ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ

ಜನರ ಸಮಸ್ಯೆಗಳಿಗಿಂತ ಟಿವಿ ಚಾನಲ್ ಗಳಿಗೆ ಗಂಡ ಹೆಂಡ್ತಿ ಜಗಳಗಳ ಬಗ್ಗೆಯೇ ಹೆಚ್ಚು ಆಸಕ್ತಿ : ಸಿಎಂ ಬೇಸರ

ಮೈಸೂರು ಮಾನಸ ಗಂಗೋತ್ರಿಯ ರಾಣಿ ಬಹದ್ದೂರ್ ಸಭಾಂಗಣದಲ್ಲಿ ಜಿಲ್ಲಾ ಪತ್ರಕರ್ತರ ಸಂಘ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ, ಪ್ರಶಸ್ತಿ ವಿತರಿಸಿ ಮಾತನಾಡಿದರು. ವಾಕ್ ಸ್ವಾತಂತ್ರ್ಯ ನಮಗೆ ನಮ್ಮ‌ ಸಂವಿಧಾನ ನೀಡಿರುವ ಅತ್ಯುನ್ನತ ಮೌಲ್ಯ. ಸಂವಿಧಾನದ ಮೂರು ಅಂಗಗಳಿಗೆ ಅಪಾಯ ಬಂದರೆ ಸಮಾಜಕ್ಕೆ ಅಪಾಯ ಬಂದಂತೆ. ವಾಕ್ ಸ್ವಾತಂತ್ರ್ಯ ಆಚರಿಸುವ ಪತ್ರಿಕಾ ರಂಗಕ್ಕೆ ಯಾವ ನಿರ್ಬಂಧಗಳೂ ಇರಬಾರದು ಎನ್ನುವುದನ್ನು ಪಂಡಿತ್ ನೆಹರೂ ಅವರೂ ಬಹಳ ಒತ್ತಿ ಹೇಳಿದ್ದರು ಎಂದು ವಿವರಿಸಿದರು.

ಸುಳ್ಳು ಸುದ್ದಿಗಳ ಅನಾಹುತಗಳಿಗೆ ಉದಾಹರಣೆ ನೀಡಿದ ಮುಖ್ಯಮಂತ್ರಿಗಳಯ, “ನಾನು ಸದನದಲ್ಲಿ ಮಾತನಾಡುವಾಗ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಆಡಿದ ಮಾತನ್ನು ನಾನು ಉದಾಹರಿಸಿದ್ದೆ. ” ಸಾಲ ಮನ್ನಾ ಮಾಡೋದಕ್ಕೆ ನಮ್ಮ ಬಳಿ ಪ್ರಿಂಟಿಂಗ್ ಮೆಷಿನ್ ಇದೆಯಾ” ಎಂದು ಯಡಿಯೂರಪ್ಪ ಅವರು ಸದನದಲ್ಲೇ ಹೇಳಿದ್ದರು. ಈ ಮಾತನ್ನು ನಾನು ಉದಾಹರಿಸಿದ್ದೆ. ಆದರೆ ಸಾಮಾಜಿಕ ಜಾಲ ತಾಣಗಳಲ್ಲಿ ನಾನೇ ಆ ಮಾತು ಹೇಳಿದ್ದಾಗಿ ನಕಲಿ‌ ಸುದ್ದಿ ಸೃಷ್ಟಿಸಿ, ಅದಕ್ಕೆ ಗ್ಯಾರಂಟಿ ಯೋಜನೆಗಳನ್ನು ಬೆರೆಸಿ ತಪ್ಪು ಸಂದೇಶ ಹರಡಿದರು. ಇದರಿಂದ ನಷ್ಟ ಆಗಿದ್ದು ಸಮಾಜಕ್ಕೇ ಹೊರತು ನನಗಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಫೇಕ್ ನ್ಯೂಸ್ ಸೃಷ್ಟಿಕರ್ತರಿಗೆ ಕಠಿಣ ಶಿಕ್ಷೆ ಕೊಡಿಸುವ ನಿಟ್ಟಿನಲ್ಲಿ ನಾವು ಕಾನೂನು ಮಾಡಿದ್ದೇವೆ. ಆದರೆ ಕೇವಲ ಕಾನೂನಿನಿಂದ ಮಾತ್ರ ಫೇಕ್ ನ್ಯೂಸ್ ತಡೆಯಲು ಸಾಧ್ಯವಿಲ್ಲ. ಇಡೀ ಸಮಾಜ ಇದರ ವಿರುದ್ಧ ಧ್ವನಿ ಎತ್ತಿದರೆ ಮಾತ್ರ ಸಾಧ್ಯ ಎಂದರು.

