ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯ : ಆರ್ ಅಶೋಕ್

ಕಾಂಗ್ರೆಸ್ ಸರ್ಕಾರದಲ್ಲಿ ಮತಾಂಧ ಶಕ್ತಿಗಳು ಮತ್ತೊಮ್ಮೆ ಅಟ್ಟಹಾಸ ಮೆರೆದಿದ್ದು, ಸರ್ವ ಜನಾಂಗದ ಶಾಂತಿಯ ತೋಟವಾಗಿದ್ದ ಕರ್ನಾಟಕದಲ್ಲಿ ಜಿಹಾದಿ ಮುಳ್ಳುಗಳ ದುಸ್ಸಾಹಸ ಶಾಂತಿ ಕದಡುತ್ತಿದೆ.

ನಿನ್ನೆ ರಾತ್ರಿ ಮಂಡ್ಯ ಜಿಲ್ಲೆಯ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದಿರುವ ಘಟನೆ ಅತ್ಯಂತ ಖಂಡನೀಯವಾಗಿದ್ದು, ಕಾಂಗ್ರೆಸ್ ಆಡಳಿತದಲ್ಲಿ ರಾಜ್ಯದಲ್ಲಿ ಕಣ್ಮರೆಯಾಗಿರುವ ಕಾನೂನು ಸುವ್ಯವಸ್ಥೆಗೆ ಮತ್ತೂಂದು ನಿದರ್ಶನವಾಗಿದೆ. ಕಳೆದ ವರ್ಷವೂ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ಸಂದರ್ಭದಲ್ಲಿ ಇಂತಹುದೇ ಘಟನೆ ನಡೆದಿದ್ದರೂ ಈ ವರ್ಷ ಪೊಲೀಸರು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳದಿರುವುದು ಕಾಂಗ್ರೆಸ್ ಸರ್ಕಾರ ಕಾನೂನು ಸುವ್ಯವಸ್ಥೆ ಕಾಪಾಡುವುದರಲ್ಲಿ ಸಂಪೂರ್ಣ ವಿಫಲವಾಗಿದೆ ಎನ್ನುವುದಕ್ಕೆ ಸಾಕ್ಷಿಯಾಗಿದೆ.

ಶಾಂತಿಯುತವಾಗಿ ಸಾಗುತ್ತಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಅಡ್ಡಿಪಡಿಸುವ ದುರುದ್ದೇಶದಿಂದ ಮುಸ್ಲಿಂ ಮತಾಂಧ ಪುಂಡರು ಪೂರ್ವನಿಯೋಜಿತವಾಗಿ ದಾಂಧಲೆ ಎಬ್ಬಿಸಿ ಸಾರ್ವಜನಿಕರು, ಪೊಲೀಸರ ಮೇಲೆ ಕಲ್ಲು ತೂರಾಟ ಮಾಡುವುದು, ಚಪ್ಪಲಿ ಎಸೆಯುವುದು, ಪೆಟ್ರೋಲ್ ಬಾಂಬ್ ಸ್ಫೋಟಿಸುವುದು, ತಲ್ವಾರ್ ಝಳಪಿಸುವಂತಹ ದುಸ್ಸಾಹಸಕ್ಕೆ ಮುಂದಾಗುತ್ತಾರೆ ಅಂದರೆ ರಾಜ್ಯದಲ್ಲಿ ಇಂತಹ ಮತಾಂಧ ಪುಂಡರಿಗೆ, ಮುಸ್ಲಿಂ ಮೂಲಭೂತವಾದಿಗಳಿಗೆ ಕಾನೂನಿನ ಭಯವೇ ಇಲ್ಲವೆಂಬುದು ಸ್ಪಷ್ಟವಾಗುತ್ತದೆ.

ಅಷ್ಟೇ ಅಲ್ಲದೆ, ರಕ್ಷಣೆ ಕೊಡಿ ಎಂದು ಪೊಲೀಸ್ ಠಾಣೆಗೆ ಬಂದವರ ಮೇಲೆಯೇ ಈ ಮತಾಂಧ ಪುಂಡರು ಹಲ್ಲೆ, ದಬ್ಬಾಳಿಕೆ ನಡೆಸುತ್ತಾರೆ ಅಂದರೆ ಈ ದುಷ್ಟರ ತಾಲಿಬಾನ್ ಮನಸ್ಥಿತಿಗೆ ಕಾಂಗ್ರೆಸ್ ಸರ್ಕಾರದಲ್ಲಿ ಎಷ್ಟು ಪ್ರೋತ್ಸಾಹ, ಪೋಷಣೆ ದೊರಕುತ್ತಿದೆ ಎಂದು ಊಹಿಸಿಕೊಳ್ಳಿ.

