ಮೈಸೂರು: ಅಂಬೇಡ್ಕರ್ ಕುರಿತು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ಡಾ. ಬಿ.ಆರ್. ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿಯು ಜನವರಿ 7 ರಂದು ಮೈಸೂರು ಬಂದ್ ಕರೆ ನೀಡಿದ್ದು, ಎಲ್ಲರೂ ಸ್ವಯಂಪ್ರೇರಿತರಾಗಿ ಪಾಲ್ಗೊಳ್ಳಬೇಕು ಎಂದು ಅಂಬೇಡ್ಕರ್ ಅಭಿಮಾನಿಗಳ ಹೋರಾಟ ಸಮಿತಿ ಮುಖಂಡ ಪುರುಷೋತ್ತಮ್ ಕೋರಿದರು.
‘ಜನವರಿ 7 ರಂದು ಬೆಳಿಗ್ಗೆ 6ರಿಂದ ಮಧ್ಯಾಹ್ನ 4ರವರೆಗೆ ಬಂದ್ ನಡೆಯಲಿದೆ. ವಿವಿಧ ಸಂಘಟನೆಗಳು, ಒಕ್ಕೂಟಗಳು ಈಗಾಗಲೇ ಬೆಂಬಲ ನೀಡಿವೆ. ಶಾಲೆ-ಕಾಲೇಜು, ಸಾರಿಗೆ ಸೇವೆ, ವ್ಯಾಪಾರ-ವಹಿವಾಟು ಸ್ಥಗಿತಗೊಳಿಸುವ ಮೂಲಕ ಬಂದ್ ಬೆಂಬಲಿಸಬೇಕು’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.
ಯುವ ರೈತರೇ ಇವರ ಟಾರ್ಗೆಟ್: ಉತ್ತರ ಕರ್ನಾಟಕದಲ್ಲಿ ಮದುವೆ ವಂಚನೆ.
ಬಾಗಲಕೋಟೆ : ಕನ್ಯೆ ಸಿಗದ ರೈತನಿಗೆ ಮೋಸದ ಮದುವೆ ಪ್ರಕರಣ ದಿನಕ್ಕೊಂದು ತಿರುವು ಪಡೆಯುತ್ತಿದೆ. ಯುವ ರೈತನಿಗೆ ಮೋಸ ಮಾಡಿದವಳು ಎರಡು ಮದುವೆ, ಎರಡು ಹೆಣ್ಮಕ್ಕಳು, ಅಷ್ಟೇ ಅಲ್ಲ ಇಬ್ಬರು ಮೊಮ್ಮಕ್ಕಳು ಹೊಂದಿದ ಅಜ್ಜಿ ಎಂದು ಗೊತ್ತಾಗಿದೆ. ಮೇಲಾಗಿ ಮೋಸ ಹೋದ…