕೆಗೆ ಹೊಂದಿಕೊಂಡಂತೆ ಇರುವ ಗ್ರಾಮಗಳಲ್ಲಿನ ಬಡಾವಣೆಗಳನ್ನು ಪಾಲಿಕೆಗೆ ಸೇರಿಸಿಕೊಳ್ಳುವುದು ಅತ್ಯಂತ ಅವಶ್ಯಕವಾಗಿರುತ್ತದೆ.
ಕರ್ನಾಟಕ ಮುನಿಸಿಪಲ್ ಕಾರ್ಪೋರೇಷನ್ ಅಧಿನಿಯಮ-1976ರ ಸೆಕ್ಷನ್ 4 ಮತ್ತು ಸೆಕ್ಷನ್ 500 ರಲ್ಲಿ ದೊಡ್ಡ ನಗರ ಪ್ರದೇಶಗಳಲ್ಲಿ ಕೆಲವೊಂದು ನಗರಸಭೆ, ಪಟ್ಟಣ ಪಂಚಾಯಿತಿ ಮತ್ತು ಗ್ರಾಮ ಪಂಚಾಯಿತಿ ಪ್ರದೇಶಗಳನ್ನು ಸೇರಿಸಿಕೊಳ್ಳಲು ಹಾಗೂ ಕೈಬಿಡಲು ಅವಕಾಶ ಕಲ್ಪಿಸಲಾಗಿರುತ್ತದೆ.

ಮೈಸೂರು ಮಹಾ ನಗರಪಾಲಿಕೆಯನ್ನು ಬೃಹತ್ ಮಹಾನಗರ ಪಾಲಿಕೆಯನ್ನಾಗಿ ರಚನೆ ಮಾಡುವ ಸಂಬಂಧ ಬೃಹತ್ ಮೈಸೂರು ಮಹಾನಗರ ಪಾಲಿಕೆಯ ಎಲ್ಲೆಯನ್ನು ಗುರುತಿಸಿ 2018ರ ವಾರ್ಡ್ ಆeಟimiಣಚಿioಟಿ ನ್ನು ಪರಿಗಣನೆಗೆ ತೆಗೆದುಕೊಂಡು ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿಗೆ ಈ ಕೆಳಕಂಡ ಗ್ರಾಮ ಪಂಚಾಯಿತಿಗಳನ್ನು, ಪಟ್ಟಣ ಪಂಚಾಯಿತಿಗಳನ್ನು, ಮತ್ತು ನಗರಸಭೆಯನ್ನು ಸೇರಿಸಿಕೊಳ್ಳುಬೇಕಾಗಿದೆ.

1 ಹಾಲಿ ಮೈಸೂರು ಮಹಾನಗರ ಪಾಲಿಕೆ ವ್ಯಾಪ್ತಿ : 86.31.ಕಿ.ಮೀ
ಹೊಸದಾಗಿ ಸೇರ್ಪಡೆಗೊಳಿಸಲು ಪ್ರಸ್ತಾಪಿಸಿರುವ ಪ್ರದೇಶಗಳು
1 ಹೂಟಗಳ್ಳಿ ನಗರಸಭೆ 29.70 ಚ.ಕಿ.ಮೀ
2 ಶ್ರೀರಾಂಪುರ ಪಟ್ಟಣ ಪಂಚಾಯಿತಿ -17.84 ಚ.ಕಿ.ಮೀ
3 ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ- 22.11 ಚ.ಕಿ.ಮೀ
4 ಕಡಕೋಳ ಪಟ್ಟಣ ಪಂಚಾಯಿತಿ- 34.71 ಚ.ಕಿ.ಮೀ
5 ಬೋಗಾದಿ ಪಟ್ಟಣ ಪಂಚಾಯಿತಿ – 35.50 ಚ.ಕಿ.ಮೀ
6 ಚಾಮುಂಡಿಬೆಟ್ಟಗ್ರಾಮ ಪಂಚಾಯಿತಿ -6.00 ಚ.ಕಿ.ಮೀ
7 ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ- 14.70 ಚ.ಕಿ.ಮೀ
8 ಇಲವಾಲ ಗ್ರಾಮ ಪಂಚಾಯಿತಿ- 20.76 ಚ.ಕಿ.ಮೀ
9 ಆಲನಹಳ್ಳಿ ಗ್ರಾಮ ಪಂಚಾಯಿತಿ -5.69 ಚ.ಕಿ.ಮೀ