@INCKarnataka
ಪಕ್ಷ ಮತ್ತು ರಾಜ್ಯ ಸರ್ಕಾರದ ವೋಟ್ ಬ್ಯಾಂಕ್ ರಾಜಕಾರಣ, ಓಲೈಕೆ ರಾಜಕಾರಣ, ತುಷ್ಟೀಕರಣವೇ ಇಂತಹ ಘಟನೆಗಳು ಪದೇ ಪದೇ ಮರುಕಳಿಸುತ್ತಿರುವುದಕ್ಕೆ ನೇರ ಕಾರಣ.

ಇಂತಹ ಮತಾಂಧ ಪುಂಡರ ಬಾಲ ಕತ್ತರಿಸದೆ ಹೀಗೆ ಬಿಟ್ಟರೆ ಇಂತಹವರು ನಾಳೆ ಉಗ್ರವಾದಿಗಳಾಗುವುದರಲ್ಲಿ ಸಂಶಯವೇ ಇಲ್ಲ. ನಿನ್ನೆಯ ಗಲಭೆಗೆ ಕಾರಣರಾದ ಸಮಾಜ ಘಾತುಕ ಶಕ್ತಿಗಳನ್ನ ಈ ಕೊಡಲೇ ಬಂಧಿಸಿ ಕಾನೂನು ವಶಕ್ಕೆ ಒಪ್ಪಿಸಿ ಸರ್ವ ಜನಾಂಗದ ಶಾಂತಿಯ ತೋಟವಾದ ಕರ್ನಾಟಕದಲ್ಲಿ ಜಿಹಾದಿ ಮಾನಸಿಕತೆಗೆ ಜಾಗವಿಲ್ಲ ಎಂಬ ದಿಟ್ಟ ಸಂದೇಶ ರವಾನಿಸಬೇಕು ಎಂದು ಮುಖ್ಯಮಂತ್ರಿ @siddaramaiahಹಾಗು ಗೃಹ ಸಚಿವ
@DrParameshwara ಅವರನ್ನ ಒತ್ತಾಯಿಸುತ್ತೇನೆ ಎಂದು ಆರ್ ಅಶೋಕ್ ಟ್ವೀಟ್​ ಮಾಡಿದ್ದಾರೆ.

Related Posts

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87 ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಚಾಲನೆ ಸಕ್ಕರೆ ನಗರಿ ಮಂಡ್ಯದಲ್ಲಿ ಮೂರು ದಿನಗಳ ಕಾಲ ನಡೆಯಲಿರುವ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚಾಲನೆ ನೀಡಿದರು. ಕರ್ನಾಟಕದಲ್ಲಿ ಅತಿ ಹೆಚ್ಚು…

Leave a Reply

Your email address will not be published. Required fields are marked *

You Missed

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

ಪಾರ್ಸೆಲ್ನಲ್ಲಿ ಇತ್ತು ಮಾನವನ ಶ*: ಬೆಚ್ಚಿಬಿದ್ದ ಮಹಿಳೆ!

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಅದ್ಧೂರಿ ಚಾಲನೆ..

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಯಾವ ಹೆಣ್ಣುಮಕ್ಕಳೂ ಇಂತಹ ಆರೋಪಗಳ ಬಗ್ಗೆ ಸುಳ್ಳು ದೂರು ಕೊಡೋದಿಲ್ಲ : ಸಿಎಂ ಸಿದ್ದರಾಮಯ್ಯ

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಸಾರಿಗೆ ಇಲಾಖೆಯಿಂದ ವೈಟ್ ಬೋರ್ಡ್ ಟ್ರಾವೆಲ್ಸ್ ಮಾಲೀಕರಿಗೆ ಬಿಗ್ ಶಾಕ್.

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!

ಎಷ್ಟೇ ರೇಡ್ ಮಾಡಿದ್ರೂ ಅದೇ ರಾಗ ಅದೇ ಹಾಡು : ಪರಪ್ಪನ ಅಗ್ರಹಾರ ಜೈಲಿನಲ್ಲಿ‌ ಮತ್ತೆ ಮೊಬೈಲ್ ಸೌಂಡ್!