ಬ್ರಿಸ್ಬೇನ್‌ನಲ್ಲಿ ನಡೆಯುತ್ತಿರುವ ಮೂರನೇ ಟೆಸ್ಟ್ ಪಂದ್ಯ, ಕಣಕ್ಕಿಳಿಯುತ್ತಿದ್ದಂತೆ ಭರ್ಜರಿ ದಾಖಲೆ ಬರೆದ ವಿರಾಟ್ ಕೊಹ್ಲಿ .

ಭಾರತ ಮತ್ತು ಆಸ್ಟ್ರೇಲಿಯಾ 3rd Test: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಶುರುವಾಗಿದೆ. ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಈ ಮ್ಯಾಚ್ನಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ಬೌಲಿಂಗ್ ಆಯ್ದುಕೊಂಡಿದೆ. ಅದರಂತೆ ಆಸ್ಟ್ರೇಲಿಯಾ ತಂಡ ಇನಿಂಗ್ಸ್ ಆರಂಭಿಸಿದೆ. ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ.

ಬ್ರಿಸ್ಬೇನ್ನಲ್ಲಿ ನಡೆಯುತ್ತಿರುವ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಟೆಸ್ಟ್ ಪಂದ್ಯದ ಮೂಲಕ ವಿರಾಟ್ ಕೊಹ್ಲಿ ವಿಶೇಷ ದಾಖಲೆ ಬರೆದಿದ್ದಾರೆ. ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡರು.
ಅದರಂತೆ ಫೀಲ್ಡಿಂಗ್ಗಾಗಿ ಮೈದಾನಕ್ಕಿಳಿದ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ 100 ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಬರೆದರು. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಆಟಗಾರ ಎನಿಸಿಕೊಂಡರು.
ಇದಕ್ಕೂ ಮುನ್ನ ಆಸ್ಟ್ರೇಲಿಯಾ ವಿರುದ್ಧ ನೂರು ಅಂತಾರಾಷ್ಟ್ರೀಯ ಪಂದ್ಯಗಳನ್ನಾಡಿದ ವಿಶೇಷ ದಾಖಲೆ ಸಚಿನ್ ತೆಂಡೂಲ್ಕರ್ ಅವರ ಹೆಸರಿನಲ್ಲಿತ್ತು. ಮಾಸ್ಟರ್ ಬ್ಲಾಸ್ಟರ್ ಆಸೀಸ್ ವಿರುದ್ಧ 110 ಪಂದ್ಯಗಳನ್ನಾಡಿ ಈ ದಾಖಲೆ ನಿರ್ಮಿಸಿದ್ದಾರೆ.

ಇದೀಗ ಆಸ್ಟ್ರೇಲಿಯಾ ವಿರುದ್ಧ 100ನೇ ಪಂದ್ಯದಲ್ಲಿ ಕಣಕ್ಕಿಳಿದು, ಸಚಿನ್ ತೆಂಡೂಲ್ಕರ್ ಹೆಸರಿನಲ್ಲಿದ್ದ ವಿಶೇಷ ದಾಖಲೆಯನ್ನು ಕಿಂಗ್ ಕೊಹ್ಲಿ ಸರಿಗಟ್ಟಿದ್ದಾರೆ. ಅಲ್ಲದೆ ಈ ಸಾಧನೆ ಮಾಡಿದ ವಿಶ್ವದ 2ನೇ ಕ್ರಿಕೆಟಿಗ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಅಂದಹಾಗೆ ಆಸ್ಟ್ರೇಲಿಯಾ ವಿರುದ್ಧ 110 ಪಂದ್ಯಗಳಲ್ಲಿ ಕಣಕ್ಕಿಳಿದಿರುವ ಸಚಿನ್ ತೆಂಡೂಲ್ಕರ್ 6,707 ರನ್ ಕಲೆಹಾಕಿದರೆ, 100* ಪಂದ್ಯಗಳನ್ನಾಡಿರುವ ವಿರಾಟ್ ಕೊಹ್ಲಿ 5,326 ರನ್ ಗಳಿಸಿದ್ದಾರೆ. ಇದೀಗ ಬ್ರಿಸ್ಬೇನ್ನಲ್ಲಿ 100ನೇ ಪಂದ್ಯವಾಡುತ್ತಿರುವ ಕಿಂಗ್ ಕೊಹ್ಲಿ ಕಡೆಯಿಂದ 100ರ ಇನಿಂಗ್ಸ್ ಅನ್ನು ನಿರೀಕ್ಷಿಸಬಹುದು.

