ನಿರ್ಮಲಾ ಸೀತಾರಾಮನ್ ಅವರು ಪತ್ರಿಕಾಗೋಷ್ಠಿ ಕರೆದು ರಾಜ್ಯಕ್ಕೆ ಅನ್ಯಾಯವಾಗಿಲ್ಲ ಎಂದಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಬಜೆಟ್ ಮೀಟಿಂಗ್ ಕರೆದಾಗ ಭದ್ರಾ ಮೇಲ್ದಂಡೆ ಯೋಜನೆಗೆ 5300 ಕೋಟಿ ರೂಪಾಯಿಗಳನ್ನೂ ನೀಡುವುದಾಗಿ ಘೋಷಣೆ ಮಾಡಿದ್ದು, ಅದನ್ನು ಕೊಡಿ ಎಂದು ಕೋರಿದ್ದೆವು. ಈ ಬಾರಿಯ ಬಜೆಟ್ ನಲ್ಲಿ ಈ ಬಗ್ಗೆ ಪ್ರಸ್ತಾಪವಿಲ್ಲ. 15 ನೇ ಹಣಕಾಸು ಆಯೋಗವು ಶಿಫಾರಸ್ಸು ಮಾಡಿದ್ದ 5495 ಕೋಟಿಗಳ ವಿಶೇಷ ಅನುದಾನವನ್ನೂ ಕೊಟ್ಟಿಲ್ಲ. ಪೇರಿಫೇರಲ್ ರಿಂಗ್ ರೋಡ್ ಗೆ 3000ಕೋಟಿ ಕೊಡುವುದಾಗಿ ಹೇಳಿದ್ದರು.ಅದೂ ಇಲ್ಲ. 3000 ಕೋಟಿ ಕೆರೆಗಳ ಅಭಿವೃದ್ಧಿಗೆ ಕೊಡುವುದಾಗಿ ಹೇಳಿದ್ದರು. ಅದೂ ಕೂಡ ಬಜೆಟ್ ನಲ್ಲಿ ಇಲ್ಲ. ಇದು ಅನ್ಯಾಯವಲ್ಲವೇ..?ಆಂಧ್ರ, ಬಿಹಾರ ರಾಜ್ಯಗಳಿಗೆ ಕೊಟ್ಟಿದ್ದಾರೆ. ಕರ್ನಾಟಕಕ್ಕೆ ಏನು ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.
ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ. ಹೆಚ್.ಡಿ.ಕುಮಾರಸ್ವಾಮಿ ಮತ್ತು ನಿರ್ಮಲಾ ಸೀತಾರಾಮನ್ ಅವರು ಘೋಷಣೆ ಮಾಡಿದ ಅನುದಾನವನ್ನು ನಾವು ಕೂಡಿಸುತ್ತೇವೆ ಎಂದು ಪ್ರಸ್ತಾಪ ಮಾಡಬಹುದಿತ್ತು. ಕೇಂದ್ರ ಸಚಿವರ ಕ್ಷೇತ್ರ ರಾಮನಗರಕ್ಕೂ ಏನಾದರೂ ಹೊಸದು ಯೋಜನೆ ಬಂದಿದೆಯೇ? ಕೈಗಾರಿಕಾ ಕಾರಿಡಾರ್ ಬಂದಿದೆಯೇ? ಮೇಕೆದಾಟು, ಕೈಗಾರಿಕೆ ಹಾಗೂ ಕೇಳಿದ ಅನುದಾನ ಕೊಟ್ಟಿಲ್ಲ. ರಾಯಚೂರಿಗೆ ಏಮ್ಸ್ ಸ್ಥಾಪಿಸುವಂತೆ ಕೋರಿದ್ದೆವು. ಆದರೆ ಯಾವುದೇ ಪ್ರಸ್ತಾಪವಾಗಿಲ್ಲ. ಮೈಸೂರು ಅಥವಾ ಹಾಸನಕ್ಕೆ ಐ ಐ ಟಿ ಮಂಜೂರು ಮಾಡಲು ಮನವಿ ಮಾಡಿದ್ದೆವು ಅದೂ ಕೂಡ ಆಗಿಲ್ಲ ಹಾಗಾದರೆ ಅನ್ಯಾಯವಾಗಿಲ್ಲ ಎಂದರೆ ಹೇಗೆ ಎಂದು ಪ್ರಶ್ನಿಸಿದರು. ನಿರ್ಮಲಾ ಸೀತಾರಾಮನ್ ಹಿಂದೆಯೂ ಸುಳ್ಳು ಹೇಳಿದ್ದರು ಈಗಲೂ ಸುಳ್ಳು ಹೇಳಿದ್ದಾರೆ ಎಂದರು.