ಸಿಎಂ ಸಿದ್ದರಾಮಯ್ಯ ಪಾಲಿಗೆ ಇಂದು ಬಿಗ್‌ಡೇ…!
ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ರದ್ದತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ಹೈಕೋರ್ಟ್‌ನಲ್ಲಿ ಬರಲಿದೆ.
ನ್ಯಾ.ನಾಗಪ್ರಸನ್ನ ಅವರ ಪೀಠದಲ್ಲಿ ಈ ಪ್ರಕರಣದ ವಿಚಾರಣೆ ನಡೆಯಲಿದ್ದು, ಎಲ್ಲರ ಚಿತ್ತ ಹೈಕೋರ್ಟ್‌ನತ್ತ ನೆಟ್ಟಿದೆ. ಸಿಎಂ ಪರ ಹಿರಿಯ ನ್ಯಾಯವಾದಿ ಅಭಿಷೇಕ್ ಮನುಸಿಂಘ್ವಿ, ರಾಜ್ಯಪಾಲರ ಪರ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ವಾದ ಮುಂದುವರೆಸಲಿದ್ದಾರೆ.
ಏ.19ರ ವಿಚಾರಣೆ ವೇಳೆ, ಆ.29 ರವರೆಗೂ ಸಿಎಂ ಸಿದ್ದರಾಮಯ್ಯ ವಿರುದ್ಧ ಯಾವುದೇ ಕ್ರಮಕ್ಕೆ ಸೂಚಿಸದಂತೆ ಕೆಳಹಂತದ ನ್ಯಾಯಾಲಯಕ್ಕೆ ಹೈಕೋರ್ಟ್ ಸೂಚಿಸಿತ್ತು. ಈ ಮೂಲಕ ತಾತ್ಕಾಲಿಕ ರಿಲೀಫ್ ಕೊಟ್ಟಿತ್ತು. ಇಂದು ಕೋರ್ಟ್‌ನ ಮುಂದಿನ ನಡೆ ಭಾರೀ ಕುತೂಹಲಕ್ಕೆ ಎಡೆ ಮಾಡಿಕೊಟ್ಟಿದೆ.