Related Posts

ಶಿವರಾಜ್ಕುಮಾರ್ ಸರ್ಜರಿ ಬಳಿಕ ಫಿಟ್ ಆ್ಯಂಡ್ ಫೈನ್ : ಅಮೆರಿಕದಲ್ಲಿ ಕುಟುಂಬದ ಜೊತೆ ನಿಂತಿರುವ ಫೋಟೋ ವೈರಲ್

ಶಿವರಾಜ್ ಕುಮಾರ್ ಅವರು ಇತ್ತೀಚೆಗೆ ಮೂತ್ರಕೋಶದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮತ್ತು ಯಶಸ್ವಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಅವರು ಈಗ ಕ್ಯಾನ್ಸರ್ ಮುಕ್ತರಾಗಿದ್ದಾರೆ ಮತ್ತು ಅಮೆರಿಕಾದಲ್ಲಿ ತಮ್ಮ ಕುಟುಂಬದೊಂದಿಗೆ ಚೇತರಿಸಿಕೊಳ್ಳುತ್ತಿದ್ದಾರೆ. ಜನವರಿ 24 ರ ನಂತರ ಅವರು ಬೆಂಗಳೂರಿಗೆ ಮರಳಿ ವಿಶ್ರಾಂತಿ ಪಡೆಯಲಿದ್ದಾರೆ…

ಕೋವಿಡ್-19 ನಂತರ HMPV ಹೊಸ ವೈರಸ್ ಆತಂಕ…!!

ಕೋವಿಡ್ ವೈರಸ್ ಜಗತ್ತನ್ನು ಕಾಡಿದ ಐದು ವರ್ಷಗಳ ಬಳಿಕ ಇದೀಗ ಚೀನಾದಲ್ಲಿ ಮತ್ತೊಂದು ವೈರಸ್ ವೇಗವಾಗಿ ಹರಡುತ್ತಿರುವ ಕುರಿತು ವರದಿಯಾಗಿದೆ. ಅದುವೇ, ‘ಹ್ಯೂಮನ್ ಮೆಟಾಪ್ನ್ಯೂಮೋ ವೈರಸ್’ (human metapneumo virus or HMPV) ಈ ವರ್ಷ ಆರಂಭದಲ್ಲಿ ಚೀನಾದಲ್ಲಿ ಕಾಣಿಸಿಕೊಂಡಿರುವ ಹೊಸ…

Leave a Reply

Your email address will not be published. Required fields are marked *

You Missed

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ವಿರುದ್ಧ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರತಂಡದ ವಿರುದ್ಧ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ.

ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ವಿದ್ಯಾರ್ಥಿನಿಯ ಕೂದಲಿಗೆ ಬಿತ್ತು ಕತ್ತರಿ; ರೈಲು ನಿಲ್ದಾಣದಲ್ಲಿ ಕೂದಲು ಕಳ್ಳತನ!!

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ಕುಡಿದ ಮತ್ತಿನಲ್ಲಿ ಪತಿಗೆ ಆ್ಯ*ಡ್ ಎರಚಿದ ಪತ್ನಿ; ನೊಂದ ಪತಿ ಪೊಲೀಸರಿಗೆ ದೂರು.

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ ಪ್ರಪೋಸ್ !

ರಣವೀರ್ ಸಿಂಗ್ ಕನ್ನಡದಲ್ಲಿ ದೀಪಿಕಾಗೆ  ಪ್ರಪೋಸ್ !