ಮೇಲ್ಕಂಡ ಪ್ರದೇಶಗಳ ಪೈಕಿ ಸರ್ಕಾರದಿಂದ ಅನುಮೋದನೆಗೊಂಡಿರುವ 2018ರ ವಾರ್ಡ್ ಆeಟimiಣಚಿioಟಿ ರನ್ವಯ ಹೂಟಗಳ್ಳಿ, ರಮ್ಮನಹಳ್ಳಿ ಹಾಗೂ ಶ್ರೀರಾಂಪುರ ಪ್ರದೇಶದ ಭಾಗಶಃ ಗ್ರಾಮಗಳು ಪಾಲಿಕೆಯ ಎಲ್ಲೆಯೊಳಗೆ ಬರುತ್ತಿದ್ದು, ಸರ್ಕಾರದ ಅಧಿಸೂಚನೆ ಅನ್ವಯ ಪಾಲಿಕೆಯ ವಾರ್ಡ್ ನಂ:1,2,3,4,5,20ರ ಹೆಬ್ಬಾಳು ಪ್ರದೇಶವು ಹೂಟಗಳ್ಳಿ ನಗರಸಭೆಯ ವ್ಯಾಪ್ತಿಗೆ ಸೇರಿರುತ್ತದೆ. ವಾರ್ಡ್ ನಂ: 35ರ ಸಾತಗಳ್ಳಿ ಪ್ರದೇಶವು ರಮ್ಮನಹಳ್ಳಿ ಪಟ್ಟಣ ಪಂಚಾಯಿತಿಗೆ ಹಾಗೂ ವಾರ್ಡ್ ನಂ:65ರ ಶ್ರೀರಾಂಪುರ ಪ್ರದೇಶವು ಶ್ರೀರಾಂಪುರ ಪಟ್ಟಣ ಪಂಚಾಯಿತಿಗೆ ಸೇರುತ್ತದೆ.
ಈ ಸಂಬಂಧ ಹೂಟಗಳ್ಳಿ ನಗರಸಭೆ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಹಾಗೂ ಶ್ರೀರಾಂಪುರ ಪಟ್ಟಣ ಪಂಚಾಯಿತಿ ಕಛೇರಿಗಳಿಂದ ಈಗಾಗಲೇ ಸರ್ಕಾರದಿಂದ ಅನುಮೋದನೆಗೊಂಡಿರುವ-2018ರ ವಾರ್ಡ್ ಆeಟimiಣಚಿioಟಿ ನಕ್ಷೆಯನ್ವಯ ಪಾಲಿಕೆಯ ವ್ಯಾಪ್ತಿಯೊಳಗೆ ಸೇರಿರುವ ಪ್ರದೇಶಗಳನ್ನು ಕೈಬಿಡುವಂತೆ ಸರ್ಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಿರುವುದಾಗಿ ಸದರಿ ಕಛೇರಿಗಳಿಂದ ತಿಳಿದುಬಂದಿರುತ್ತದೆ. ಗಡಿರೇಖೆಯು ಸರ್ಕಾರದ ಅಧಿಸೂಚನೆಯಂತೆ ಹಾಗೂ 2018 ವಾರ್ಡ್ ಆeಟimiಣಚಿioಟಿನಂತೆ ಸಮಗ್ರ ನಕ್ಷೆ ತಯಾರಿಸಲಾಗಿದೆ. ಅದರಂತೆ ಪಾಲಿಕೆಯ ಹಾಲಿ ವಿಸ್ತೀರ್ಣ 86.31 ಚ.ಕಿ.ಮೀ ಪ್ರದೇಶಕ್ಕೆ ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ಓಳಗೊಂಡತೆ ಒಟ್ಟು 187.01ಚ.ಕಿ.ಮೀ ಪ್ರದೇಶವನ್ನು ಪಾಲಿಕೆಯ ವ್ಯಾಪ್ತಿಗೆ ಸೇರಿಸಿಕೊಳ್ಳಲಾಗಿ ಪ್ರಸ್ತಾವಿತ ಬೃಹತ್ ಮೈಸೂರು ಮಹಾನಗರ ಪಾಲಿಕೆ ಒಟ್ಟಾರೆ ವಿಸ್ತೀರ್ಣವು 273.32 ಚ.ಕಿ.ಮೀ ಆಗುತ್ತದೆ.
ಮೇಲ್ಕಂಡ ಅಂಶಗಳಲ್ಲಿ ಹಿನ್ನಲೆಯಲ್ಲಿ, ಚಾಮುಂಡಿಬೆಟ್ಟ ಗ್ರಾಮ ಪಂಚಾಯಿತಿ, ಆಲನಹಳ್ಳಿ ಗ್ರಾಮ ಪಂಚಾಯಿತಿ, ಸಿದ್ದಲಿಂಗಪುರ ಗ್ರಾಮ ಪಂಚಾಯಿತಿ, ಹೂಟಗಳ್ಳಿ ನಗರಸಭೆ, ಬೋಗಾದಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಇಲವಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಾಸಿಸುತ್ತಿರುವ ಜನರಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜೊತೆಗೆ ಯೋಜನಾಬದ್ದ ನಗರದ ಬೆಳವಣಿಗೆಗೆ ಅವಕಾಶ ಕಲ್ಪಿಸುವ ಸಲುವಾಗಿ ಮೈಸೂರು ಮಹಾನಗರ ಪಾಲಿಕೆಗೆ ಸೇರಿಸಿಕೊಂಡು ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೇಗೆರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ

The post ಬೃಹತ್ ಮೈಸೂರು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೇರಿಸುವಂತೆ ಮುಖ್ಯಮಂತ್ರಿಗಳಲ್ಲಿ ಶಾಸಕ ಜಿ.ಟಿ.ಡಿ.ಮನವಿ appeared first on Good News 24x7.

]]>
https://www.goodnews24x7.com/%e0%b2%ac%e0%b3%83%e0%b2%b9%e0%b2%a4%e0%b3%8d-%e0%b2%ae%e0%b3%88%e0%b2%b8%e0%b3%82%e0%b2%b0%e0%b3%81-%e0%b2%ae%e0%b2%b9%e0%b2%be%e0%b2%a8%e0%b2%97%e0%b2%b0-%e0%b2%aa%e0%b2%be%e0%b2%b2%e0%b2%bf/feed/ 0 345
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/ https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/#respond Tue, 02 Jul 2024 07:01:04 +0000 https://www.goodnews24x7.com/?p=164 ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ…

The post ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ appeared first on Good News 24x7.

]]>
ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್

ವಿರುಪಾಕ್ಷಿ ಪುರ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಅರಳಾಳುಸಂದ್ರದ ಶಾಲಾ ಆವರಣದಲ್ಲಿ ಸೋಮವಾರ ನಡೆದ ‘ಬಾಗಿಲಿಗೆ ಬಂತು ಸರ್ಕಾರ ಸೇವೆಗೆ ಇರಲಿ ಸಹಕಾರ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜನರ ಸೇವೆ ಮಾಡಲು ಉಪಮುಖ್ಯಮಂತ್ರಿಯಾಗಿ ನಿಮ್ಮ ಮುಂದೆ ಬಂದಿದ್ದೇನೆ. ಜನಸೇವೆ ಮಾಡಲು ಮೊದಲು ಅವಕಾಶ ನೀಡಿದವರು ಚನ್ನಪಟ್ಟಣದ ಮತದಾರರು. ನಾನು ಜಾತಿ ನೋಡಿ ಜನಸೇವೆ ಮಾಡಿಲ್ಲ ನೀತಿ ನೋಡಿ ಕೆಲಸ ಮಾಡಿದ್ದೇನೆ ಎಂದು ಹೇಳಿದರು.

ನಿಮ್ಮ ಮನೆ ಬಾಗಿಲಿಗೆ ಅವಕಾಶ ಬಂದಿದೆ. ಯಾವುದೇ ಕಾರಣಕ್ಕೂ ಬಿಡಲು ಹೋಗಬೇಡಿ. ನಿಮ್ಮ ಮನೆ ಬಾಗಿಲಿಗೆ ಅಧಿಕಾರಿಗಳು, ಜನಪ್ರತಿನಿದಿಗಳು ಬಂದಿದ್ದಾರೆ. ನೀವು ನನ್ನ ಸೇವೆಯನ್ನು ಸಂಪೂರ್ಣವಾಗಿ ಬಳಸಿಕೊಳ್ಳಬೇಕು. ನಿಮ್ಮ ಸೇವೆಗೆ ನನ್ನ ಕಚೇರಿ ಸದಾ ತೆರೆದಿರುತ್ತದೆ. ನನ್ನ ಕಚೇರಿಗೆ ಬಂದು ನಿಮ್ಮ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಬಹುದು” ಎಂದರು.

The post ಚನ್ನಪಟ್ಟಣಕ್ಕೆ ನಾನೇ ಸೇವಕ, ನಾನೇ ನಿಮ್ಮ ಮನೆ ಮಗ : ಡಿಸಿಎಂ ಡಿ.ಕೆ.ಶಿವಕುಮಾರ್ appeared first on Good News 24x7.

]]>
https://www.goodnews24x7.com/%e0%b2%9a%e0%b2%a8%e0%b3%8d%e0%b2%a8%e0%b2%aa%e0%b2%9f%e0%b3%8d%e0%b2%9f%e0%b2%a3%e0%b2%95%e0%b3%8d%e0%b2%95%e0%b3%86-%e0%b2%a8%e0%b2%be%e0%b2%a8%e0%b3%87-%e0%b2%b8%e0%b3%87%e0%b2%b5%e0%b2%95/feed/ 0 164