ಜಿಲ್ಲಾ ಉಸ್ತುವಾರಿ ಸಚಿವರಾದ ಹೆಚ್.ಸಿ.ಮಹದೇವಪ್ಪ, ಮುಖ್ಯಮಂತ್ರಿಗಳ ಮಾಧ್ಯಮ‌ಸಲಹೆಗಾರರಾದ ಕೆ.ವಿ.ಪ್ರಭಾಕರ್, ಪ್ರಜಾವಾಣಿ ಪತ್ರಿಕೆ ಸಂಪಾದಕರಾದ ರವೀಂದ್ರ ಭಟ್, ಗ್ಯಾರಂಟಿ ಅನುಷ್ಠಾನ ಸಮಿತಿಯ ಪುಷ್ಪಾ ಅಮರನಾಥ್, ಶಾಸಕರಾದ ರವಿಶಂಕರ್, ತನ್ವೀರ್ ಸೇಠ್, ನ್ಯೂಸ್ ಫಸ್ಟ್ ಸಿಇಒ ರವಿಕುಮಾರ್ ಉಪಸ್ಥಿತರಿದ್ದರು. ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷರಾದ ದೀಪಕ್, ಕಾರ್ಯದರ್ಶಿ ಧರ್ಮಾಪುರ ನಾರಾಯಣ್ ಸೇರಿ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related Posts

ಕರ್ನಾಟಕದ ಮೂವರು ಯೋಧರು ಕಾಶ್ಮೀರ ಸೇನಾ ವಾಹನ ಅಪಘಾತದಲ್ಲಿ ನಿಧನ.

ಬೆಳಗಾವಿ: ಜಮ್ಮು ಕಾಶ್ಮೀರದಲ್ಲಿ ಸಂಭವಿಸಿದ ಸೇನಾ ವಾಹನ ಅಪಘಾತದಲ್ಲಿ ಕರ್ನಾಟಕ ಮೂಲದ ಸೈನಿಕರು ಕೂಡ ಸಾವನ್ನಪ್ಪಿದ್ದಾರೆ. ಮಂಗಳವಾರ ಪೂಂಚ್ ಜಿಲ್ಲೆಯ ಮೆಂಧರ್ನ ಬಲ್ನೋಯಿ ಪ್ರದೇಶದ ಗಡಿ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ವಾಹನ ಕಂದಕಕ್ಕೆ ಉರುಳಿಬಿದ್ದು ಐವರು ಯೋಧರು ಸಾವನ್ನಪ್ಪಿ, ಐವರು…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್​​ ಅವರನ್ನು ಅವಾಚ್ಯ ಶಬ್ದಗಳಿಂದ ನಿಂದಿಸಿದ ಪ್ರಕರಣದಲ್ಲಿ ಬಿಜೆಪಿ ಎಂಎಲ್​ಸಿ ಸಿ.ಟಿ ರವಿ ಅವರನ್ನು ಪೊಲೀಸರು ಇಂದು ಬೆಳಗಾವಿ ಜೆಎಂಎಫ್​ಸಿ ಕೋರ್ಟ್​ಗೆ ಹಾಜರುಪಡಿಸಿದರು. ಸಿ.ಟಿ ರವಿ ವಿರುದ್ಧದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸ್ಪರ್ಶಾ ಡಿಸೋಜಾ ಅವರು, ಸಿ.ಟಿ.ರವಿ…

Leave a Reply

Your email address will not be published. Required fields are marked *

You Missed

ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ.

ಅಮೆರಿಕದ ಮಿಯಾಮಿಯಲ್ಲಿ ಶಿವರಾಜ್ ಕುಮಾರ್ ಯಶಸ್ವಿ ಶಸ್ತ್ರಚಿಕಿತ್ಸೆ.

ಕರ್ನಾಟಕದ ಸಾಕಮ್ಮ ಹಿಮಾಚಲದಲ್ಲಿ ಪತ್ತೆ: 20 ವರ್ಷಗಳ ಬಳಿಕ ರಾಜ್ಯಕ್ಕೆ ಕರೆತರುತ್ತಿದೆ ಅಧಿಕಾರಿಗಳ ತಂಡ .

ಕರ್ನಾಟಕದ ಸಾಕಮ್ಮ  ಹಿಮಾಚಲದಲ್ಲಿ ಪತ್ತೆ: 20 ವರ್ಷಗಳ ಬಳಿಕ ರಾಜ್ಯಕ್ಕೆ ಕರೆತರುತ್ತಿದೆ ಅಧಿಕಾರಿಗಳ ತಂಡ .

ಕರ್ನಾಟಕದ ಮೂವರು ಯೋಧರು ಕಾಶ್ಮೀರ ಸೇನಾ ವಾಹನ ಅಪಘಾತದಲ್ಲಿ ನಿಧನ.

ಕರ್ನಾಟಕದ ಮೂವರು ಯೋಧರು ಕಾಶ್ಮೀರ ಸೇನಾ ವಾಹನ ಅಪಘಾತದಲ್ಲಿ ನಿಧನ.

ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲು; ಸರ್ ಐಸಾಕ್ ನ್ಯೂಟನ್ ಹಲ್ಲುಗಳ ಬೆಲೆ 30 ಲಕ್ಷ ರೂ!!

ವಿಶ್ವದ ಅತ್ಯಂತ ದುಬಾರಿ ಮಾನವ ಹಲ್ಲು; ಸರ್ ಐಸಾಕ್ ನ್ಯೂಟನ್ ಹಲ್ಲುಗಳ ಬೆಲೆ  30 ಲಕ್ಷ ರೂ!!

ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;

ಮಕ್ಕಳನ್ನು ದತ್ತು ಪಡೆದು ಲೈಂಗಿಕವಾಗಿ ದುರುಪಯೋಗ : ಸಲಿಂಗಕಾಮಿ ಜೋಡಿಗೆ 100 ವರ್ಷ ಜೈಲು ಶಿಕ್ಷೆ;

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…

ಬೆಳಗಾವಿಯಿಂದ ಬೆಂಗಳೂರಿಗೆ ಸಿ.ಟಿ ರವಿ ಶಿಫ್ಟ್…